ರಾಮನಗರ: ಹೆಂಡತಿ ಕಿರುಕುಳ ತಾಳಲಾರದೆ ಸೆಲ್ಫಿ ವಿಡಿಯೊ ಮಾಡಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವುದು ರಾಮನಗರ ತಾಲೂಕಿನ (Ramanagara News) ಬಿಡದಿಯಲ್ಲಿ ನಡೆದಿದೆ. ಹಾರೋಹಳ್ಳಿ ತಾಲೂಕಿನ ಅಣ್ಣೆದೊಡ್ಡಿ ಗ್ರಾಮದ ನಿವಾಸಿ ರೇವಂತ್ ಕುಮಾರ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನನ್ನ ಹೆಂಡತಿ ತುಂಬಾ ಟಾರ್ಚರ್ ಕೊಡುತ್ತಿದ್ದಾಳೆ ಎಂದು ವಿಡಿಯೋದಲ್ಲಿ ಆರೋಪ ಮಾಡಿರುವ ರೇವಂತ್ ಕುಮಾರ್, ಸೋಮವಾರ ಬೆಳಗಿನ ಜಾವ ರೈಲಿಗೆ ಸಿಲುಕಿ ಆತ್ಯಹತ್ಯೆ ಮಾಡಿಕೊಂಡಿದ್ದಾನೆ.
ಬಿಡದಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ರೇವಂತ್ ಕುಮಾರ್ ಕೆಲಸ ಮಾಡುತ್ತಿದ್ದ. ಐದು ತಿಂಗಳ ಹಿಂದೆ ಮಲ್ಲಿಕಾ ಎಂಬುವರರನ್ನು ಮೃತ ರೇವಂತ್ ಕುಮಾರ್ ವಿವಾಹವಾಗಿದ್ದ. ಕೌಟುಂಬಿಕ ಕಲಹದಿಂದ ಬೇಸತ್ತ ರೇವಂತ್ ಕುಮಾರ್ ಸೋಮವಾರ ಸಂಜೆ ರೈಲಿಗೆ ತಲೆ ಕೊಟ್ಟು ಆತ್ಯಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದಾಗ, ರೇವಂತ್ ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ಪರಿಶೀಲಿಸಿದಾಗ, ರೇವಂತ್ ಆತ್ಮಹತ್ಯೆಗೆ ಕೆಲವೇ ಕ್ಷಣಗಳ ಮೊದಲು ರೆಕಾರ್ಡ್ ಮಾಡಿದ ವಿಡಿಯೊ ಲಭ್ಯವಾಗಿದೆ. ಈ ವಿಡಿಯೊದಲ್ಲಿ ಯುವಕ ಕಣ್ಣೀರಿನೊಂದಿಗೆ ತನ್ನ ನೋವಿನ ಕತೆಯನ್ನು ಹೇಳಿಕೊಂಡಿದ್ದಾನೆ.
ಸಾಯುವ ಮುನ್ನ ರೇವಂತ್ ಕುಮಾರ್ ಸೆಲ್ಫಿ ವಿಡಿಯೊ ಮಾಡಿದ್ದು, ನಾನು ಸಾಯಲು ಹೊರಟಿದ್ದೇನೆ. ನನ್ನ ಸಾವಿಗೆ ಹೆಂಡತಿ ಕಾರಣ. ಅವಳು ತುಂಬಾ ಕಷ್ಟ ಕೊಡುತ್ತಿದ್ದಾಳೆ. ಜೀವನ ಮಾಡಲು ಆಗದೆ, ಬದುಕಲು ಆಗುತ್ತಿಲ್ಲ ಎಂದು ಪತ್ನಿ ಮಲ್ಲಿಕಾ ವಿರುದ್ಧ ಆರೋಪ ಮಾಡಿದ್ದಾನೆ. ಈ ಸಂಬಂಧ ಬೆಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ
ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ಲಿವಿಂಗ್ ಟುಗೆದರ್‌ನಲ್ಲಿದ್ದ (Living togethar) ಜೋಡಿಯೊಂದು (Couple) ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Self Harming: ಆರ್‌ಜಿಕರ್ ಅತ್ಯಾಚಾರ ಪ್ರಕರಣದ ಅಪರಾಧಿಯ ಸೊಸೆ ನೇಣಿಗೆ ಶರಣು
ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾಕೇಶ್ ಪದೇ ಪದೆ ಕುಡಿದು ಬಂದು ಜಗಳ ಮಾಡುತ್ತಿದ್ದ. ಭಾನುವಾರವೂ ಜಗಳ ಮಾಡಿದ್ದ. ಸೋಮವಾರ ಬೆಳಗ್ಗೆ ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.