BJP Karnataka: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026: ಸೊರಬದಲ್ಲಿ ಬಿ.ವೈ. ರಾಘವೇಂದ್ರ ಚಾಲನೆ
ʼಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026ʼರ ಸೊರಬ ಮಂಡಲ ಪ್ರಶಿಕ್ಷಣ ವರ್ಗದ ತರಬೇತಿ ಶಿಬಿರವು ಸೊರಬದ ಗಿರಿಜಾ ಶಂಕರ ಸಭಾಭವನದಲ್ಲಿ ಗುರುವಾರ ಜರುಗಿತು. ಬಿಜೆಪಿ ಶಿವಮೊಗ್ಗ ಜಿಲ್ಲೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತರಬೇತಿ ಶಿಬಿರವನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.
ಸೊರಬದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026ಕ್ಕೆ ಚಾಲನೆ ನೀಡಲಾಯಿತು -
ಶಿವಮೊಗ್ಗ, ಮೇ 28: ʼಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026ʼರ ಸೊರಬ ಮಂಡಲ ಪ್ರಶಿಕ್ಷಣ ವರ್ಗದ ತರಬೇತಿ ಶಿಬಿರವು ಸೊರಬದ ಗಿರಿಜಾ ಶಂಕರ ಸಭಾಭವನದಲ್ಲಿ ಗುರುವಾರ ಜರುಗಿತು. ಬಿಜೆಪಿ ಶಿವಮೊಗ್ಗ ಜಿಲ್ಲೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತರಬೇತಿ ಶಿಬಿರಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ (BY Raghavendra), ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಬಿ.ವೈ. ರಾಘವೇಂದ್ರ, ʼʼಪಕ್ಷದ ಸೈದ್ಧಾಂತಿಕ ಮೌಲ್ಯಗಳು, ಸಂಘಟನಾ ಚಾತುರ್ಯ ಹಾಗೂ ರಾಷ್ಟ್ರೀಯ ಚಿಂತನೆಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಪ್ರಶಿಕ್ಷಣ ವರ್ಗಗಳು ಅತ್ಯಂತ ಮಹತ್ವದ ಪಾತ್ರವಹಿಸುತ್ತವೆ. ಏಕಾತ್ಮ ಮಾನವತಾವಾದದ ಪ್ರಣೇತೃ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸಲು ಈ ತರಬೇತಿಯು ಪ್ರೇರಣೆಯಾಗಲಿದೆʼʼ ಎಂದು ತಿಳಿಸಿದರು.
ಮಂಡಲದ ಪ್ರಮುಖ ಪದಾಧಿಕಾರಿಗಳು, ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಶಕ್ತಿ ಕೇಂದ್ರಗಳ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.