ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RSS: ಆರೆಸ್ಸೆಸ್‌ ಪಥಸಂಚಲನದಲ್ಲಿ ಭಾಗವಹಿಸಿದ ಪಿಡಿಒ ಅಮಾನತು

Raichur news: ಪ್ರತಿಯೊಬ್ಬ ಸರ್ಕಾರಿ ನೌಕರನು ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು ಮತ್ತು ರಾಜಕೀಯವಾಗಿ ತಟಸ್ಥವಾಗಿರಬೇಕು ಹಾಗೂ ತನ್ನ ಪದೀಯ ಕರ್ತವ್ಯ ನಿರ್ವಹಣೆಯ ಮೇಲೆ ಪ್ರಭಾವ ಬೀರಬಹುದಾದ ಯಾರೇ ವ್ಯಕ್ತಿ ಅಥವಾ ಸಂಸ್ಥೆಯ ಯಾವುದೇ ಹಣಕಾಸು ಅಥವಾ ಇತರೆ ಆಮಿಷಗಳಿಗೆ ಒಳಗಾಗತಕ್ಕದ್ದಲ್ಲವೆಂಬ ನಿಯಮ ಮೀರಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಗಿದೆ.

ಆರೆಸ್ಸೆಸ್‌ ಪಥಸಂಚಲನದಲ್ಲಿ ಭಾಗವಹಿಸಿದ ಪಿಡಿಒ ಅಮಾನತು

-

ಹರೀಶ್‌ ಕೇರ ಹರೀಶ್‌ ಕೇರ Oct 18, 2025 7:06 AM

ರಾಯಚೂರು: ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊರಟಿರುವ ಸರ್ಕಾರ, ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಆ ಬೆನ್ನಲ್ಲೇ RSS ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ ರಾಯಚೂರು (Raichur news) ಜಿಲ್ಲೆ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓರನ್ನು ಅಮಾನತು (suspend) ಮಾಡಲಾಗಿದೆ. ಪಿಡಿಓ ಮತ್ತು ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್‌ರ ಆಪ್ತ ಸಹಾಯಕನಾಗಿದ್ದ ಪ್ರವೀಣ್​ ಕುಮಾರ್​ ಕೆ.ಪಿ.ಯನ್ನು ಅಮಾನತುಗೊಳಿಸಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಆದೇಶಿಸಿದ್ದಾರೆ.

ಆದೇಶ ಪ್ರತಿಯಲ್ಲಿ ಏನಿದೆ?

ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ, ಕೈನಲ್ಲಿ ದೊಣ್ಣೆ ಹಿಡಿದ ಗಣವೇಷಧಾರಿಯಾಗಿ ಪ್ರವೀಣ್​ ಭಾಗವಹಿಸಿದ್ದರು. ಇದರಿಂದಾಗಿ ಪ್ರವೀಣ್​, ಕರ್ನಾಟಕ ಸಿವಿಲ್ ಸೇವಾ (ನಡತೆ) ನಿಯಮಗಳು 2021ರ ನಿಯಮ 3ರಲ್ಲಿ ಪ್ರತಿಯೊಬ್ಬ ಸರ್ಕಾರಿ ನೌಕರನು ಎಲ್ಲಾ ಕಾಲದಲ್ಲಿಯೂ ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು ಮತ್ತು ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು ಹಾಗೂ ಸರ್ಕಾರಿ ನೌಕರನಿಗೆ ತಕ್ಕದಲ್ಲದನ್ನು ಮಾಡಬಾರದೆಂಬ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Ban on RSS activities: ಆರ್‌ಎಸ್ಎಸ್‌ಗೆ ಅಂಕುಶ; ತಮಿಳುನಾಡು ಮಾದರಿ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಪ್ರತಿಯೊಬ್ಬ ಸರ್ಕಾರಿ ನೌಕರನು ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು ಮತ್ತು ರಾಜಕೀಯವಾಗಿ ತಟಸ್ಥವಾಗಿರಬೇಕು ಹಾಗೂ ತನ್ನ ಪದೀಯ ಕರ್ತವ್ಯ ನಿರ್ವಹಣೆಯ ಮೇಲೆ ಪ್ರಭಾವ ಬೀರಬಹುದಾದ ಯಾರೇ ವ್ಯಕ್ತಿ ಅಥವಾ ಸಂಸ್ಥೆಯ ಯಾವುದೇ ಹಣಕಾಸು ಅಥವಾ ಇತರೆ ಆಮಿಷಗಳಿಗೆ ಒಳಗಾಗತಕ್ಕದ್ದಲ್ಲವೆಂಬ ನಿಯಮ ಮೀರಿದ್ದಾರೆ. ಹೀಗಾಗಿ ಪ್ರವೀಣ್​ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಕೇಳಿ ಬಂದಿರುವ ಆರೋಪಗಳ ಬಗ್ಗೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಡಾ.ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.