ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಜನಿಸಿದ ಎರಡೇ ದಿನಗಳಲ್ಲಿ 4 ಸಿಂಹದ ಮರಿಗಳ ಸಾವು!

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯಯದಲ್ಲಿ ಸೆ.16ರಂದು 4 ಮರಿಗಳಿಗೆ ಸಿಂಹಿಣಿ ‘ಸಾರಾ’ ಜನ್ಮ ನೀಡಿತ್ತು. ಜನಿಸಿದ ಎರಡು ದಿನದಲ್ಲೇ ನಾಲ್ಕೂ ಮರಿಗಳು ಮೃತಪಟ್ಟಿವೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಿಂಹಿಣಿ ಸರಿಯಾಗಿ ಹಾಲು ನೀಡದ ಹಿನ್ನೆಲೆ ಮರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಶಿವಮೊಗ್ಗ ಮೃಗಾಲಯದಲ್ಲಿ 4 ಸಿಂಹದ ಮರಿಗಳ ಸಾವು!

-

Prabhakara R
Prabhakara R Sep 27, 2026 7:01 PM

ಶಿವಮೊಗ್ಗ: ಜನಿಸಿದ ಎರಡೇ ದಿನಗಳಲ್ಲಿ 4 ಸಿಂಹದ ಮರಿಗಳು (Lion cubs Dies) ಮೃತಪಟ್ಟಿರುವ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನಡೆದಿದೆ. ಶಿವಮೊಗ್ಗ (Shivamogga) ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಮೃಗಾಲಯದಲ್ಲಿ (Tyavarekoppa Zoo) 5 ವರ್ಷದ ಏಷ್ಯಾಟಿಕ್ ಸಿಂಹ ‘ಸಾರಾ’ ಜನ್ಮ ನೀಡಿದ್ದ 4 ಮರಿಗಳು ಸಾವನ್ನಪ್ಪಿವೆ.

ಸೆ.16ರಂದು 4 ಮರಿಗಳಿಗೆ ಸಿಂಹಿಣಿ ‘ಸಾರಾ’ ಜನ್ಮ ನೀಡಿತ್ತು. ಜನಿಸಿದ ಎರಡು ದಿನದಲ್ಲೇ ನಾಲ್ಕೂ ಮರಿಗಳು ಮೃತಪಟ್ಟಿವೆ. ಮರಿಗಳ ಪೋಷಣೆಯಲ್ಲಿ ಸಿಂಹಿಣಿ ಸಾರಾ ನಿರ್ಲಕ್ಷ್ಯ ಮತ್ತು ಸರಿಯಾಗಿ ಹಾಲು ನೀಡದ ಹಿನ್ನೆಲೆ ಮರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯಕ್ಕೆ 2025 ರಲ್ಲಿ ಪ್ರಾಣಿ ವಿನಿಮಯ ಯೋಜನೆ ಭಾಗವಾಗಿ ಅಳವಿನಂಚಿನ ಪ್ರಭೇಧದ ಸಂತಾನೋತ್ಪತ್ತಿ ಉದ್ದೇಶದಿಂದ ಮಧ್ಯಪ್ರದೇಶದ ಇಂದೋರ್‌ನಿಂದ ‘ಶಿವ’ ಹಾಗೂ ‘ಸಾರಾ’ ಏಷ್ಯಾಟಿಕ್ ಸಿಂಹಗಳನ್ನು ಕರೆತರಲಾಗಿತ್ತು. ಈ ಮರಿಗಳ ಸಾವಿನಿಂದ ಪ್ರಾಣಿಗಳ ವಿನಿಮಯ- ಸಂತಾನೋತ್ಪತ್ತಿ ಉದ್ದೇಶಕ್ಕೆ ಹಿನ್ನಡೆಯಾಗಿದೆ.