ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Cabinet meeting: ವಿವಿಗಳಲ್ಲಿ ರೋಹಿತ್‌ ವೇಮುಲ ಕಾಯ್ದೆ ಜಾರಿ, ಬೆಂಗಳೂರಿನಲ್ಲಿ 11 ಎಲಿವೇಟೆಡ್‌ ಕಾರಿಡಾರ್:‌ ಸಂಪುಟ ನಿರ್ಣಯ

ಶಿಕ್ಷಣದಲ್ಲಿನ ತಾರತಮ್ಯ ಹಾಗೂ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ 'ಕರ್ನಾಟಕ ರೋಹಿತ್ ವೇಮುಲ (ಬಹಿಷ್ಕಾರ ಅಥವಾ ಅನ್ಯಾಯದ ತಾರತಮ್ಯ ತಡೆ ಮತ್ತು ಘನತೆಯ ಹಕ್ಕು) ವಿಧೇಯಕ' ಮಂಡನೆಗೆ ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆ

ಬೆಂಗಳೂರು, ಏ.17: ಬೆಂಗಳೂರಿನಲ್ಲಿ (Bengaluru) ಹೊಸ 11 ಎಲಿವೇಟೆಡ್‌ ಕಾರಿಡಾರ್‌ (Elevated corridor) ನಿರ್ಮಾಣ, ವಿಶ್ವವಿದ್ಯಾಲಯಗಳಲ್ಲಿ ರೋಹಿತ್‌ ವೇಮುಲ ಕಾಯ್ದೆ (Rohit Vemula Act) ಜಾರಿ ಸೇರಿದಂತೆ ಕರ್ನಾಟಕ ರಾಜ್ಯ ಸಚಿವ ಸಂಪುಟ (Karnataka Cabinet meeting) ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸಭೆಯ ಬಳಿಕ ಕಾನೂನು ಸಚಿವ ಎಚ್‌ಕೆ ಪಾಟೀಲ್ ಮಾಹಿತಿ ಹಂಚಿಕೊಂಡರು. ಪ್ರಮುಖವಾಗಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣ ವ್ಯವಸ್ಥೆಯಲ್ಲಿ ತಾರತಮ್ಯ ತಡೆಗಟ್ಟುವ ಮಸೂದೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ, ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಸುಮಾರು 75.6 ಕಿ.ಮೀ ಉದ್ದದ 11 ಎಲಿವೇಟೆಡ್ ಕಾರಿಡಾರ್‌ಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಬೃಹತ್ ಯೋಜನೆಗೆ 13,262 ಕೋಟಿ ರೂಪಾಯಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಐಓಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಫ್ಲೈಓವರ್ ಮತ್ತು ಬೈಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಹೆಚ್ಚುವರಿ 2-ಲೇನ್ ROB ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಶೇ. 5% ಟೆಂಡರ್ ಪ್ರೀಮಿಯಂ ಸೇರಿ ಒಟ್ಟು 436.44 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದನೆ

ಬೆಂಗಳೂರು ಜಲಮಂಡಳಿಯ 5 ತ್ಯಾಜ್ಯನೀರು ಸಂಸ್ಕರಣಾ ಘಟಕಗಳಲ್ಲಿ ಉತ್ಪತ್ತಿಯಾಗುವ ಕೆಸರು ಬಳಸಿ 'ಬಯೋಗ್ಯಾಸ್ ಪ್ಯೂರಿಫಿಕೇಶನ್ ಮತ್ತು ಕಂಪ್ರೆಷನ್ ಸಿಸ್ಟಮ್' ಸ್ಥಾಪಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅನುಮೋದನೆ ನೀಡಲಾಗಿದೆ.

