ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narahari passes away: ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ. ನರಹರಿ ನಿಧನ

Narahari: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು.

ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ. ನರಹರಿ ನಿಧನ

-

ಹರೀಶ್‌ ಕೇರ ಹರೀಶ್‌ ಕೇರ Oct 8, 2025 9:57 AM

ಬೆಂಗಳೂರು: ಆರ್‌ಎಸ್‌ಎಸ್ (RSS) ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ (Narahari passes away) ವಿಧಿವಶರಾದರು. ಅವರು ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಸಂಘದ ಪ್ರಮುಖರು, ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ. ಬಿಜೆಪಿ ನಾಯಕರು ಮೃತರ ಕುಟುಂಬದವರನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ. ಪಾರ್ಥಿವ ಶರೀರವನ್ನು ಶ್ರೀರಾಂಪುರದ ಮನೆಗೆ ತರಲಾಗಿದೆ. ಇಂದು (ಬುಧವಾರ ಅಕ್ಟೋಬರ್ 08) ಮಧ್ಯಾಹ್ನ 2.30ರ ವರೆಗೆ ಸ್ವಗೃಹದಲ್ಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಪರಾಹ್ನ 3.00 ಗಂಟೆಗೆ ಹರಿಶ್ಚಂದ್ರ ಘಾಟ್ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: Mogalli Ganesh: ಕಥೆಗಾರ, ವಿಮರ್ಶಕ ಮೊಗಳ್ಳಿ ಗಣೇಶ್‌ ಇನ್ನಿಲ್ಲ

ಮಾಜಿ ಪ್ರಧಾನಿ ಆರೋಗ್ಯ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ (HD Deve Gowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ದೇವೇಗೌಡರ ಆರೋಗ್ಯದ ಬಗ್ಗೆ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಚ್‌ಡಿ ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆ ಎದುರಾಗಿದೆ. ಇಳಿಯಸ್ಸಿನಲ್ಲೂ ದೊಡ್ಡಗೌಡರು ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಸಭೆ ಸದಸ್ಯರಾಗಿದ್ದಾರೆ. ಇತ್ತೀಚೆಗೆ ಹಾಸನದ ಗಣೇಶ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ದೇವೇಗೌಡ ಭೇಟಿಯಾಗಿದ್ದರು.