ಬೆಂಗಳೂರು, ಡಿ.27 : ಬೆಂಗಳೂರಿನಲ್ಲಿ (Bengaluru) ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಆತ್ಮಹತ್ಯೆ (Self Harming) ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾರಾಷ್ಟ್ರದ ನಾಗಪುರದ ತನ್ನ ಮನೆಯಲ್ಲಿ ಪತಿ ಸೂರಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೂರಜ್ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ 26 ವರ್ಷದ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದರೆ, ಅಲ್ಲಿ ಅದೇನಾಯ್ತೋ ಅರ್ಧಕ್ಕೆ ವಾಪಸ್ಸಾಗಿದ್ದರು. ಬಳಿಕ ನೇಣಿಗೆ ಹಾಕಿಕೊಳ್ಳಲು ಯುವತಿ ಯತ್ನಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಗಾನವಿಯ ದೊಡ್ಡಮ್ಮ ಮಾತನಾಡಿದ್ದು, ಒಳ್ಳೆಯ ಸಂಬಂಧ ಎಂದು ನಾನೇ ಮದುವೆ ಮಾಡಿಸಲು ಮುಂದಾದೆ. ಅವರು ಹೇಳಿದಂತೆ ಅದ್ಧೂರಿಯಾಗಿ ರಿಸೆಪ್ಷನ್ ಮಾಡಿಕೊಟ್ಟೆವು. ವರದಕ್ಷಿಣೆ, ಒಡವೆಗಾಗಿ ಬೇಡಿಕೆ ಇಟ್ಟು ಚಿತ್ರಹಿಂಸೆ ನೀಡಿದ್ದಾರೆ. ಮದುವೆ ಆಗಿ ಒಂದೂವರೆ ತಿಂಗಳಾದರೂ ನಮ್ಮ ಹುಡುಗಿಯನ್ನು ಆತ ಟಚ್ ಕೂಡ ಮಾಡಿಲ್ಲ. ಶ್ರೀಲಂಕಾಗೆ ಹನಿಮೂನ್‌ಗೆ ಹೋಗಿ ಅರ್ಧದಲ್ಲೇ ಮೊಟಕುಗೊಳಿಸಿ ಬಂದಿದ್ದಾನೆ. ಗಾನವಿಯ ಪತಿ ನಪುಂಸಕ, ಅವನು ಗಂಡಸೇ ಅಲ್ಲ ಎಂದು ಆಕೆಗೆ ಫಸ್ಟ್ ನೈಟ್ ದಿನವೇ ಗೊತ್ತಾಗಿತ್ತು. ಆತನ ಸಮಸ್ಯೆ ಮುಚ್ಚಿಡಲು ಗಾನವಿಗೆ ಹಿಂಸೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.