Weather Forecast: ಇಂದಿನ ಹವಾಮಾನ; ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
Weather Forecast: ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 °C ಮತ್ತು 22° C ಆಗಿರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು: ಏಪ್ರಿಲ್ 10ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆ ಇದೆ. ಮೈಸೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 °C ಮತ್ತು 22° C ಆಗಿರಬಹುದು.
ಏ.11ರಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಏ.12ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.13ರಂದು ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗದಗ, ಧಾರವಾಡ, ಹಾವೇರಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಏ .14ರಂದು ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Bengaluru's second airport: ಬೆಂಗಳೂರಿನ 2ನೇ ಏರ್‌ಪೋರ್ಟ್; ಕೇಂದ್ರ ತಂಡದಿಂದ ನೆಲಮಂಗಲದಲ್ಲಿ ಸ್ಥಳ ವೀಕ್ಷಣೆ
ತಾಪಮಾನದ ಮುನ್ಸೂಚನೆ
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿಗಳಷ್ಟು ಏರಿಕೆಯಾಗಲಿದೆ. ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.