ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮುಂಜಾನೆ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಗುಡ್ಡ ಕುಸಿತದಿಂದಾಗಿ ಶೆಡ್ ನಲ್ಲಿ ಮಲಗಿದ್ದ ಮೂವರು ಸಮಾಧಿಯಾಗಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಸಂಗ್ರಹ ಚಿತ್ರ

ಶಿವಮೊಗ್ಗ: ಭಾರಿ ಮಳೆಯಿಂದ ಮೂರು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿಯಲ್ಲಿ (Thirthahalli) ಭಾನುವಾರ ಬೆಳಗಿನ ಜಾವ ನಡೆದಿದೆ. ಗುಡ್ಡ ಕುಸಿತದಿಂದ (Landslide) ಕೆಳಗೆ ಶೆಡ್ ನಿರ್ಮಿಸಿ ಅದರಲ್ಲಿ ವಾಸವಾಗಿದ್ದ ಮೂವರು ಭೂಸಮಾಧಿಯಾಗಿದ್ದಾರೆ. ಪಕ್ಕದ ಶೆಡ್ ನಲ್ಲಿದ್ದ ಇನ್ನೊಂದು ಕುಟುಂಬ ಸದಸ್ಯರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ಮಲ್ಲಿಕಾರ್ಜುನ (35), ನಾಗವೇಣಿ (28), ಸಂತೋಷ (3) ಮೃತರು.

ತೀರ್ಥಹಳ್ಳಿಯ ಸಿಬಿನಕೆರೆ ಸಮೀಪದ ಗಾಂಧಿನಗರದಲ್ಲಿ ಭಾನುವಾರ ಬೆಳಗ್ಗೆ 2.30ರ ಸುಮಾರಿಗೆ ಗುಡ್ಡ ಕುಸಿತವಾಗಿ ಮೂರು ವರ್ಷದ ಮಗು ಸಂತೋಷ ಸೇರಿದಂತೆ ಕಾರ್ಮಿಕರಾದ ಮಲ್ಲಿಕಾರ್ಜುನ ಮತ್ತು ನಾಗವೇಣಿ ಸಾವನ್ನಪ್ಪಿದ್ದಾರೆ. ಮೃತರನ್ನು ಮಣ್ಣಿನಿಂದ ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಇವರನ್ನು ರಕ್ಷಿಸಲು ಪ್ರಯತ್ನಿಸಿದ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಗುಡ್ಡದ ಮೇಲೆ ಇರುವ ರೆಹಮಾತುಲ್ಲ ಎಂಬುವರ ಮನೆಯ ಕಾಂಪೌಂಡ್ ಕೂಡ ಕುಸಿತವಾಗಿದ್ದು, ಅವರು ಈಗ ಮನೆ ಕುಸಿಯುವ ಭೀತಿಯಲ್ಲಿದ್ದಾರೆ.

ಬಿಹಾರದಲ್ಲೊಬ್ಬ ಬಾಹುಬಲಿ; ಗದ್ದೆಯಲ್ಲಿ ಸಿಕ್ಕ ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಪೊಲೀಸ್‌ ಠಾಣೆಗೆ ಬಂದ ಯುವಕ: ವಿಡಿಯೊ ವೈರಲ್‌

