ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; 26 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧಾರ

Madhu Bangarappa: ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

26 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧಾರ

-

Prabhakara R Prabhakara R Oct 20, 2025 9:13 PM

ಶಿವಮೊಗ್ಗ, ಅ. 20: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳ ನೇಮಕಾತಿಗೆ (Teachers Recruitment) ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ. 6ನೇ ತರಗತಿಯಿಂದ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆಗೂ ಅವಕಾಶವಿರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಎಐ ಆಧಾರಿತ ಶಿಕ್ಷಣ ನೀಡಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈಗ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುವುದು. 6ನೇ ತರಗತಿಯಿಂದಲೇ ಸ್ಕಿಲ್​​​​ ಸ್ಕೂಲ್ ಪ್ರಾರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Karnataka TET 2025: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ; ಪರೀಕ್ಷೆ ಯಾವಾಗ?

ಜಾತಿ ಸಮೀಕ್ಷೆ ಬಗ್ಗೆ ಮಾಹಿತಿ ನೀಡಿದ ಸಚಿವರು, ಜಾತಿ ಸಮೀಕ್ಷೆ ಶೇ.90.12ರಷ್ಟು ಆಗಿದೆ. ಸಮೀಕ್ಷೆ ಅಗತ್ಯ ತುಂಬಾ ಇದೆ. ಇದರಿಂದ ಬಜೆಟ್​​ಗೆ ಅನುಕೂಲವಾಗಲಿದೆ. ದೊಡ್ಡ ದೊಡ್ಡ ಉದ್ಯಮಿಗಳು ಸಹ ಸಹಕಾರ ನೀಡಬೇಕಾಗುತ್ತದೆ ಎಂದು ಇನ್ಫೋಸಿಸ್ ಹೆಸರನ್ನು ಬಳಸದೆ ಮನವಿ ಮಾಡಿದರು. ಎಲ್ಲರೂ ಸಹ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಜಿಲ್ಲೆಯಲ್ಲಿ ಶೇ. 97 ರಷ್ಟು ಸಮೀಕ್ಷೆ ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.