ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಇನ್ನು ಭೀಮಾ ನದಿ ಪ್ರವಾಹದಿಂದ ಈಗಾಗಲೇ ನೂರಾರು ಗ್ರಾಮಗಳು ಜಲಾವೃತವಾಗಿ, ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆಗಳು ನೀರುಪಾಲಾಗಿವೆ. ಇನ್ನು ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭೀಮಾ ನದಿಯು ಅತಿ ತೀವ್ರ ಪ್ರವಾಹ ಪರಿಸ್ಥಿತಿಯಲ್ಲಿ ಹರಿಯುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಭೀಮಾ ಮತ್ತು ಕಾಗಿನಾ ನದಿಗಳು, ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿ, ವಿಜಯಪುರ ಜಿಲ್ಲೆಯ ಡೋನಿ ನದಿ, ಬೀದರ್ ಜಿಲ್ಲೆಯ ಮಂಜೀರಾ ನದಿಯ ಪ್ರವಾಹ ಹೆಚ್ಚಾಗಿದೆ. ಹೀಗಾಗಿ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿರುವ ಜನರು ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.
ಇನ್ನು ಕಲಬುರಗಿ ಜಿಲ್ಲೆಯ ದೇವಣಗಾಂವನಲ್ಲಿ ಭೀಮಾ ನದಿ ಇಂದು ಬೆಳಗ್ಗೆ 9 ಗಂಟೆಯಿಂದ ತೀವ್ರ ಪ್ರವಾಹ ಪರಿಸ್ಥಿತಿಯಲ್ಲಿ ಹರಿಯುತ್ತಿದ್ದು, ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿರುವ ಜನರು ಜಾಗ್ರತೆ ವಹಿಸುವಂತೆ ತಿಳಿಸಲಾಗಿದೆ.
ನಾಳೆ ಎಲ್ಲೆಲ್ಲಿ ಮಳೆಯಾಗಲಿದೆ?
ಇನ್ನು ಸೆ.29ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20 ° C ಆಗಿರಬಹುದು.
ಇನ್ನು ಕರಾವಳಿಯಲ್ಲಿ ಸೆ.29ರವರೆಗೆ ನಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಸೆ. 30ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅ.01ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅ.2ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Bhima River Floods: ಭೀಮಾ ನದಿ ಪ್ರವಾಹಕ್ಕೆ ಗಿರಿನಾಡು ಯಾದಗಿರಿ ತತ್ತರ; ಹಲವು ಬಡಾವಣೆಗಳ ಮನೆಗಳಿಗೆ ನುಗ್ಗಿದ ನೀರು!
ಅ.03 ಮತ್ತು 4ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.