ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

2 ದಿನ ರಾಜ್ಯಾದ್ಯಂತ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ (Karnataka Weather) ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲೂ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಸುರಿಯುವ ಲಕ್ಷಣಗಳಿವೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಹಾಸನ, ಮಂಡ್ಯ, ಮೈಸೂರು ಮತ್ತು ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 7ರಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ. ಇನ್ನು ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.

ದೇಶಾದ್ಯಂತ ಬಿಸಿ ಗಾಳಿ ಎಚ್ಚರಿಕೆ; ಹಲವು ರಾಜ್ಯಗಳಿಗೆ ಸೂಚನೆ ನೀಡಿದ ಹವಾಮಾನ ಇಲಾಖೆ

ಪಶ್ಚಿಮ ಕಡೆಗೆ ವಾಯಭಾರ ಕುಸಿತದ ಪ್ರಮಾಣ ಜಾಸ್ತಿಯಾದರೆ ಮುಂಗಾರು ಕರಾವಳಿ ಕಡೆಗೆ ಮೇ 20ರಿಂದ 25ರೊಳಗೆ ಪ್ರವೇಶ ಪಡೆಯುವ ಸಾಧ್ಯತೆ ಇದೆ. ಮೇ ತಿಂಗಳಲ್ಲಿ ಮಳೆಯ ಪ್ರಮಾಣ ಬಹಳಷ್ಟು ಕ್ಷೀಣಿಸಲಿದ್ದು, ಮುಂದೆ ಮುಂಗಾರು ಚುರುಕಾದರೆ ಮಾತ್ರ ಮೇ ತಿಂಗಳು ಮಳೆಗೆ ಮೀಸಲಾಗುವ ತಿಂಗಳಾಗುವ ಸಾಧ್ಯತೆಗಳು ದಟ್ಟವಾಗಿದೆ.

Vishakha Bhat Heggar

View all posts by this author