ಕೊಪ್ಪಳ ಹಾಗೂ ದಾವಣಗೆರೆಯ ಕೆಲವು ಕಾರ್ಮಿಕರು ಕುಟುಂಬ ಸಮೇತರಾಗಿ ಬಂದು ಹಲವು ವರ್ಷಗಳಿಂದ ಇಲ್ಲೇ ವಾಸವಾಗಿದ್ದು, ತೀರ್ಥಹಳ್ಳಿಯ ಗಾಂಧಿನಗರ ಬಡಾವಣೆಯ ರಮೇಶ್ ಎಂಬ ಗುತ್ತಿಗೆದಾರರ ಬಳಿ ಮಣ್ಣಿನ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ದುರಂತದ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ತೀವ್ರ ಮಳೆಯ ನಡುವೆಯೂ ಕಾರ್ಯಾಚರಣೆ ನಡೆಸಿ ಮೂವರ ಶವವನ್ನು ಹೊರತೆಗೆದು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಿದರು. ಮಣ್ಣಿನ ಅವಶೇಷಗಳ ಅಡಿ ಸಿಲುಕಿದ್ದ ಹನುಮಂತ ಎಂಬಾತನನ್ನು ರಕ್ಷಿಸಲಾಗಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳದಲ್ಲಿ ಜೆಸಿಬಿ ಬಳಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಮಳೆಯಿಂದಾಗಿ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಹಿತಿ ತಿಳಿದ ಶಾಸಕ ಆರಗ ಜ್ಞಾನೇಂದ್ರ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆ ಮಾತನಾಡಿ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸಲು ಮನವಿ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ಗುಡ್ಡದ ಸಮೀಪ ವಾಸವಾಗಿರುವ ಸುಮಾರು 8 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಪಾಯಕಾರಿ ಸ್ಥಳದಿಂದ ಇನ್ನೂ ಕೆಲವರನ್ನು ಸ್ಥಳಾಂತರಿಸಲು ಯೋಜನೆ ಮಾಡಲಾಗಿದೆ. ಇಲ್ಲಿಗೆ ಬರುವ ಕಾರ್ಮಿಕರು ಗುಡ್ಡದ ಬದಿ ಶೆಡ್ ಕಟ್ಟಿ ವಾಸ ಮಾಡುತ್ತಾರೆ. ಇಲ್ಲಿಗೆ ಬಂದಾಗ ಅವರಿಗೆ ಅನೇಕ ಬಾರಿ ಇಂತಹ ಅಪಾಯಕಾರಿ ಪ್ರದೇಶದಲ್ಲಿ ವಾಸಿಸಬೇಡಿ ಎಂದು ಹೇಳಿದ್ದೇನೆ ಎಂದರು.

ಅಪಾಯಕಾರಿ ಮಟ್ಟದಲ್ಲಿ ನದಿಗಳು

ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ, ಕುಶಾವತಿ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತುಂಗಾ ಮತ್ತು ಮಾಲತಿ ನದಿ ಕೂಡ ಮಳೆಗಾಲ ಆರಂಭವಾದ ಎರಡು ತಿಂಗಳ ಅನಂತರ ಮೊದಲ ಬಾರಿಗೆ ಪ್ರವಾಹ ಮಟ್ಟವನ್ನು ತಲುಪಿದೆ.

ಮಾಲತಿ ನದಿ ನೀರು ಹೆಚ್ಚಳವಾಗಿ ಸುತ್ತಮುತ್ತಲಿನ ಭತ್ತದ ಗದ್ದೆ, ಅಡಕೆ ತೋಟ ಮುಳುಗಡೆಯಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದೆ. ತೀರ್ಥಹಳ್ಳಿ ಪಟ್ಟಣದ ಶ್ರೀ ರಾಮೇಶ್ವರ ದೇವಸ್ಥಾನ ಸಮೀಪದ ತುಂಗಾ ನದಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀರಾಮ ಮಂಟಪ ಮುಳುಗುವ ಹಂತದಲ್ಲಿದೆ.

ಸ್ವಾಮಿ ವಿವೇಕಾನಂದರ ತತ್ತ್ವ ಉಲ್ಲೇಖಿಸಿ ದೇಶದ ಯುವ ಜನತೆಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ

ಮಾಲತಿ ನದಿ ಪ್ರವಾಹದಿಂದ ಶೃಂಗೇರಿ- ಬಿದರಗೋಡು- ಗುಡ್ಡೇಕೇರಿ ಸಂಪರ್ಕ ರಸ್ತೆಯ ನಾಬಳ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸಾಮಾನ್ಯ ಮಟ್ಟದ ನೀರು ಎಂದು ಭಾವಿಸಿ ಕಾರು ದಾಟಿಸಲು ಪ್ರಯತ್ನಿಸಿದ ಆರು ಮಂದಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ಹೊನ್ನಾವರ ತಾಲೂಕಿನಿಂದ ಕಾರಿನಲ್ಲಿ ಆಗಮಿಸುತ್ತಿದ್ದ ಆರು ಮಂದಿ ಕಾರು ಸಮೇತ ಪ್ರವಾಹದಲ್ಲಿ ಸಿಲುಕಿರುವುದನ್ನು ನೋಡಿದ ಸ್ಥಳೀಯರು ಜೀವದ ಹಂಗು ತೊರೆದು ಅವರನ್ನು ರಕ್ಷಿಸಿದರು.

ವಿದ್ಯಾ ಇರ್ವತ್ತೂರು

View all posts by this author