ಶಿವಮೊಗ್ಗ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivarajkumar) ತಿಳಿಸಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಇನ್ನು ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುವೆ. ಯಾವಾಗ ಕರೆದರೂ ಬರುವುದಾಗಿ ತಿಳಿಸಿದರು.
ನೂತನ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಅವರು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಂತಹ ಅವರಿಗೆ ಈ ಹುದ್ದೆಯನ್ನು ನೀಡಿದ್ದು ಹರ್ಷತಂದಿದೆ. ನನ್ನ ಚುನಾವಣಾ ಪ್ರಚಾರದಲ್ಲೂ ಶ್ರಮಿಸಿದ್ದರು. ಅವರಿಗೆ ಅಭಿನಂದನೆಗಳು ಅಂತ ಹೇಳಿದರು.
ಈ ಸುದ್ದಿಯನ್ನೂ ಓದಿ | CM Siddaramaiah: ದಸರಾ ಎಲ್ಲ ಧರ್ಮದ, ಎಲ್ಲ ಜಾತಿಗಳ ಹಬ್ಬ: ಸಿಎಂ ಸಿದ್ದರಾಮಯ್ಯ
ಇಂದಿನ ಸಮಾವೇಶವು ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ, ಅವರು ಎಲ್ಲರನ್ನೂ ಜತೆಗೂಡಿಸಿಕೊಂಡು ಪಕ್ಷ ಸಂಘಟನೆಯ ಕೆಲಸ ಮಾಡಲಿ ಎಂಬುದಾಗಿ ಸಲಹೆಯನ್ನು ಗೀತಾ ಶಿವರಾಜ್ ಕುಮಾರ್ ನೀಡಿದರು.
'ಕಾಂತಾರ: ಚಾಪ್ಟರ್ 1' ರಿಲೀಸ್‌ಗೆ ದಿನಗಣನೆ; ಕೊಲ್ಲೂರು ದೇಗುಲಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ

ಉಡುಪಿ: ʼಕಾಂತಾರ: ಚಾಪ್ಟರ್ 1ʼ ಚಿತ್ರದಲ್ಲಿ ವಸ್ತ್ರ ವಿನ್ಯಾಸಕಿಯಾಗಿ ಪ್ರಗತಿ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. 4-5 ಶತಮಾನದಲ್ಲಿ ನಡೆಯುವ, ಕದಂಬ ರಾಜಾಡಳಿತ ಕಾಲದಲ್ಲಿ ಕರಾವಳಿಯಲ್ಲಿ ನಡೆಯುವ ಕಥೆ ಇದಾಗಿದ್ದು, ಕಲಾವಿದರ ಉಡುಗೆ-ತೊಡುಗೆಯನ್ನು ಕೂಡ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಚಿತ್ರದ ಕಾಸ್ಟ್ಯೂಮ್‌ಗಾಗಿ ಸೆಟ್‌ನಲ್ಲಿ ಪ್ರತಿದಿನ 40 ಟೈಲರ್, 30 ವಸ್ತ್ರ ವಿನ್ಯಾಸಕರು ಕೆಲಸ ಮಾಡಿದ್ದರು.
ಈಗಾಗಲೇ ಚಿತ್ರತಂಡ ಪ್ರಮೋಷನ್ ಕಾರ್ಯಕ್ಕೆ ಇಳಿದಿದ್ದು, ವಿವಿಧ ನಗರಗಳಲ್ಲಿ ಪ್ರೆಸ್‌ಮೀಟ್ ಆಯೋಜಿಸಲಾಗಿದೆ. ಇದೆಲ್ಲದರ ಮಧ್ಯೆ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ತಮ್ಮ ಮಕ್ಕಳೊಂದಿಗೆ ಕೊಲ್ಲೂರು ದೇಗುಲಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.