ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶಿರಾಡಿ ಘಾಟಿಯಲ್ಲಿ ರಸ್ತೆ ಕುಸಿತ: ಬದಲಿ ಮಾರ್ಗ ವ್ಯವಸ್ಥೆ

ಶಿರಾಡಿ ಘಾಟಿಯಲ್ಲಿ ರಸ್ತೆ ಕುಸಿತ: ಬದಲಿ ಮಾರ್ಗ ವ್ಯವಸ್ಥೆ

Profile Vishwavani News Jul 15, 2022 5:59 PM
image-7e082f2f-3696-4143-9e25-1f86ba521f1b.jpg
ಸಕಲೇಶಪುರ: ಮಂಗಳೂರು - ಬೆಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿಯ ದೋಣಿಗಲ್ ನಲ್ಲಿ ಶುಕ್ರವಾರ ರಸ್ತೆ ಕುಸಿದಿದ್ದು, ಸಂಚಾರಕ್ಕೆ ತೊಡಕಾಗಿದ್ದು, ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ. ದೋಣಿಗಲ್ ನಲ್ಲಿ ಶುಕ್ರವಾರ ರಸ್ತೆ ಕುಸಿದಿದ್ದು, ಬಿಸಲೆ ಘಾಟಿಗೆ ಹೋಗುವಂತಹ ರಸ್ತೆಯ ಪಕ್ಕದಲ್ಲಿದ್ದ ಮಣ್ಣು ಕುಸಿದು ರಸ್ತೆ ಮೇಲೆ ಬಂದಿದೆ. ಪರಿಣಾಮ ಮಂಗಳೂರಿಗೆ ಹೋಗುವ ಎಲ್ಲಾ ವಾಹನಗಳು ಬೇಲೂರು ಮೂಡಿಗೆರೆ ಮಾರ್ಗವಾಗಿ ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ಚಲಿಸಬೇಕು ಎಂದು ಹಾಸನ ಪೊಲೀಸರು ಪ್ರಕಟಣೆ ನೀಡಿದ್ದಾರೆ. ಕೊಟ್ಟಿಗೆಹಾರ, ಮೂಡಿಗೆರೆ, ಹಾನ್ಬಾಲ್, ಬೇಲೂರು, ಹಾಸನ ಮಾರ್ಗವಾಗಿ ಬೆಂಗಳೂರು ಸಂಚಾರ ಮಾಡುವುದಕ್ಕೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟ್ ನ ಸೋಮನ ಕಾಡು ಸಮೀಪ ಲಘು ಭೂಕುಸಿತ ವಾಗಿದ್ದು ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳು ಮಣ್ಣು ತೆರವು ಕಾರ್ಯದಲ್ಲಿ ನಿರಂತರವಾಗಿ ಚಾರ್ಮಾಡಿ ಘಾಟ್ ನಲ್ಲಿ ಕೆಲಸ ನಿರ್ವಹಿಸುತ್ತಿವೆ.