ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸುಪ್ರೀಂ ಕೋರ್ಟ್ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠ: ಸಿಎಂ ಸಿದ್ದರಾಮಯ್ಯ

CM Siddaramaiah: ತಮ್ಮ ಪಕ್ಷವನ್ನು ಜನ ತಿರಸ್ಕರಿಸಿದ ರಾಜ್ಯಗಳಲ್ಲಿ ತಮ್ಮ ಆಣತಿಯನ್ನು ಪಾಲಿಸುವ ರಾಜ್ಯಪಾಲರನ್ನು ನೇಮಿಸಿ, ಅವರ ಮೂಲಕ ಪರೋಕ್ಷವಾಗಿ ಆಡಳಿತವನ್ನು ನಿಯಂತ್ರಿಸಲು ಮೋದಿ ಸರ್ಕಾರ ಮಾಡುತ್ತಿರುವ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠ: ಸಿಎಂ

Profile Prabhakara R Apr 9, 2025 7:18 PM

ಬೆಂಗಳೂರು: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು, ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ. ಈ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿಯನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿರುವುದರಿಂದ ಇಲ್ಲಿಯ ವರೆಗಿನ ಗೊಂದಲಗಳು ನಿವಾರಣೆಯಾಗಿದೆ.

ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಸಂವಿಧಾನದ ಆಶಯ ಮತ್ತು ಸಾಂವಿಧಾನಿಕ ಹುದ್ದೆಯ ಘನತೆ-ಗೌರವವನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ವರ್ತಿಸುತ್ತಿರುವ ಆರೋಪಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕೇಳಿ ಬರತೊಡಗಿವೆ. ಇದರಿಂದಾಗಿ ಗೌರವಾನ್ವಿತ ರಾಜ್ಯಪಾಲರ ಹುದ್ದೆ ಜನತೆಯ ವಿಶ್ವಾಸವನ್ನು ಕಳೆದುಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.

ತಮ್ಮ ಪಕ್ಷವನ್ನು ಜನ ತಿರಸ್ಕರಿಸಿದ ರಾಜ್ಯಗಳಲ್ಲಿ ತಮ್ಮ ಆಣತಿಯನ್ನು ಪಾಲಿಸುವ ರಾಜ್ಯಪಾಲರನ್ನು ನೇಮಿಸಿ ಅವರ ಮೂಲಕ ಪರೋಕ್ಷವಾಗಿ ಆಡಳಿತವನ್ನು ನಿಯಂತ್ರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುತ್ತಿರುವ ದ್ರೋಹವಾಗಿದೆ.

ಈ ಸುದ್ದಿಯನ್ನೂ ಓದಿ | Viral Video: ಮಲ್ಲಿಕಾರ್ಜುನ ಖರ್ಗೆಗೆ ಪ್ರತ್ಯೇಕ ಕುರ್ಚಿ ಇಟ್ಟು ಟೀಕೆಗೆ ಗುರಿಯಾದ ಕಾಂಗ್ರೆಸ್

ಕರ್ನಾಟಕದಲ್ಲಿ ಕೂಡ ವಿಧಾನಮಂಡಲ ಅಂಗೀಕರಿಸಿದ ಕೆಲವು ಮಸೂದೆಗೆಳ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಪಡೆಯಲು ರಾಜ್ಯಪಾಲರು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ಹೀಗಿದ್ದರೂ ನಮ್ಮ ಸರ್ಕಾರ ಅನಗತ್ಯವಾಗಿ ಈ ಬೆಳವಣಿಗೆಗೆ ರಾಜಕೀಯ ಬೆರೆಸದೆ ಸಂಯಮದಿಂದ ನಡೆದುಕೊಂಡಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಅನಗತ್ಯ ಸಂಘರ್ಷವನ್ನು ಸುಪ್ರೀಂ ಕೋರ್ಟ್ ನ ಈ ತೀರ್ಪು ಶಾಶ್ವತವಾಗಿ ಕೊನೆಗೊಳಿಸಲಿದೆ ಎಂದು ನಂಬಿದ್ದೇನೆ ಎಂದಿದ್ದಾರೆ.

ಪಕ್ಷ ಸಂಘಟನೆಗೆ ಒತ್ತು, ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ- ಡಿ.ಕೆ.ಶಿವಕುಮಾರ್

ಅಹಮದಾಬಾದ್: ಕಳೆದ ಬೆಳಗಾವಿ ಅಧಿವೇಶನದ ವೇಳೆ ಈ ವರ್ಷವನ್ನು ಸಂಘಟನೆಯ ವರ್ಷ ಎಂದು ಸೂಚನೆ ನೀಡಲಾಗಿತ್ತು. ಬ್ಲಾಕ್, ಜಿಲ್ಲಾ, ತಾಲೂಕು ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಅಹಮದಾಬಾದ್ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ಎಐಸಿಸಿ ಅಧಿವೇಶನದಲ್ಲಿ ಭಾಗವಹಿಸಲು ಗುಜರಾತ್‌ನ ಅಹಮದಾಬಾದ್‌ಗೆ ತೆರಳಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಪಕ್ಷ ಸಂಘಟನೆಯ ವಿಚಾರದಲ್ಲಿ ಒಂದೊಂದೆ ಬದಲಾವಣೆಗಳನ್ನು ತರಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಪಕ್ಷವಾಗಿ ಇನ್ನೂ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವೆಲ್ಲರು ಚರ್ಚೆ ನಡೆಸಿ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಲವಾರು ವಿಚಾರಗಳು ಸೇರಿದಂತೆ ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ ಮಾಡಲಾಗುವುದು. ಕಳೆದ ವಾರ ದೆಹಲಿಯಲ್ಲಿ ಜಿಲ್ಲಾ ಮಟ್ಟದ ಅಧ್ಯಕ್ಷರ ಸಭೆ ನಡೆಸಲಾಗಿತ್ತು. 1924 ರಲ್ಲಿ ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿ ತೆಗೆದುಕೊಂಡು 100 ವರ್ಷಗಳು ಸಂದಿವೆ. ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿಟ್ಟು ನಡೆದವರು ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಗೆಲುವು ಗುಜರಾತಿನಿಂದ ಪ್ರಾರಂಭವಾಗಲಿದೆಯೇ ಎಂದು ಕೇಳಿದಾಗ, ʼಹೌದು ಖಂಡಿತವಾಗಿಯೂ ಆಗಲಿದೆ. ಜತೆಗೂಡುವುದು ಆರಂಭ, ಜತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚರಿಸುತ್ತೇನೆʼ ಎಂದರು. ‌

ಈ ಸುದ್ದಿಯನ್ನೂ ಓದಿ | 2nd PUC Result 2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬಿಜೆಪಿ ಜನಾಕ್ರೋಶ ಯಾತ್ರೆಯ ಬಗ್ಗೆ ಕೇಳಿದಾಗ, ʼಬಿಜೆಪಿಯವರ ಜನಾಕ್ರೋಶ ಯಾತ್ರೆಯನ್ನು ಸ್ವಾಗತಿಸುತ್ತೇನೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಜನರಿಗೆ ಇರುವ ಆಕ್ರೋಶ ಈ ಯಾತ್ರೆ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಅರ್ಥವಾಗಲಿ. ಅವರ ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುವಂತಾಗಿದೆʼ ಎಂದು ವ್ಯಂಗ್ಯವಾಡಿದರು.