ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬೆಂಗಳೂರು- ಚೆನ್ನೈ ಹೆದ್ದಾರಿಯಲ್ಲಿ ಸರಣಿ ಅಪಘಾತ, ಮೂವರು ಸಾವು

Road Accident: ಘಟನೆ ವೇಳೆ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು. ಕೂಡಲೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಭಾನುವಾರ ರಾತ್ರಿ ವೀಕೆಂಡ್‌ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ವಾಹನಗಳ ದಟ್ಟಣೆಯೂ ಹೆಚ್ಚಿಗಿತ್ತು. ಲಾರಿ ಚಾಲಕನ ಅವಸರದಿಂದ ಅಪಘಾತ ಸಂಭವಿಸಿದೆ.

ಬೆಂಗಳೂರು : ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru- Chennai highway) ಭೀಕರ ಸರಣಿ ಅಪಘಾತ (Road Accident) ಸಂಭವಿಸಿದೆ. ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ಕಾಮಗಾರಿಯಿಂದಾಗಿ ವಾಹನಗಳು ನಿಧಾನವಾಗಿ ಸಾಗುತ್ತಿದ್ದಾಗ ಲಾರಿಯೊಂದರ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಘಟನೆ ವೇಳೆ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು. ಕೂಡಲೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಭಾನುವಾರ ರಾತ್ರಿ ವೀಕೆಂಡ್‌ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ವಾಹನಗಳ ದಟ್ಟಣೆಯೂ ಹೆಚ್ಚಿಗಿತ್ತು. ಲಾರಿ ಚಾಲಕನ ಅವಸರದಿಂದ ಅಪಘಾತ ಸಂಭವಿಸಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮರ ಬಿದ್ದು ಮಹಿಳೆ ಮೃತ್ಯು

ಕಾರವಾರ: ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮರ ಬಿದ್ದು, ಕಾರಿನಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಪಿಕಳೆ ರಸ್ತೆಯಲ್ಲಿ ನಡೆದಿದೆ.

ಮೃತ ಮಹಿಳೆ ಮಲ್ಲಾಪುರ ಗ್ರಾಮದ ಲಕ್ಷ್ಮೀ ನಾರಾಯಣ ಮಮ್ತೆಕರ (55) ಎಂದು ಗುರುತಿಸಲಾಗಿದೆ. ಗರ್ಭಿಣಿ ಸೊಸೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಕೆಯ ಅತ್ತೆ ಲಕ್ಷ್ಮೀ ಮಮ್ತೆಕರ ಕಾರಿನೊಳಗೆ ಕುಳಿತುಕೊಂಡಿದ್ದರು. ಈ ವೇಳೆಗ ಬುಡ ಸಮೇತ ಬೃಹತ್ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ.

ಘಟನೆಯಿಂದಾಗಿ ಲಕ್ಷ್ಮೀ ಮಮ್ತೆಕರ ಕಾರಿನೊಳಗೆ ಸಿಲುಕಿದರು. ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಕಾರವಾರ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ, ಮರವನ್ನು ತೆರವುಗೊಳಿಸಿ ಗಾಯ ಗೊಂಡಿದ್ದ ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ, ಆಸ್ಪತ್ರೆಯಲ್ಲಿ ವೈದ್ಯರು ಸಾವನ್ನು ದೃಢಪಡಿಸಿದರು. ಕಾರವಾರದಲ್ಲಿ ಪದೆ ಪದೆ ಮರ ಉರುಳಿ ಬೀಳುವ ಘಟನೆ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ನಿಲ್ಲುವುದು, ವಾಹನ ನಿಲ್ಲಿಸುವುದಕ್ಕೆ ಭಯ ಪಡುವಂತಾಗಿದೆ.

ಇದನ್ನೂ ಓದಿ: SIRA (Tumkur) News: ಎಲ್ಲಾ ಚೆಕ್ ಡ್ಯಾಮ್ ಹಾಗೂ ಕೆರೆಗಳು ತುಂಬುವ ವಿಶ್ವಾಸವಿದೆದೆ.

ಹರೀಶ್‌ ಕೇರ

View all posts by this author