ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Self Hraming: ತುಮಕೂರಿನ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ನಿಗೂಢ ಸಾವು

ರಾಜಗೀರ್‌ ಬೌದ್ಧ ಮತ್ತು ಜೈನರಿಗೆ ಅತ್ಯಂತ ಪವಿತ್ರವೆನಿಸಿದ ಯಾತ್ರಾ ಸ್ಥಳ. ಈ ನಾಲ್ವರೂ ನೇಪಾಳಕ್ಕೆ ಪ್ರವಾಸ ಹೋಗಿ ಜ.30ರಂದು ರಾಜಗೀರ್‌ಗೆ ಬಂದು ಕೊಠಡಿ ಬುಕ್‌ ಮಾಡಿದ್ದರು. ಮುಂದೆ ನಾಲಂದಾದ ಪಾವಾಪುರಿಗೆ ಹೋಗಲು ಯೋಜಿಸಿದ್ದರು. ಶುಕ್ರವಾರ ಬೆಳಿಗ್ಗೆ 9:40ರ ಸುಮಾರಿಗೆ ಕೊಠಡಿಯಿಂದ ಕೊಳೆತ ವಾಸನೆ ಬಂದ ಹಿನ್ನೆಲೆ ಧರ್ಮಶಾಲೆಯ ಮ್ಯಾನೇಜರ್‌ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ತುಮಕೂರಿನ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ನಿಗೂಢ ಸಾವು

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 7, 2026 9:32 AM

ನಾಲಂದಾ, ಫೆ.07: ತುಮಕೂರು (tumkur news) ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬಿಹಾರದ (Bihar) ನಾಲಂದಾ ಜಿಲ್ಲೆಯ ರಾಜಗೀರ್‌ನ ಧರ್ಮಶಾಲೆಯೊಂದರಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಶವಗಳಾಗಿ (self harming) ಪತ್ತೆಯಾಗಿದ್ದಾರೆ. ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ (hanging) ಪತ್ತೆಯಾಗಿವೆ. ಪ್ರಕರಣದ ತನಿಖೆಗಾಗಿ ಕರ್ನಾಟಕ ಪೊಲೀಸರ ತಂಡ ಬಿಹಾರಕ್ಕೆ ತೆರಳಿದೆ.

ಮೃತರನ್ನು ತಾಯಿ ಜಿ.ಆರ್.ಸುಮಂಗಲಾ (78), ಮಗ ಜಿ.ಆರ್.ನಾಗಪ್ರಸಾದ್ (50) ಹಾಗೂ ಆಕೆಯ ಇಬ್ಬರು ಪುತ್ರಿಯರಾದ ಜಿ.ಆರ್.ಶಿಲ್ಪಾ (48) ಹಾಗೂ ಜಿ.ಆರ್‌.ಶ್ರುತಾ (43) ಎಂದು ಗುರುತಿಸಲಾಗಿದೆ. ಸುಮಂಗಲಾ ರತ್ನಬಾಲ ರಾಜು ಎಂಬವರ ಪತ್ನಿ ಎಂದು ತಿಳಿದುಬಂದಿದೆ. ಮೃತರಿಗೆ ಸೇರಿದ ಮೊಬೈಲ್‌ ಪೋನ್‌ಗಳು, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಎಟಿಎಂ ಕಾರ್ಡ್‌ ಸೇರಿದಂತೆ ಹಲವು ದಾಖಲೆಗಳು, ₹1,18,000 ಹಣ ಹಾಗೂ ದೊಡ್ಡ ಪ್ರಮಾಣದ ನಿದ್ರೆ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಗಿದ್ದೇನು?

ರಾಜಗೀರ್‌ ಬೌದ್ಧ ಮತ್ತು ಜೈನರಿಗೆ ಅತ್ಯಂತ ಪವಿತ್ರವೆನಿಸಿದ ಯಾತ್ರಾ ಸ್ಥಳ. ಈ ನಾಲ್ವರೂ ನೇಪಾಳಕ್ಕೆ ಪ್ರವಾಸ ಹೋಗಿ ಜ.30ರಂದು ರಾಜಗೀರ್‌ಗೆ ಬಂದು ಕೊಠಡಿ ಬುಕ್‌ ಮಾಡಿದ್ದರು. ಮುಂದೆ ನಾಲಂದಾದ ಪಾವಾಪುರಿಗೆ ಹೋಗಲು ಯೋಜಿಸಿದ್ದರು. ಶುಕ್ರವಾರ ಬೆಳಿಗ್ಗೆ 9:40ರ ಸುಮಾರಿಗೆ ಕೊಠಡಿಯಿಂದ ಕೊಳೆತ ವಾಸನೆ ಬಂದ ಹಿನ್ನೆಲೆ ಧರ್ಮಶಾಲೆಯ ಮ್ಯಾನೇಜರ್‌ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ನಾಲ್ಕೂ ಮಂದಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 3 ದಿನದಿಂದ ಕೊಠಡಿಯ ಬಾಗಿಲನ್ನೇ ತೆರೆದಿರಲಿಲ್ಲ ಎನ್ನಲಾಗಿದೆ. ಮೃತರಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಪರಿಶೀಲಿಸಿದಾಗ ತುಮಕೂರು ಮೂಲದವರು ಎಂದು ತಿಳಿದುಬಂದಿದೆ.

ಕರ್ನಾಟಕ ಪೊಲೀಸರ ಸಂಪರ್ಕ

‘ಕರ್ನಾಟಕ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಗುಬ್ಬಿ ಪೊಲೀಸರ ನೆರವಿನೊಂದಿಗೆ ಮೃತರ ಕುಟುಂಬಕ್ಕೆ ಮಾಹಿತಿ ತಲುಪಿಸಿದ್ದೇವೆ. ಎಲ್ಲಾ ಶವಗಳನ್ನು ನಾಲಂದಾ ಜಿಲ್ಲೆಯ ಬಿಹಾರ್ ಶರೀಫ್‌ನಲ್ಲಿರುವ ಸದರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವೀಡಿಯೊಗ್ರಫಿಯೊಂದಿಗೆ ವೈದ್ಯಕೀಯ ಮಂಡಳಿಯು ಶವಪರೀಕ್ಷೆ ನಡೆಸಲಿದೆ’ ಎಂದು ರಾಜಗೀರ್‌ ಪೊಲೀಸರು ತಿಳಿಸಿದ್ದಾರೆ.

ಎಲ್ಲ ದಿಕ್ಕುಗಳಿಂದಲೂ ಪ್ರಕರಣದ ತನಿಖೆ ನಡೆಸಲು ನಾಲಂದಾ ಪೊಲೀಸ್ ವರಿಷ್ಠಾಧಿಕಾರಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಈ ಸಂಬಂಧ ಇಬ್ಬರು ಸದಸ್ಯರ ತಂಡವನ್ನು ಕರ್ನಾಟಕದ ಗುಬ್ಬಿಗೆ ಕಳುಹಿಸಲಾಗಿದೆ.