ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Teachers Recruitment: ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಆಡಳಿತಾತ್ಮಕ ಕಾರಣಗಳಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಮೇ 26ರಂದು ಹೊರಡಿಸಲಾಗಿದ್ದ ಪರಿಷ್ಕೃತ ವೇಳಾಪಟ್ಟಿಯನ್ನು ಮರು ಪರಿಷ್ಕರಿಸಲಾಗಿದೆ.

ಶಿಕ್ಷಕರ ನೇಮಕಾತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Prabhakara R Prabhakara R Aug 8, 2025 6:16 PM

ಬೆಂಗಳೂರು: 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ (Specified Post) ಲಿಖಿತ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ (Specified Post) ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು ಬಗ್ಗೆ ಮಾರ್ಗಸೂಚಿ ಸಹಿತ ವೇಳಾಪಟ್ಟಿಯನ್ನು ಅಧಿಸೂಚಿಸಲಾಗಿತ್ತು. ಆದರೆ ಆಡಳಿತಾತ್ಮಕ ಕಾರಣಗಳಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಮೇ 26ರಂದು ಹೊರಡಿಸಲಾಗಿದ್ದ ಪರಿಷ್ಕೃತ ವೇಳಾಪಟ್ಟಿಯನ್ನು ಮರು ಪರಿಷ್ಕರಿಸಲಾಗಿದೆ. ಉಳಿದಂತೆ ಈ ಹಿಂದೆ ಇದ್ದ ಮಾರ್ಗಸೂಚಿ ಅಂಶಗಳು ಮತ್ತು ಸೂಚನೆಗಳು ಯಥಾವತ್ತಾಗಿ ಮುಂದುವರಿಯುತ್ತವೆ ಎಂದು ಇಲಾಖೆ ತಿಳಿಸಿದೆ.

ಸರ್ಕಾರಿ ಪ್ರಾಥಮಿಕ/ ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಹುದ್ದೆಗಳಿಗೆ. ಈ ಹಿಂದಿನ ವೇಳಾಪಟ್ಟಿಯ ಕ್ರಮ ಸಂಖ್ಯೆ 1 ರಿಂದ 20 ರ ವರೆಗಿನ ಎಲ್ಲಾ ಪ್ರಕ್ರಿಯೆಗಳು ಮುಗಿದಿವೆ.

21. ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರ ವೃಂದದ ಪರಿಷ್ಕೃತ ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟಣೆ: ಆಗಸ್ಟ್ 13

22. ಪ್ರಕಟಿತ ತಾತ್ಕಾಲಿಕ ಅರ್ಹತಾ ಪಟ್ಟಿ ಪರಿಶೀಲನೆ. ಆಕ್ಷೇಪಣೆಗಳಿದ್ದಲ್ಲಿ ಪರಿಶೀಲಿಸಿ ಅಂತಿಮಗೊಳಿಸಿ ಇಂದೀಕರಿಸುವುದು: ಆಗಸ್ಟ್14

23. ಅಂತಿಮ ಅರ್ಹತಾ ಜೇಷ್ಟತಾಪಟ್ಟಿ ಪ್ರಕಟ: ಆಗಸ್ಟ್‌ 25

24. ಎಲ್ಲಾ ವೃಂದದ ಖಾಲಿ ಹುದ್ದೆಗಳ ಪ್ರಕಟಣೆ: ಆಗಸ್ಟ್ 30

25. ಪ್ರಾಥಮಿಕ, ಪ್ರೌಢ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಗ್ರೂಪ್-ಬಿ ವೃಂದದ ಅಧಿಸೂಚಿತ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ನಿಗದಿಪಡಿಸಿದ ಹುದ್ದೆಗಳಿಗೆ ಒಳಬರುವ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್:

  • ಪ್ರಾಥಮಿಕ ವಿಭಾಗದ ವೃಂದಗಳು: ಸೆಪ್ಟೆಂಬರ್ 02
  • ಪ್ರೌಢ ವಿಭಾಗದ ವೃಂದಗಳು: ಸೆಪ್ಟೆಂಬರ್ 03 ಬೆಳಗ್ಗೆ
  • ಪ್ರೌಢಶಾಲಾ ಮುಖ್ಯಶಿಕ್ಷಕರು/ಗ್ರೂಪ್-ಬಿ ವೃಂದಗಳು: ಸೆಪ್ಟೆಂಬರ್ 03 ಮಧ್ಯಾಹ್ನ

ಲಿಖಿತ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Specified Post Time table_Revised_08-08-2025

_teacher recruitment exam

ಈ ಸುದ್ದಿಯನ್ನೂ ಓದಿ | SBI Recruitment 2025: ಪದವಿ ಹೊಂದಿದವರಿಗೆ ಗುಡ್‌ನ್ಯೂಸ್‌; ಬರೋಬ್ಬರಿ 5,180 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