ರೋಹಿತ್ ವೇಮುಲ ಕಾಯ್ದೆ ಜಾರಿಗೆ ಒಪ್ಪಿಗೆ

ಶಿಕ್ಷಣದಲ್ಲಿನ ತಾರತಮ್ಯ ಹಾಗೂ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ 'ಕರ್ನಾಟಕ ರೋಹಿತ್ ವೇಮುಲ (ಬಹಿಷ್ಕಾರ ಅಥವಾ ಅನ್ಯಾಯದ ತಾರತಮ್ಯ ತಡೆ ಮತ್ತು ಘನತೆಯ ಹಕ್ಕು) ವಿಧೇಯಕ' ಮಂಡನೆಗೆ ಸಚಿವ ಸಂಪುಟವು ಅನುಮೋದನೆ ನೀಡಿದೆ.

Cabinet Reshuffle: ದೆಹಲಿಗೆ ಶಿಫ್ಟ್‌ ಆದ ರಾಜ್ಯ ರಾಜಕೀಯ, ಹೈಕಮಾಂಡ್‌ನಿಂದ ಸಂಪುಟ ಪುನಾರಚನೆ ಭರವಸೆ!

ಆಸ್ತಿ ತೆರಿಗೆಯಿಂದ ವಿನಾಯಿತಿ

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ರಾಜಭವನ, ಕುಮಾರಕೃಪಾ ಅತಿಥಿಗೃಹ, ಕಂಠೀರವ ಕ್ರೀಡಾಂಗಣ ಹಾಗೂ ಕೋರಮಂಗಲ ಕ್ರೀಡಾಂಗಣಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ (ಇದರಿಂದ ಬಿಬಿಎಂಪಿಗೆ ಬರಬೇಕಿದ್ದ ಸುಮಾರು 81 ಕೋಟಿ ರೂ. ವಿನಾಯಿತಿ ನೀಡಿದಂತಾಗಿದೆ).

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ಹೊಸ ಭವನ

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ನೂತನ ಕೇಂದ್ರ ಕಚೇರಿ ಆಡಳಿತ ಭವನ ನಿರ್ಮಾಣಕ್ಕಾಗಿ 20 ಕೋಟಿ ರೂ. ಗಳ ಅಂದಾಜು ಮೊತ್ತದ ಕಾಮಗಾರಿಗೆ ಒಪ್ಪಿಗೆ ನೀಡಲಾಗಿದೆ.

ಕಾರವಾರ ವಿಮಾನ ನಿಲ್ದಾಣ ಎಎಐ ಪಾಲು

ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿದ್ದ ಕಾರವಾರ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಎಎಐ) ವಹಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ.

Cabinet Meeting: ಬೆಂಗಳೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ, ಮೈಶುಗರ್ ಕಾರ್ಖಾನೆ ಆಧುನೀಕರಣಕ್ಕೆ ಸಚಿವ ಸಂಪುಟ ಒಪ್ಪಿಗೆ

ಅಧಿಕಾರಿಗಳಿಗೆ ದಂಡನೆ

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶದ ಅನ್ವಯ, ಪುರಾತತ್ವ ಸಂರಕ್ಷಣಾ ಇಲಾಖೆಯ ನಿವೃತ್ತ ಹಾಗೂ ಹಾಲಿ ಇಂಜಿನಿಯರ್‌ಗಳಾದ ಎಸ್.ಎಂ. ಪೂಜಾರ್, ಎನ್.ಡಿ. ಮೋಹನ್ ಕುಮಾರ್ ಮತ್ತು ವಾಗೀಶ್ ಎಂಬುವವರಿಗೆ ಪರಿಷ್ಕೃತ ದಂಡನೆ ವಿಧಿಸಲು ನಿರ್ಧರಿಸಲಾಗಿದೆ.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅಥವಾ ಒಳಮೀಸಲಾತಿ ಟೆಕ್ನಿಕಲ್ ಕಮಿಟಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವರು ಎಚ್‌ಕೆ ಪಾಟೀಲ್‌ ಸ್ಪಷ್ಟಪಡಿಸಿದರು. ಹಾಗೆಯೇ ಸರ್ಕಾರದಲ್ಲಿ ಖಾಲಿ ಇರುವ 56,000 ಹುದ್ದೆಗಳ ಭರ್ತಿ ವಿಚಾರವಾಗಿ ಸರ್ಕಾರ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಹರೀಶ್‌ ಕೇರ

View all posts by this author