ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

B S Yediyurappa: ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟೀಫಿಕೇಷನ್ ಕೇಸ್‌ ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

B S Yediyurappa: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸುಪ್ರೀಂ‌ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸುವ ನಿರೀಕ್ಷೆ ಇತ್ತು. ಆದರೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಬಿಎಸ್‌ವೈ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣ ಸುಪ್ರೀಂ ವಿಸ್ತೃತ ಪೀಠಕ್ಕೆ

Profile Prabhakara R Apr 21, 2025 2:01 PM

ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾ.ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಪೀಠ ಅವರಿಂದ ಪೀಠದಿಂದ ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಇಂದು ತೀರ್ಪು ಪ್ರಕಟಿಸುವ ನಿರೀಕ್ಷೆ ಇತ್ತು. ಆದರೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಕೋರ್ಟ್‌ ತೀರ್ಪು ನೀಡಿದೆ. ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ತಾವು ನೀಡಿರುವ ದೂರನ್ನು ಪುನಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ 5 ಜನವರಿ 2021 ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದೀವಾಲಾ ಮತ್ತು ನ್ಯಾ. ಮನೋಜ್‌ ಮಿಶ್ರಾ ಅವರಿದ್ದ ನ್ಯಾಯಪೀಠ ಏಪ್ರಿಲ್‌ 4ರಂದು ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದರು.

ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಮತ್ತು ‘ಕರ್ನಾಟಕ ಉದ್ಯೋಗ ಮಿತ್ರ’ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಕೆ.ಎಸ್‌ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ಸಂಚು ಆರೋಪ ಕೇಳಿಬಂದಿತ್ತು. ದೇವನಹಳ್ಳಿಯಲ್ಲಿ 2011ರಲ್ಲಿ26 ಎಕರೆ ಡಿನೋಟಿಫಿಕೇಷನ್‌ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ 2021ರ ಜನವರಿ 27ರಂದು ಆದೇಶ ನೀಡಿತ್ತು.

ದೂರುದಾರರು ಸಲ್ಲಿಸಿದ್ದ ಹಿಂದಿನ ದೂರನ್ನು ಪೂರ್ವಾನುಮತಿಯಿಲ್ಲದ ಕಾರಣಕ್ಕೆ ರದ್ದುಗೊಳಿಸಿದ್ದನ್ನು ಪ್ರಸ್ತಾಪಿಸಿದ ನ್ಯಾಯಪೀಠ, ಆರೋಪಿಯು ತನ್ನ ಸ್ಥಾನದಿಂದ ಕೆಳಗಿಳಿದ ನಂತರ ಹೊಸ ದೂರು ದಾಖಲಿಸುವುದಕ್ಕೆ ಅಡ್ಡಿಯಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿತ್ತು. ಇದೀಗ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.