ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Channapatna News: 26 ವರ್ಷದ ಯುವತಿ ಜತೆ ಪ್ರೀತಿಗೆ ಮನೆಯವರ ಅಡ್ಡಿ: ಮನನೊಂದು 15 ವರ್ಷದ ಬಾಲಕ ಆತ್ಮಹತ್ಯೆ

ಬಿಡದಿ ಮೂಲದ 26 ವರ್ಷದ ಯುವತಿ ಜತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬಾಲಕ ಹಾಗೂ ಯುವತಿ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ನಂತರ ಯುವತಿ ಜತೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: 26 ವರ್ಷದ ಯುವತಿ ಜತೆ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣದ (Channapatna News) ರಾಜಾಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಬಿಡದಿ ಮೂಲದ ಬಾಲಕ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮೇ 4ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬಿಡದಿ ಮೂಲದ 26 ವರ್ಷದ ಯುವತಿ ಜತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ವಿಚಾರ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ನಿಮ್ಮಿಬ್ಬರಿಗೂ ವಯಸ್ಸಿನ ಅಂತರ ಇದೆ, ಇದನ್ನು ಇಲ್ಲಿಗೆ ನಿಲ್ಲಿಸುವಂತೆ ತಾಕೀತು ಮಾಡಿದ್ದರು. ಆದರೂ ಬಾಲಕ ಹಾಗೂ ಯುವತಿ ವಾಟ್ಸಾಪ್, ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಇದಾದ ಬಳಿಕ ಮನೆ ಬಿಟ್ಟು ಬಂದಿದ್ದ ಬಾಲಕ ಚನ್ನಪಟ್ಟಣದ ತನ್ನ ಸ್ನೇಹಿತನ ಮನೆಯಲ್ಲಿದ್ದ.

ಯುವತಿ ಜತೆ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ನೇಹಿತರು ಚನ್ನಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 4ರಂದು ಬಾಲಕ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆ ಮಗನ ಸಾವಿಗೆ ಯುವತಿಯೇ ಕಾರಣ ಎಂದು ಬಾಲಕನ ಪೋಷಕರು ದೂರು ನೀಡಿದ್ದು, ಈ ಸಂಬಂಧ ಯುವತಿ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಬ್ಬನ್‌ ಪಾರ್ಕ್‌ʼಗಳ ಮೀನುಗಳ ಮಾರಣ ಹೋಮ

ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ

ಬೆಂಗಳೂರು: ಹಾಡಹಗಲೇ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಮಾದನಾಯಕನಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಮೇ 6 ರಂದು ಈ ಘಟನೆ ನಡೆದಿದೆ. ಚಾಕು ಇರಿದ ಕೂಡಲೇ ಮಧ್ಯ ಪ್ರವೇಶಿಸಿದ ಸ್ಥಳೀಯರು, ದುಷ್ಕರ್ಮಿಯನ್ನು ಹಿಡಿದು ಥಳಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿ ಮೇಲೆ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿ ಏಕಾಏಕಿ ಚಾಕು ತೆಗೆದು ಹಲ್ಲೆ ಮಾಡಿದ್ದಾನೆ. ಯುವತಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸುತ್ತಲೇ ಯುವತಿ ಕೂಗಿಕೊಂಡಿದ್ದಾಳೆ. ಈ ವೇಳೆ ಯುವತಿ ಚೀರಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಆಕೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ದುಷ್ಕರ್ಮಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.