ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತರು, ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಹರಿಗೆ ಗ್ರಾಮಸ್ಥರು ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕ ಹೊರೆ ಇಳಿಸಲು ಗ್ರಾಮಸ್ಥರು ಬೀಗರ ಊಟಕ್ಕೆ (Beegara Oota Ban) ನಿಷೇಧ ಹೇರಿದ್ದಾರೆ.
ಸಂಪ್ರದಾಯ ಬದಿಗಿರಿಸಿ, ಆರ್ಥಿಕ ಶಿಸ್ತಿಗೆ ಮಹತ್ವ ನೀಡಲಾಗಿದ್ದು, ಬೀಗರೂಟ ಹಾಕಿದರೆ 1 ಲಕ್ಷ ರೂ. ದಂಡ ಹಾಗೂ ಬೇರೆ ಗ್ರಾಮಕ್ಕೆ ಹೋಗಿ ಬೀಗರೂಟ ಮಾಡಿದರೆ 50 ಸಾವಿರ ರೂ. ದಂಡ ಹಾಕಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಇತ್ತೀಚೆಗೆ ಮಲೆನಾಡು ಭಾಗದಲ್ಲಿ ಬಡ – ಮಧ್ಯಮ ಕುಟುಂಬಗಳು ಪ್ರತಿಷ್ಠೆಗಾಗಿ ಸಾಲ ಮಾಡಿ, ಬೀಗರೂಟ ಆಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದ ಹಿನ್ನೆಲೆ ಗ್ರಾಮಸ್ಥರು ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ತೀವ್ರ ಬರ; ರೈತರ ಸಾಲ ವಸೂಲಿ ಮುಂದೂಡಿಕೆಗೆ ಬ್ಯಾಂಕ್‌ಗಳಿಗೆ ಸರ್ಕಾರ ಸೂಚನೆ
ಬಳ್ಳಾರಿ: ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಸುಮಾರು 75 ವರ್ಷಗಳ ಬಳಿಕ ಕರ್ನಾಟಕ ಇಂತಹ ಭೀಕರ ಬರ (Karnataka drought) ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ಶೇ.90ರಷ್ಟು ಬೆಳೆ ಹಾನಿಯಾಗಿದೆ. ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರನ್ನು ಉಳಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅವರ ನೆರವಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಬಳ್ಳಾರಿ ತಾಲೂಕಿನ ಬರಪೀಡಿತ ಹಲಕುಂದಿ ಗ್ರಾಮದಲ್ಲಿ ತೊಗರಿ ಬಿತ್ತನೆ ಮಾಡಿರುವ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಸಾಲ ವಸೂಲಿ ವಿಚಾರದಲ್ಲಿಯೂ ಸರ್ಕಾರ ಕ್ರಮ ಕೈಗೊಂಡಿದೆ. ಸಾಲ ವಸೂಲಿಯನ್ನು ಮುಂದೂಡುವಂತೆ ಬ್ಯಾಂಕ್‌ಗಳಿಗೆ ಸೂಚನೆ ನೀಡಲಾಗಿದ್ದು, ಸಾಲಗಳನ್ನು ಮರುಹೊಂದಿಕೆ ಮತ್ತು ಮರುಹಣಕಾಸು ಮಾಡುವ ಕ್ರಮಕ್ಕೆ ಸೂಚಿಸಲಾಗಿದೆ.
ಬ್ಯಾಂಕ್‌ಗಳು ನೋಟಿಸ್ ನೀಡುತ್ತಿರುವ ಬಗ್ಗೆ ರೈತರು ಆತಂಕಪಡಬೇಕಿಲ್ಲ. ಸಾಲ ವಸೂಲಿಯನ್ನು ಮುಂದೂಡಲು ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಖಾಸಗಿ ಹಣಕಾಸು ಸಂಸ್ಥೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೂ ಈ ಸಂಬಂಧ ಸೂಚನೆ ನೀಡಲಾಗುತ್ತಿದೆ ಎಂದು ಹೇಳಿದರು.
Half Helmet Ban: ಹಾಫ್ ಹೆಲ್ಮೆಟ್ ಬಳಕೆ, ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದ ರಾಜ್ಯ ಸರ್ಕಾರ
ಪ್ರಸ್ತುತ ರೈತರಿಗೆ ತಕ್ಷಣದ ಆರ್ಥಿಕ ನೆರವು ನೀಡುವುದು ಹಾಗೂ ಸಾಲ ವಸೂಲಿಯನ್ನು ಮುಂದೂಡುವುದು ಸೇರಿದಂತೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿ ಇನ್ನಷ್ಟು ನೆರವು ನೀಡಲಾಗುವುದು ಎಂದು ತಿಳಿಸಿದರು.