HMPV Cases: ಶಿವಮೊಗ್ಗದಲ್ಲಿ ಐವರು ಮಕ್ಕಳಿಗೆ ಎಚ್ಎಂಪಿವಿ ಸೋಂಕು!

HMPV Cases: ಎಚ್‌ಎಂಪಿವಿ ವೈರಸ್ ಆತಂಕ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ಕರ್ನಾಟಕ ಆರೋಗ್ಯ ಇಲಾಖೆಗಳು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿವೆ.

image-86fb613c-2fe8-42ec-a48d-220af4501409.jpg
Profile Prabhakara R January 7, 2025
ಶಿವಮೊಗ್ಗ: ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ಸೋಂಕು ಪತ್ತೆಯಾದ ಬೆನ್ನಲ್ಲೇ ಶಿವಮೊಗ್ಗದಲ್ಲೂ ಐವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿರುವುದು ತಿಳಿದುಬಂದಿದೆ. ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಐವರು ಮಕ್ಕಳಲ್ಲಿ ಎಚ್ಎಂಪಿವಿ ಸೋಂಕು (HMPV Cases) ಕಂಡುಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಎಚ್ಎಂಪಿ ವೈರಸ್ ಸೋಂಕು ದೃಢಪಟ್ಟ ಬಗ್ಗೆ ವೈದ್ಯ ಧನಂಜಯ್ ಸರ್ಜಿ ಮಾಹಿತಿ ನೀಡಿದ್ದಾರೆ. ಆರು ತಿಂಗಳಿನಿಂದ ಎರಡು ವರ್ಷದೊಳಗಿನ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿತ್ತು. ಮಕ್ಕಳಲ್ಲಿ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ. ಕೊರೊನಾ ಶಂಕೆ ಹಿನ್ನೆಲೆ ಸ್ವಾಬ್ ತೆಗೆದು ಟೆಸ್ಟ್ ಮಾಡಿಸಲಾಗಿತ್ತು. ನಂತರ ಲ್ಯಾಬ್ ವರದಿಯಲ್ಲಿ ಹ್ಯೂಮನ್ ಮೆಟಾನ್ಯುಮೊವೈರಸ್ ಎನ್ನುವುದು ದೃಢಪಟ್ಟಿತ್ತು. ಉಸಿರಾಟದ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿ ಮಕ್ಕಳಿಗೆ ಗುಣಪಡಿಸಲಾಗಿದೆ ಎಂದು ಡಾ. ಧನಂಜಯ್ ಸರ್ಜಿ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ ನವೆಂಬರ್ ತಿಂಗಳಿನಿಂದಲೇ ಈ ಸೋಂಕು ಆರಂಭವಾಗಿದೆ. 2 ವರ್ಷ, 11 ತಿಂಗಳು, 4 ವರ್ಷ , 1 ವರ್ಷ ಹಾಗೂ 6 ತಿಂಗಳಿನ ಮಗು ಸೇರಿ ಒಟ್ಟು ಐದು ಮಕ್ಕಳಲ್ಲಿ ಎಚ್ಎಂಪಿ ವೈರಸ್ ಪತ್ತೆಯಾಗಿದ್ದು ಎಲ್ಲರೂ ಗುಣಮುಖರಾಗಿದ್ದಾರೆ ಎಂದಿದ್ದಾರೆ. ಎಚ್‌ಎಂಪಿವಿ ವೈರಸ್ ಆತಂಕ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ಕರ್ನಾಟಕ ಆರೋಗ್ಯ ಇಲಾಖೆಗಳು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿವೆ. ಜನಸಂದಣಿ ಪ್ರದೇಶಗಳಿಂದ ದೂರವಿರಿ, ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲು, ಕೈಗಳನ್ನು ಸೋಪಿನಿಂದ ಅಥವಾ ಸ್ಯಾನಿಟೈಸರ್‌ನಿಂದ ತೊಳೆಯಲು ಸೂಚಿಸಲಾಗಿದೆ. ಕೆಮ್ಮುವಾಗ ಮೂಗು, ಬಾಯಿ ಮುಚ್ಚಿಕೊಳ್ಳಬೇಕು, ಯಾವುದೇ ರೋಗಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲು ಸೂಚಿಸಿದ್ದಾರೆ. ಈ ಸುದ್ದಿಯನ್ನೂ ಓದಿ | HMP Virus : ನಾಗ್ಪುರದಲ್ಲೂ HMP ವೈರಸ್‌ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 7ಕ್ಕೇರಿಕೆ ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟ ಕೋವಿಡ್ ಮಾದರಿಯಲ್ಲೇ ಹರಡುವ ಎಚ್‌ಎಂಪಿವಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಏನು ಮಾಡಬೇಕು? ನೀವು ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಿ. ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್‌ನಿಂದ ತೊಳೆಯಿರಿ. ಜನಸಂದಣಿ ಇರುವ ಸ್ಥಳಗಳಿಗೆ ಹೋಗುವುದು ತಪ್ಪಿಸಿ ನಿಮಗೆ ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಿ. ಮನೆಯಲ್ಲಿಯೇ ಇರಿ ಮತ್ತು ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಿ ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ ಏನು ಮಾಡಬಾರದು? ಟಿಶ್ಯೂ ಪೇಪರ್ ಮತ್ತು ಕೈ ಕರ್ಚೀಫ್ ಮರುಬಳಕೆ ಮಾಡಬಾರದು. ಸೋಂಕಿನ ಲಕ್ಷಣ ಇರುವ ಜನರೊಂದಿಗೆ ನಿಕಟ ಸಂಪರ್ಕ, ಟವೆಲ್‌, ಬಟ್ಟೆ ಇತ್ಯಾದಿಗಳನ್ನು ಹಂಚಿಕೊಳ್ಳಬಾರದು. ಕಣ್ಣು, ಮೂಗು ಮತ್ತು ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸಬಾರದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ವೈದ್ಯರನ್ನು ಸಂಪರ್ಕಿಸದೆ ಔಷಧಿ ತೆಗೆದುಕೊಳ್ಳಬಾರದು
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