ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Yashwant Sardeshpande: ಖ್ಯಾತ ಹಾಸ್ಯ ರಂಗಕರ್ಮಿ, ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಖ್ಯಾತ ಹಾಸ್ಯ ರಂಗಕರ್ಮಿ,ಸಂಭಾಷಣೆಕಾರ, ಹಿರಿಯ ನಟ ಯಶವಂತ ಸರದೇಶಪಾಂಡೆ ಇಂದು ವಿಧಿವಶರಾಗಿದ್ದಾರೆ.

Yashwant Sardeshpande: ಖ್ಯಾತ ಹಾಸ್ಯ ರಂಗಕರ್ಮಿ, ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

-

Rakshita Karkera Rakshita Karkera Sep 29, 2025 12:26 PM

ಬೆಂಗಳೂರು: ಖ್ಯಾತ ಹಾಸ್ಯ ರಂಗಕರ್ಮಿ,ಸಂಭಾಷಣೆಕಾರ, ಹಿರಿಯ ನಟ ಯಶವಂತ ಸರದೇಶಪಾಂಡೆ ಇಂದು ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಮಾಲತಿ, ಪುತ್ರಿ ದೋಸ್ತಿಯನ್ನು ಅಗಲಿದ್ದಾರೆ. ಅವರಿಗೆ 61ವರ್ಷ ವಯಸ್ಸಾಗಿತ್ತು.

ರಂಗ ಕಲಾವಿದ ಯಶವಂತ ಸರದೇಶಪಾಂಡೆ ಅವರು ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ(1965) ಜನಿಸಿದರು. ತಂದೆ ಶ್ರೀಧರರಾವ್ ಸರದೇಶಪಾಂಡೆ, ತಾಯಿ ಕಲ್ಪನಾದೇವಿ. ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪದವೀಧರರು. ನ್ಯೂಯಾರ್ಕ್‌ ವಿಶ್ವವಿದ್ಯಾಯದಿಂದ ನಾಟಕ ರಚನೆ, ಚಲನಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದಿದ್ದರು.

ಜನಪ್ರಿಯ ನಾಟಕಗಳು

ಅಂಧಯುಗ, ಇನ್‌ಸ್ಪೆಕ್ಟರ್‌ ಜನರಲ್, ಮಿಡ್‌ಸಮರ್‌ ನೈಟ್ಸ್‌ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳ ನಿರ್ದೇಶನ. ರಂಗವರ್ತುಲ, ಬೇಂದ್ರೆ ರಂಗಾವಳಿಯ ಮುಖಾಂತರ ಬೇಂದ್ರೆಯವರ ಎಲ್ಲ ನಾಟಕಗಳನ್ನೂ ರಂಗಕ್ಕೆ ತಂದ ಕೀರ್ತಿ ಇವರದ್ದು.

ಸಿನಿಮಾದಲ್ಲೂ ಛಾಪು ಮೂಡಿಸಿದ್ದ ದೇಶಪಾಂಡೆ

ಯದ್ವಾ-ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳ ನಟ, ಧಾರಾವಾಹಿಗಳ ಸಂಭಾಷಣಾಕಾರ, ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಚಲನಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಸಹಿ ರೀ ಸಹಿ (ಮೂಲ:ಮರಾಠಿ) ಕಾಲಚಕ್ರ ಐಡಿಯಾ ಮಾಡ್ಯಾರ ಎಂಬ ಚಲನಚಿತ್ರ ನಿರ್ಮಾಣ, ರಾಮ ಶ್ಯಾಮ ಭಾಮ ಎಂಬ ಚಲನಚಿತ್ರಕ್ಕೆ ಸಂಭಾಷಣೆ ಬರೆದಿದ್ದು ಕಮಲಹಾಸನ್ ರ ಪಾತ್ರದಲ್ಲಿ ಉತ್ತರಕರ್ನಾಟಕದ ಆಡುಭಾಷೆಯನ್ನು ಆಡಿಸಿದ್ದಾರೆ.

ಸಂದ ಪ್ರಶಸ್ತಿಗಳು

ಉತ್ತಮ ಸಂಭಾಷಣೆ ರಚನೆಗಾಗಿ ಸನ್‌ಫೀಸ್ಟ್ ಉದಯ ಟಿವಿ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಮಯೂರ ಪ್ರಶಸ್ತಿ, ನಗೆ ಸರದಾರ ಪ್ರಶಸ್ತಿ ಮುಂತಾದ ಪ್ರಶಸ್ತಿ ಗೌರವಗಳು ಸಂದಿವೆ.