Karnataka Rains: ಆರೆಂಜ್ ಅಲರ್ಟ್; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!
Karnataka Weather: ಜುಲೈ 5ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.


ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗುವ (Karnataka Rains) ಮುನ್ಸೂಚನೆ ಸಿಕ್ಕಿದೆ. ಜುಲೈ 5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 6ರಂದು ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 7ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) July 4, 2025
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಇಂದು ಮತ್ತು ನಾಳೆ ಅಲ್ಲಲ್ಲಿ ಅತಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದಿಂದ ಸಾಧಾರಣ ಮಳೆ pic.twitter.com/oV9UgYsNJu
ಜುಲೈ 8ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಕೊಪ್ಪಳ, ಕಲಬುರ್ಗಿ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೋಲಾರ ಸೇರಿ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Health Tips: ವಿಟಮಿನ್ ಡಿ: ನಮಗೇಕೆ ಬೇಕು?
ಜುಲೈ 9ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಕೊಪ್ಪಳ, ಕಲಬುರ್ಗಿ, ಹಾವೇರಿ, ವಿಜಯಪುರ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.