ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Road Accident: ಕಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ಯುವಕರ ದುರ್ಮರಣ

ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ದರ್ಶನ್ ಕೂಡ ಕೋಳಿ ಸಪ್ಲೈ ಮಾಡುವ ವಾಹನದ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಸ್ನೇಹಿತನ ರೂಂಗೆಂದು ಮೂವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಮೃತ ಗಗನ್‌, ದರ್ಶನ್

ನೆಲಮಂಗಲ, ಜ.05: ಕಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ (Road Accident) ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನೆಲಮಂಗಲ ಸಮೀಪದ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತ (death) ದುರ್ದೈವಿಗಳು.

ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ದರ್ಶನ್ ಕೂಡ ಕೋಳಿ ಸಪ್ಲೈ ಮಾಡುವ ವಾಹನದ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಸ್ನೇಹಿತನ ರೂಂಗೆಂದು ಮೂವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವಕ ಹಿಂದೆ ಕುಳಿತಿದ್ದರಿಂದ ಸಾವಿನಿಂದ ಪಾರಾಗಿದ್ದಾನೆ. ಸದ್ಯ ಇಬ್ಬರ ಮೃತದೇಹವನ್ನು ಮಾದನಾಯಕನಹಳ್ಳಿ ಪೊಲೀಸರು ನೆಲಮಂಗಲ ಶವಾಗಾರಕ್ಕೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

ಚಳಿಗೆಂದು ಹೊದ್ದ ಕಂಬಳಿಯಿಂದಾಗಿ ನವಜಾತ ಶಿಶು ಸಾವು

ಮನೆಯಲ್ಲಿ ಮಲಗಿದ್ದ ತಾಯಿ- ಮಗು ಕೆರೆಯಲ್ಲಿ ಶವವಾಗಿ ಪತ್ತೆ

ಮಂಗಳೂರು: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ (Bodies found) ಪತ್ತೆಯಾಗಿರುವುದು ಸುಳ್ಯದ (Sullia) ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನ್ವಿ (3) ಮೃತರು ಎಂದು ಗುರುತಿಸಲಾಗಿದೆ.

ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದರು. ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ.

ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದವರಾದ ಮಧುಶ್ರೀ ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಶವವಾಗಿ ಪತ್ತೆ; ಮಾಜಿ ಗೆಳೆಯನೇ ಹತ್ಯೆ ಮಾಡಿ ಭಾರತಕ್ಕೆ ಪರಾರಿಯಾಗಿರುವ ಶಂಕೆ

ಮಧುಶ್ರೀ ಅವರು ಕೆರೆಗೆ ಹಾರುವ ಮೊದಲು ಮಗುವಿನೊಂದಿಗೆ ಸಾಯಲು ನಿರ್ಧರಿಸಿ ತನ್ನ ಸೊಂಟಕ್ಕೆ ಮಗುವನ್ನು ಬಟ್ಟೆಯಿಂದ ಕಟ್ಟಿಕೊಂಡು ಕೆರೆಗೆ ಹಾರಿದ್ದಾರೆ. ಕೆರೆಯಲ್ಲಿ ಮೃತದೇಹ ಪತ್ತೆಯಾದಾಗ ಮಗು ತಾಯಿಯನ್ನು ಅಪ್ಪಿಕೊಂಡ ರೀತಿಯಲ್ಲೇ ಪತ್ತೆಯಾಗಿದೆ. ಮಗಳ ಸಾವಿನಲ್ಲಿ ಅನುಮಾನ ಇದೆ ಎಂದು ಮಧುಶ್ರೀ ತಾಯಿ ರತ್ನಾವತಿ ದೂರು ನೀಡಿದ್ದಾರೆ. ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಆತ್ಮಹತ್ಯೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹರೀಶ್‌ ಕೇರ

View all posts by this author