ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ (Road Accident) ಸಂಭವಿಸಿದ್ದು, ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವಿಗೀಡಾಗಿದ್ದಾರೆ. ಶಿವಮೊಗ್ಗದ (Shivamogga) ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ಈ ದಾರುಣ ಘಟನೆ ನಡೆದಿದೆ. ಅಸಾದುಲ್ಲ (35) ಸಾಧಿಕ್ (31) ಫೈರೋಜ್ (33) ಮೃತ (Death) ದುರ್ದೈವಿಗಳು ಎಂದು ತಿಳಿದುಬಂದಿದೆ.
ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಮೂವರೂ ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ವಾಪಸ್ ಆಗುವ ವೇಳೆ ಈ ಭೀಕರವಾದ ಅಪಘಾತ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯದಲ್ಲಿ ಹೊತ್ತಿ ಉರಿದ ಕಾರು, ಚಾಲಕ ಸಜೀವ ದಹನ
ಮಂಡ್ಯ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆಯೇ ಇನ್ನೊಂದು ಘೋರ ದುರಂತ ಸಂಭವಿಸಿದ್ದು, ಅಪಘಾತದ ಬಳಿಕ ಕಾರಿನೊಳಗಿದ್ದ ಚಾಲಕ ಹೊರಗೆ ಬರಲಾಗದೆ ಸಜೀವ ದಹನವಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಇನ್ನೋವಾ ಕಾರು ಹೊತ್ತಿ ಉರಿದಿದೆ.
ಇದನ್ನೂ ಓದಿ: Bengaluru Road Rage: ಮಿರರ್‌ಗೆ ಟಚ್ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್ ಸವಾರನ ಕೊಂದ ದಂಪತಿ!
ಕಾರಿನಲ್ಲಿದ್ದ ಹುಣಸೂರು ಮೂಲದ ಚಂದ್ರಶೇಖರ್ ಸಜೀವ ದಹವಾಗಿದ್ದಾರೆ. ಕಾರಿನ ಬಾಗಿಲು ತೆಗೆಯಲಾಗದೆ ಚಾಲಕ ಚಂದ್ರಶೇಖರ್ ಸಿಲುಕಿಕೊಂಡಿದ್ದಾರೆ. ಕಾರು ಬೆಂಕಿಗಾಹುತಿಯಾಗಿದ್ದು, ಅವರು ಸಜೀವ ದಹನವಾಗಿದ್ದಾರೆ. ಸದ್ಯ ಚಂದ್ರಶೇಖರ್ ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರೀರಂಗಪಟ್ಟಣ ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.