ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Navaratra Namasya: ಚಿತ್ತಭಿತ್ತಿಯಲ್ಲಿ ಭಾವನೆಯೇ ಇಲ್ಲದಿದ್ದರೆ ಆ ಪೂಜೆ ಪರಿಪೂರ್ಣವಲ್ಲ: ರಾಘವೇಶ್ವರ ಶ್ರೀ

Navaratra Namasya: ಸಾಗರದ ಶ್ರೀ ರಾಘವೇಶ್ವರ ಸಭಾ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ʼನವರಾತ್ರ ನಮಸ್ಯಾʼದ 10ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಚಿತ್ತಭಿತ್ತಿಯಲ್ಲಿ ಭಾವನೆಯೇ ಇಲ್ಲದಿದ್ದರೆ ಆ ಪೂಜೆ ಪರಿಪೂರ್ಣವಲ್ಲ

-

Profile Siddalinga Swamy Oct 1, 2025 10:14 PM

ಸಾಗರ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ʼನವರಾತ್ರ ನಮಸ್ಯಾʼ ದ (Navaratra Namasya) 10ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ಪೂಜೆಯಲ್ಲಿ ದೇವರಿಗೆ ಎಷ್ಟು ವಸ್ತು ಸಮರ್ಪಿಸುತ್ತಿದ್ದೇವೆ ಎನ್ನುವುದಕ್ಕಿಂತ ಭಕ್ತಿಯಲ್ಲಿ ಭಾವಿಸಿ ಪೂಜೆ ಮಾಡುತ್ತಿದ್ದೇವೆಯೇ? ಎನ್ನುವುದು ಅತೀ ಮುಖ್ಯ, ಯಾರ ಕುರಿತು ಪೂಜಿಸುತ್ತೇವೋ ಆ ಕರುಣಾಮಯಿಯ ಕುರಿತು ನಮ್ಮ ಚಿತ್ತಭಿತ್ತಿಯಲ್ಲಿ ಭಾವನೆಯೇ ಇಲ್ಲದಿದ್ದರೆ ಆ ಪೂಜೆ ಪರಿಪೂರ್ಣವಲ್ಲ ಎಂದರು. ದೇವಿಯ ಪ್ರತಿ ಸ್ತೋತ್ರ ಹೇಳುವಾಗ ಸೃಷ್ಟಿಯ ನೆಮ್ಮದಿಗಾಗಿ ಆಕೆ ಮಾಡಿದ ಪ್ರತಿ ಕಾರ್ಯವೂ ನಮ್ಮ ಮನದಲ್ಲಿದ್ದರೆ ಅದನ್ನು ಸ್ಮರಿಸಿ ಧ್ಯಾನಿಸಿದರೆ ಮಾತ್ರ ಅನುಗ್ರಹ ದೊರೆಯಲಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಪತ್ನಿ ಪ್ರೇಮಾರೊಟ್ಟಿಗೆ ಆಗಮಿಸಿ ಲಲಿತಾದೇವಿ ಪೂಜೆಯಲ್ಲಿ ಪಾಲ್ಗೊಂಡರು ಹಾಗೂ ಉಡಿ ಸಮರ್ಪಣೆಗೈದು ನಂತರ ಶ್ರೀಗಳವರಿಂದ ಆಶೀರ್ವಾದ ಪಡೆದರು.

ಈ ಸುದ್ದಿಯನ್ನೂ ಓದಿ | Navaratra Namasya: ಪ್ರಕೃತಿಗೆ ವಿರುದ್ಧವಾಗಿ ನಡೆದುಕೊಂಡರೆ ಆಪತ್ತು ಖಚಿತ: ರಾಘವೇಶ್ವರ ಶ್ರೀ

ಇದಕ್ಕೂ ಮುನ್ನ ಬೆಳಗ್ಗೆ ಶುಂಭಹಾ ಉಪಾಸನೆ, ಜಾತವೇದಸೇ ಮಂತ್ರ ಹವನ, ಚಂಡಿಕಾ ಹವನ, ಶ್ರೀಪೂಜೆ, ಕುಂಕುಮಾರ್ಚನೆ, ಉಡಿ ಹಾಗೂ ಸ್ತೋತ್ರ ಸಮರ್ಪಣೆ, ಸುವರ್ಣ ಪಾದುಕಾ ಪೂಜೆ, ಭಜನೆ, ಲಲಿತಾ ಅಷ್ಟೋತ್ತರ ನಡೆಯಿತು. ಸಂಜೆ ದುರ್ಗಾದೀಪ ನಮಸ್ಕಾರ, ರಾಜರಾಜೇಶ್ವರಿ ಪೂಜೆ ಹಾಗೂ ಚಂಡಿಕಾ ಪಾರಾಯಣ ನೆರವೇರಿತು.