ದುಬೈನಿಂದ ಎರಡನೇ ವಿಮಾನ ಬೆಂಗಳೂರಿಗೆ; ಎಂಎಲ್‌ಸಿ ಭೋಜೇಗೌಡ, ಪಿವಿ ಸಿಂಧು ಸೇರಿ 490 ಪ್ರಯಾಣಿಕರು ಸುರಕ್ಷಿತವಾಗಿ ವಾಪಸ್
ಮೊದಲ ವಿಮಾನದಲ್ಲಿ 213 ಪ್ರಯಾಣಿಕರು ಆಗಮಿಸಿದ್ದರು. ಇದೀಗ ಎರಡನೇ ವಿಮಾನದಲ್ಲಿ ದಾಖಲೆ ಸಂಖ್ಯೆಯ 490 ಜನರು ಮರಳಿದ್ದು, ವಿಮಾನ ನಿಲ್ದಾಣದಲ್ಲಿ ಭಾವನಾತ್ಮಕ ಕ್ಷಣಗಳು ಕಂಡುಬಂದವು. ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಅಧಿಕಾರಿಗಳು ಬರಮಾಡಿಕೊಂಡಿದ್ದು, ಅಗತ್ಯ ವೈದ್ಯಕೀಯ ತಪಾಸಣೆ ನಡೆಸಲಾಯಿತು.
ಬೆಂಗಳೂರು ಏರ್‌ಪೋರ್ಟ್ -
ಬೆಂಗಳೂರು, ಮಾರ್ಚ್ 03: ಇರಾನ್- ಇಸ್ರೇಲ್ ಯುದ್ಧ (Iran- Israel War) ಪೀಡಿತ ಪ್ರದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು (indians) ತಾಯ್ನಾಡಿಗೆ ಕರೆತರುವ ಕಾರ್ಯಾಚರಣೆ ತೀವ್ರಗೊಂಡಿದೆ. ಇಂದು ದುಬೈ (Dubai) ಮಾರ್ಗವಾಗಿ ಎರಡನೇ ವಿಶೇಷ ವಿಮಾನವು (Special flight) ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಯಶಸ್ವಿಯಾಗಿ ಬಂದಿಳಿದಿದ್ದು, ಒಟ್ಟು 490 ಪ್ರಯಾಣಿಕರು ಸುರಕ್ಷಿತವಾಗಿ ನಾಡಿಗೆ ಮರಳಿದ್ದಾರೆ.
ಗಣ್ಯರ ಆಗಮನ: ಈ ವಿಮಾನದಲ್ಲಿ ಜೆಡಿಎಸ್ ಎಂಎಲ್ ಸಿ ಎಸ್.ಎಲ್. ಭೋಜೇಗೌಡ ಹಾಗೂ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಸೇರಿದಂತೆ ಹಲವು ಪ್ರಮುಖರು ಬೆಂಗಳೂರಿಗೆ ಆಗಮಿಸಿದ್ದಾರೆ.
ಮೊದಲ ವಿಮಾನದಲ್ಲಿ 213 ಪ್ರಯಾಣಿಕರು ಆಗಮಿಸಿದ್ದರು. ಇದೀಗ ಎರಡನೇ ವಿಮಾನದಲ್ಲಿ ದಾಖಲೆ ಸಂಖ್ಯೆಯ 490 ಜನರು ಮರಳಿದ್ದು, ವಿಮಾನ ನಿಲ್ದಾಣದಲ್ಲಿ ಭಾವನಾತ್ಮಕ ಕ್ಷಣಗಳು ಕಂಡುಬಂದವು. ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಅಧಿಕಾರಿಗಳು ಬರಮಾಡಿಕೊಂಡಿದ್ದು, ಅಗತ್ಯ ವೈದ್ಯಕೀಯ ತಪಾಸಣೆ ಹಾಗೂ ಮುಂದಿನ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ತಾಯ್ನಾಡಿಗೆ ಮರಳಿದ ಪ್ರಯಾಣಿಕರ ಮುಖದಲ್ಲಿ ಆತಂಕದ ನಡುವೆಯೂ ನೆಮ್ಮದಿಯ ನಗು ಎದ್ದು ಕಾಣುತ್ತಿತ್ತು.
