ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Question Paper Leak: ದ್ವಿತೀಯ ಪಿಯು ಪ್ರಿಪರೇಟರಿ ಪರೀಕ್ಷೆ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ, ಆದರೂ ಪರೀಕ್ಷೆ ನಡೆಸಿದ ಇಲಾಖೆ

ಮಂಗಳವಾರದ ಗಣಿತ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋಮವಾರ ವಾಟ್ಸ್ಯಾಪ್​ ಮೂಲಕ ವಿದ್ಯಾರ್ಥಿಗಳಿಗೆ ತಲುಪಿದೆ. 80 ಅಂಕಗಳಿಗೆ ಸಿದ್ಧಪಡಿಸಿದ್ದ ಗಣಿತ ಪ್ರಶ್ನೆ ಪತ್ರಿಕೆಯ 47 ಪ್ರಶ್ನೆಗಳು ಹೊಂದಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೂ ಅದೇ ಪ್ರಶ್ನೆ ಪತ್ರಿಕೆಗೆ ಮಂಗಳವಾರ PU ಪರೀಕ್ಷಾ ಮಂಡಳಿ ಪರೀಕ್ಷೆ ನಡೆಸಿದೆ. ಪರೀಕ್ಷಾ ಮಂಡಳಿಯ ಈ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಪಿಯುಸಿ ಪ್ರಿಪರೇಟರಿ ಪರೀಕ್ಷೆ

ಬೆಂಗಳೂರು, ಜ.07: ಮಂಗಳವಾರ ನಡೆದ ದ್ವಿತೀಯ ಪಿಯುಸಿ (Second PUC) ಪೂರ್ವಸಿದ್ಧತಾ ಪರೀಕ್ಷೆಯ (Preparatory Exam) ಪ್ರಶ್ನೆ ಪತ್ರಿಕೆ ಸೋಮವಾರ ಲೀಕ್ ಆಗಿದ್ದು ಪತ್ತೆಯಾಗಿದೆ. ಗಣಿತ ಪರೀಕ್ಷೆಯ (Maths Exam) ಪ್ರಶ್ನೆ ಪತ್ರಿಕೆ (Question Paper) ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿದಾಡಿದೆ. ವಿದ್ಯಾರ್ಥಿಗಳ ವಾಟ್ಸ್ಯಾಪ್​ಗಳಲ್ಲಿ ಗಣಿತ ವಿಷಯದ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಶೇರ್ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮಂಗಳವಾರದ ಗಣಿತ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋಮವಾರ ವಾಟ್ಸ್ಯಾಪ್​ ಮೂಲಕ ವಿದ್ಯಾರ್ಥಿಗಳಿಗೆ ತಲುಪಿದೆ. 80 ಅಂಕಗಳಿಗೆ ಸಿದ್ಧಪಡಿಸಿದ್ದ ಗಣಿತ ಪ್ರಶ್ನೆ ಪತ್ರಿಕೆಯ 47 ಪ್ರಶ್ನೆಗಳು ಹೊಂದಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೂ ಅದೇ ಪ್ರಶ್ನೆ ಪತ್ರಿಕೆಗೆ ಮಂಗಳವಾರ PU ಪರೀಕ್ಷಾ ಮಂಡಳಿ ಪರೀಕ್ಷೆ ನಡೆಸಿದೆ. ಪರೀಕ್ಷಾ ಮಂಡಳಿಯ ಈ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಗಣಿತ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ವಿದ್ಯಾರ್ಥಿಗಳ ವಾಟ್ಸ್ಯಾಪ್​ ಗ್ರೂಪ್​ನಲ್ಲಿ ಶೇರ್​ ಆಗಿದೆ. ಶಿವಮೊಗ್ಗ ಪರೀಕ್ಷಾ ಕೇಂದ್ರದ ಎರಡು ಕಡೆ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್​ ಆಗಿರುವ ಮಾಹಿತಿ ಲಭ್ಯವಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮೇಲೆ ಪರೀಕ್ಷೆ ನಡೆಸಿದರೆ ಏನು ಫಲ? ಹೀಗಾದರೆ ಮುಖ್ಯ ಪರೀಕ್ಷೆಯ ಪ್ರಶ್ನೆ ಪರೀಕ್ಷೆ ಲೀಕ್​ ಆಗುವುದಿಲ್ಲ ಎನ್ನುವುದಕ್ಕೆ ಏನು ಗ್ಯಾರಂಟಿ ಎಂಬ ಪ್ರಶ್ನೆಗಳು ಮೂಡಿವೆ.

RPSC Paper Leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಕುಮಾರ್ ವಿಶ್ವಾಸ್ ಪತ್ನಿ, ಆರ್‌ಪಿಎಸ್‌ಸಿ ಸದಸ್ಯೆ ಮಂಜು ಶರ್ಮಾ ರಾಜೀನಾಮೆ

ಈ ಕುರಿತು ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಂತರಿಕ ತನಿಖೆಗೆ ಮುಂದಾಗಿದೆ. ಡಿಪಾರ್ಟ್ಮೆಂಟ್ ಆಫ್ ಸ್ಕೂಲ್ ಎಜುಕೇಶನ್ ಡೈರೆಕ್ಟರ್ ಭರತ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿಯನ್ನು ರಚಿಸಿ, ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಮೂಲ ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರಮುಖ ಆರೋಪವೆಂದರೆ, ಪ್ರಶ್ನೆ ಪತ್ರಿಕೆ ಲೀಕ್ ಆದ ಕಾರಣ ಹಣ ನೀಡಿ ಪತ್ರಿಕೆ ಪಡೆದವರು ಸುಲಭವಾಗಿ ಅಂಕ ಗಳಿಸುವ ಸಾಧ್ಯತೆ ಇದೆ. ಇದರಿಂದ ಪ್ರಾಮಾಣಿಕವಾಗಿ ಓದಿದ ವಿದ್ಯಾರ್ಥಿಗಳಿಗೆ ಭಾರೀ ಅನ್ಯಾಯವಾಗಲಿದೆ.

ಕಳೆದ ಜನವರಿ 2ರಂದು ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಐದನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ನಕಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. 2ನೇ ತಾರೀಕು ಜರುಗಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಜನವರಿ 1ರ ಸಂಜೆಯೇ ಲೀಕ್ ಆಗಿತ್ತು, ವಾಟ್ಸ್ಯಾಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು NSUI ವಿದ್ಯಾರ್ಥಿ ಸಂಘಟನೆ ಗಂಭೀರ ಆರೋಪ ಮಾಡಿದೆ. ಕೆಲ ಕಾಲೇಜುಗಳ ಆಡಳಿತ ಮಂಡಳಿಯಿಂದ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಅನುಮಾನ ಕೂಡ ವ್ಯಕ್ತವಾಗಿತ್ತು. ಪ್ರಶ್ನೆ ಪತ್ರಿಕೆಯ ಲೀಕ್ ಆದ್ರೂ ವಿವಿ ಪರೀಕ್ಷಾ ವಿಭಾಗ ಏನೂ ಕ್ರಮಕೈಗೊಂಡಿಲ್ಲ ಎಂದು ಎನ್​ಎಸ್​ಯುಐ ವಿದ್ಯಾರ್ಥಿ ಸಂಘಟನೆ ದೂರಿದೆ.

ಹರೀಶ್‌ ಕೇರ

View all posts by this author