ಶಿವಮೊಗ್ಗ: ಕಿಡಿಗೇಡಿಗಳು ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಎಎ ಸರ್ಕಲ್ ಬಳಿ ಸೋಮವಾರ ನಡೆದಿದೆ. ಸಯ್ಯದ್ ಬರ್ಕತ್(32) ಚಾಕು ಇರಿತಕ್ಕೊಳಗಾದ ವ್ಯಕ್ತಿ. ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಮೊಬೈಲ್ ಶಾಪ್ ನಡೆಸುತ್ತಿದ್ದ ಸಯ್ಯದ್ ಬರ್ಕತ್ ಲಷ್ಕರ್ ಮೊಹಲ್ಲಾ ನಿವಾಸಿ. ಮೊಬೈಲ್ ಅಂಗಡಿ ಬಳಿಯೇ ಹೋಗಿ ಕೈ, ಹೊಟ್ಟೆಯ ಭಾಗಕ್ಕೆ ಕಿಡಿಗೇಡಿಗಳು ಚಾಕುವಿನಿಂದ ಇರಿದಿದ್ದಾರೆ.
ಚಾಕು ಇರಿತಕ್ಕೊಳಗಾದ ಸಯ್ಯದ್ ಬರ್ಕತ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೆ ವೈಷಮ್ಯದಿಂದಾಗಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಚಾಕು ಇರಿದ ಕಿಡಿಗೇಡಿಗಳ ಶೋಧಕ್ಕೆ ಪೊಲೀಸರು ಮುಂದಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ತುಂಗಾ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು
ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ (Student) ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಶಿವಮೊಗ್ಗ ನಗರದ ಪ್ರೇಮ್ ಕುಮಾರ್ (17) ಎಂದು ಗುರುತಿಸಲಾಗಿದೆ. ಈತ ಸ್ನೇಹಿತರ ಜತೆ ಪಿಳ್ಳಂಗಿರಿಯ ದೇವಸ್ಥಾನಕ್ಕೆ ತೆರಳಿದ್ದ. ವಾಪಸ್ ತೆರಳುವಾಗ ಸ್ನೇಹಿತರ ಜತೆ ಈಜಲು ನದಿಗೆ ಇಳಿದಿದ್ದ. ಈ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ. ಪ್ರೇಮ್ ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಊಟ ಸೇವಿಸಿ 14ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ
ಹಾವೇರಿ: ನಗರ ಸಮೀಪದ ದೇವಗಿರಿ ಗ್ರಾಮದಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಶನಿವಾರ ರಾತ್ರಿ ಊಟ ಸೇವಿಸಿದ ಬಳಿಕ 14ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ರಾತ್ರಿ ಹೋಳಿಗೆ, ರೈಸ್- ಸಾಂಬಾರ್ ಊಟ ಮಾಡಿದ್ದ ವಿದ್ಯಾರ್ಥಿಗಳಿಗೆ ಭಾನುವಾರ ಬೆಳಿಗ್ಗೆ ಹೊಟ್ಟೆ ನೋವು, ವಾಂತಿ-ಭೇದಿ ಕಾಣಿಸಿಕೊಂಡಿದ್ದರಿಂದ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಗುಂಡು ಹಾರಿಸಿ ವ್ಯಕ್ತಿಯ ಕೊಲೆ, ದೇಹದೊಳಗೆ 69 ಬುಲೆಟ್ ಪತ್ತೆ
ವಿದ್ಯಾರ್ಥಿನಿಯರು ಆಸ್ಪತ್ರೆ ಸೇರುತ್ತಿದ್ದಂತೆ ಅಧಿಕಾರಿಗಳು ಆಗಮಿಸಿ ಮಾಹಿತಿ ಪಡೆದಿದ್ದು, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ. ಹಾಸ್ಟೆಲ್‌ಗೆ ಅನ್ನಪೂರ್ಣೇಶ್ವರಿ ಖಾಸಗಿ ಮೆಸ್‌ನಿಂದ ಆಹಾರ ಸರಬರಾಜು ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದ್ದು, ಕಳಪೆ ಆಹಾರ ಪದಾರ್ಥಗಳು ನೀಡಲಾಗಿತ್ತು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ತನಿಖೆ ನಡೆಸಿ, ಕ್ರಮ ಆಗಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.