ಆತಂಕದಲ್ಲಿ ಸಾವಿರಾರು ಭಾರತೀಯರು
ಸದ್ಯ ಕೊಲ್ಲಿ ರಾಷ್ಟ್ರಗಳಲ್ಲಿ ಇರಾನ್‌ನ ದಾಳಿ ಮುಂದುವರಿದಿದ್ದು, ಅಲ್ಲಿರುವ ಭಾರತೀಯರು ಭಯದಿಂದ ದಿನ ದೂಡುವಂತಾಗಿದೆ. ದುಬೈ ಸೇರಿದಂತೆ ಭಾರತೀಯರು, ಕನ್ನಡಿಗರು ಅಧಿಕ ಸಂಖ್ಯೆಯಲ್ಲಿರುವ ದೇಶಗಳ ವೇಳೆ ಆಕ್ರಮಣ ಮುಂದುವರಿದಿದೆ. ಮನೆ, ಕಚೇರಿ, ಹೋಟೆಲ್ ಸಮೀಪ ಬಾಂಬ್ ಸ್ಫೋಟದ ಸದ್ದು ಕೇಳಿ ಬರುತ್ತಿದ್ದು, ಭಾರತೀಯರು ಜೀವ ಕೈಯಲ್ಲಿ ಹಿಡಿದು ದಿನ ದೂಡುತ್ತಿದ್ದಾರೆ. ವಿಮಾನ ಸಂಚಾರ ರದ್ದಾದ ಕಾರಣ ಹಲವರು ಏರ್‌ಪೋರ್ಟ್‌ನಲ್ಲಿ ಬಾಕಿ ಆಗಿದ್ದಾರೆ. ಸದ್ಯ ಮೊದಲ ವಿಮಾನ ಸುರಕ್ಷಿತವಾಗಿದ್ದು ಬೆಂಗಳೂರಿಗೆ ಬಂದಿಳಿದಿದ್ದು, ಉಳಿದರವನ್ನು ಕರೆತರಲು ಪ್ರಯತ್ನಿಸುವುದಾಗಿ ಸರ್ಕಾರ ತಿಳಿಸಿದೆ.
ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಈ ಮಧ್ಯೆ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರು, ಕನ್ನಡಿರನ್ನು ಸುರಕ್ಷಿತವಾಗಿ ಕರೆತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ʼʼಮಧ್ಯಪ್ರಾಚ್ಯ ಗಲಭೆಪೀಡಿತವಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು ಮತ್ತು ಭಾರತೀಯರನ್ನು ಕಾಪಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆʼʼ ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
Iran- israel War: ಹಾರ್ಮುಜ್ ಜಲಸಂಧಿಯಲ್ಲಿ ಡಿಜಿಟಲ್ ಬ್ಲಾಕೌಟ್, ದಿಕ್ಕು ತೋಚದೆ ನಿಂತ ನೂರಾರು ತೈಲ ನೌಕೆಗಳು!
ʼʼರಾಜತಾಂತ್ರಿಕ ಸಂಪರ್ಕವನ್ನು ಬಲಪಡಿಸಬೇಕು. ಅಲ್ಲಿ ಸಿಲುಕಿರುವ ಕನ್ನಡಿಗರು ಸೇರಿ ಭಾರತೀಯರನ್ನು ಕರೆತರಲು ಅಗತ್ಯವಿದ್ದರೆ ವಿಶೇಷ ವಿಮಾನದ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ರಾಯಭಾರ ಕಚೇರಿಗಳು ಮತ್ತು ವಿಮಾನಯಾನ ಸಂಸ್ಥೆಗಳ ಮೂಲಕ ಸಂಘಟಿತ ಬೆಂಬಲ ಪಡೆಯಬೇಕು. ನಮ್ಮ ಜನರ ಸುರಕ್ಷತೆ ಖಚಿತಪಡಿಸಲು ಮತ್ತು ಅವರನ್ನು ಕರೆತರಲು ಅಗತ್ಯವಾದ ಎಲ್ಲ ರೀತಿಯ ಸಹಕಾರವನ್ನು ನೀಡಲು ಕರ್ನಾಟಕವು ಬದ್ಧʼʼ ಎಂದು ಹೇಳಿದ್ದಾರೆ.
ಸಹಾಯವಾಣಿ
ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆಗಾಗಿ ಈಗಾಗಲೇ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಮಟ್ಟದ ತುರ್ತು ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿದೆ.