ಶಿವಮೊಗ್ಗ: ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಬಗ್ಗೆ ಅವಹೇಳನಕಾರಿ ಕಮೆಂಟ್ (derogatory comment) ಮಾಡಿದ್ದ ವ್ಯಕ್ತಿಯೊಬ್ಬರ ಮೇಲೆ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಭದ್ರಾವತಿ (Bhadravathi) ನಗರದಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಷಡಾಕ್ಷರಿ ಎಂಬವರ ಫೇಸ್‌ಬುಕ್ ಖಾತೆಯಿಂದ ಸಿದ್ದರಾಮಯ್ಯ ಅವರ ವಿಡಿಯೊವೊಂದಕ್ಕೆ ಕಮೆಂಟ್ ಮಾಡಿದ್ದು, ಭದ್ರಾವತಿ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೆಸ್ಸೆಸ್ ಕುರಿತ ಹೇಳಿಕೆ, ಸಿಎಂ ವಿರುದ್ಧದ ದೂರು ವಜಾ
ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕುರಿತು ನೀಡಿದ ಹೇಳಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ( CM Siddaramaiah) ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಇದೀಗ ವಜಾಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎನ್ ಕಿರಣ್ ಎಂಬವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ ಬೆಂಗಳೂರಿನ 42ನೇ ACMM ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ವಜಾಗೊಳಿಸಿ ಆದೇಶ ಹೊರಡಿಸಿದೆ.
ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಅನುಮತಿ: ಸಿಎಂ ಇಂಗಿತ
ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah:) ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಸೋಮವಾರದಂದು ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ನುಡಿದರು.
ಇದನ್ನೂ ಓದಿ: Farmers Protest: ಕಲಬುರಗಿಯಲ್ಲಿ ಸಿಎಂಗೆ ಮುತ್ತಿಗೆ ಎಚ್ಚರಿಕೆ ನೀಡಿದ ರೈತ ಮುಖಂಡರ ಬಂಧನ