ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ಮಳೆಗಾಲದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ(Agumbe ghat) ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 12, 2026 1:04 PM

ಶಿವಮೊಗ್ಗ: ಮಳೆಗಾಲದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ (Agumbe ghat) ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಮತ್ತು ಅಪಘಾತಗಳನ್ನು ತಪ್ಪಿಸುವ ಉದ್ದೇಶದಿಂದ ನಿಷೇಧಗೊಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯಡಿಯಲ್ಲಿ ಆಗುಂಬೆ ಘಾಟಿ ಬರುತ್ತಿದ್ದು, ಇಲ್ಲಿ ಜೂನ್ 15 ರಿಂದ ಯಾವುದೇ ಭಾರೀ ವಾಹನಗಳು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ ಮಳೆಗಾಲ ಮುಗಿಯುವರೆಗೂ ಮುಂದುವರೆಯಲಿದೆ ಎಂದು ಶಿವಮೊಗ್ಗ ಜಿಲ್ಲಾಡಳಿತ ತಿಳಿಸಿದೆ. ಈ ರಸ್ತೆಯ ಮೂಲಕ ತೆರಳುವ ಭಾರೀ ವಾಹನಗಳಿಗೆ ಆಗುವ ತೊಂದರೆಯಾಗಲಿದೆ. ಆದರೂ, ಅವರು ಪರ್ಯಾಯ ರಸ್ತೆಯನ್ನು ಬಳಸಿ ತೆರಳಲು ಸೂಚಿಸಲಾಗಿದೆ.

ಮಳೆಗಾಲದ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಭಾರೀ ವಾಹನಗಳು ತೆರಳಿ ಅವಘಢಗಳು ಸಂಭವಿಸಿದರೆ ಇತರರಿಗೆ ಸಾಕಷ್ಟು ಅನಾನುಕೂಲವಾಗಲಿದೆ. ಈ ಆಗುಂಬೆ ಘಾಟಿಯ ಮೂಲಕ ಹಾವೇರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮುಂತಾದ ಜಿಲ್ಲೆಗಳಿಂದ ಸಾವಿರಾರು ನಾಗರಿಕರು ತುರ್ತು ಆರೋಗ್ಯಕ್ಕಾಗಿ ಸಂಚರಿಸುವುದರಿಂದ ಅವರಿಗೆ ಆಗುವ ಅನಾನುಕೂಲ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

Belagavi Rains: ಬೈಲಹೊಂಗಲದಲ್ಲಿ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿಹೋದ ಬೈಕ್‌ಗಳು, ಜನಜೀವನ ಅಸ್ತವ್ಯಸ್ತ!

ಪರ್ಯಾಯ ಮಾರ್ಗವೇನು?

ಆಗುಂಬೆ ಘಾಟಿಗೆ ಪರ್ಯಾಯವಾಗಿ ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು, ತೀರ್ಥಹಳ್ಳಿ, ನಾಗೋಡಿ, ಕೊಲ್ಲೂರು, ಕುಂದಾಪುರ, ಉಡುಪಿ ರಸ್ತೆ ಅಥವಾ ತೀರ್ಥಹಳ್ಳಿ, ಶೃಂಗೇರಿ, ಕೆರೆಕಟ್ಟೆ, ಕಾರ್ಕಳ, ಉಡುಪಿ ಮಾರ್ಗವಾಗಿ ಸಂಚರಿಸಲು ಮನವಿ ಮಾಡಲಾಗಿದೆ. ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು, ಉಡುಪಿ, ಕುಂದಾಪುರ, ಕೊಲ್ಲೂರು, ನಾಗೋಡಿ, ತೀರ್ಥಹಳ್ಳಿ ಮಾರ್ಗ ಅಥವಾ ಕಾರ್ಕಳ, ಬಜಗೋಳಿ, ಕೆರೆಕಟ್ಟೆ, ಶೃಂಗೇರಿ, ತೀರ್ಥಹಳ್ಳಿ ರಸ್ತೆಯ ಮೂಲಕ ಸಂಚರಿಸಲು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.