ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಡಬಲ್‌ ಲಾಟರಿ; 50 ಕೋಟಿ ಮಂಜೂರಿಗೆ ಅಸ್ತು ಎಂದ ಸಿಎಂ, ಡಿಸಿಎಂ

ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಎಂದು ಶಾಸಕರು ಅಸಮಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪಕ್ಷದ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವ ತೀರ್ಮಾನ ಪ್ರಕಟಿಸಿದ್ದಾರೆ. ಆದರೆ ಬೇರೆ ಎಲ್ಲ ಕ್ಷೇತ್ರಗಳಿಗೆ ಹೋಲಿಸಿದರೆ, ಸಾಗರ ಕ್ಷೇತ್ರ ಬಂಪರ್‌ ಅನುದಾನವನ್ನು ಪಡೆದುಕೊಂಡಿದೆ.

ಸಾಗರ: ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಎಂದು ಶಾಸಕರು ಅಸಮಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಪಕ್ಷದ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವ ತೀರ್ಮಾನ ಪ್ರಕಟಿಸಿದ್ದಾರೆ. ಆದರೆ ಬೇರೆ ಎಲ್ಲ ಕ್ಷೇತ್ರಗಳಿಗೆ ಹೋಲಿಸಿದರೆ, ಸಾಗರ ಕ್ಷೇತ್ರ ಬಂಪರ್‌ ಅನುದಾನವನ್ನು ಪಡೆದುಕೊಂಡಿದೆ. ಒಂದೆಡೆ ಉಪ ಮುಖ್ಯಮಂತ್ರಿ ಸಾಗರ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ 50 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದ್ದಾರೆ.

ಅನುದಾನ ಮಂಜೂರಾತಿ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಪತ್ರಬರೆದು ತಿಳಿಸಿದ್ದಾರೆ. ಸಿಎಂ ಬರೆದಿರುವಂತ ಪತ್ರದಲ್ಲಿ 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಲಾದ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿಗಳ ವಿಶೇಷ ಅನುದಾನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕೆಳಕಂಡಂತೆ ಕಾಮಗಾರಿಗಳಿಗೆ ಅನುದಾನದ ಪ್ರಮಾಣವನ್ನು ನಿಗದಿ ಮಾಡಲಾಗಿದೆ.

ಲೋಕೋಪಯೋಗಿ ಇಲಾಖೆ, ರಸ್ತೆ ಮತ್ತು ಸೇತುವೆ ಕಾಮಗಾರಿಗಳು, ಗ್ರಾಮೀಣ ರಸ್ತೆ ಮತ್ತು ಸೇತುವೆ ಹಾಗೂ ನಗರ ಪ್ರದೇಶದ ಕಾಮಗಾರಿಗಳಿಗೆ ರೂ.37.50 ಕೋಟಿ ಅನುದಾನ ಬಳಸಲು ಸೂಚಿಸಿದ್ದಾರೆ.

ವಿವೇಚನಾಧಿಕಾರದಡಿ ವಿಧಾನಸಭಾ ಸದಸ್ಯರು ಆಯ್ಕೆ ಮಾಡಬಹುದಾದ ಇತರೆ ಇಲಾಖೆಯ ಕಾಮಗಾರಿಗಳಿಗೆ ರೂ.12.50 ಕೋಟಿ ಬಳಕೆ ಮಾಡುವಂತೆ ಪ್ರಮಾಣವನ್ನು ನಿಗದಿ ಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್ 50 ಕೋಟಿ ಅನುದಾನ ಮಂಜೂರು

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ವಿಧಾನಸಭಾ ಕ್ಷೇತ್ರವು ಸಂಪೂರ್ಣ ಮಲೆನಾಡು ಪ್ರದೇಶವಾಗಿದ್ದು, ಮಳೆಗಾಲದಲ್ಲಿ ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು, ಬಹುತೇಕ ಭಾಗ ಶರಾವತಿ ಹಿನ್ನೀರಿನ ಪ್ರದೇಶವಾಗಿರುವುದರಿಂದ ಕೆರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಳೆಗಾಲದಲ್ಲಿ ಕೆರೆಕೋಡಿಗಳು ನೆರೆ ಪ್ರವಾಹದ ಪರಿಸ್ಥಿತಿ ಅಲ್ಲದೆ, ಮಕ್ಕಳು, ಹಳ್ಳಕೊಳ್ಳಗಳನ್ನು ದಾಟಿ ಹೋಗಬೇಕಾಗಿರುತ್ತದೆ. ಇದಕ್ಕೆ ಕಾಲುಸಂಕ, ತಡೆಗೋಡೆ, ಚೆಕ್ ಡ್ಯಾಂ, ಬ್ಯಾರೇಜ್ ಮತ್ತು ಸೇತುವೆ ನಿರ್ಮಾಣದ ಅವಶ್ಯಕತೆ ಇರುತ್ತದೆ. ಆದುದ್ದರಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ರೂ.60.00 ಕೋಟಿ ಅನುದಾನವನ್ನು ಮಂಜೂರು ಮಾಡಿ, ಸದರಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಈ ಮನವಿ ಹಿನ್ನಲೆಯಲ್ಲಿ ಡಿಸಿಎಂ 50 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಿದ್ದರು.