ಶಿವಮೊಗ್ಗ, ಜ.14 : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga news) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ.
ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ 6 ಜನ ಪ್ರಯಾಣ ಮಾಡುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದ ತಕ್ಷಣ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಪಘಾತದ ಕಾರಣ ಕುರಿತು ತನಿಖೆ ಮುಂದುವರಿದಿದೆ.
Road Accident: ಓವರ್‌ಟೇಕ್ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು