ಶಿವಮೊಗ್ಗ, ನ.26: ಶಿವಮೊಗ್ಗದಲ್ಲಿ (Shivamogga news) ನವವಿವಾಹಿತೆಯೊಬ್ಬಳು ಪತಿಯ ಹಾಗೂ ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಮದುವೆ ಆದ 6 ತಿಂಗಳಲ್ಲೇ ಆತ್ಮಹತ್ಯೆಗೆ (Self harming) ಶರಣಾಗಿದ್ದಾಳೆ. ಹತಭಾಗ್ಯೆ ಡೆತ್‌ನೋಟ್ (Death note) ಬರೆದಿಟ್ಟಿದ್ದು, ಅದರಲ್ಲಿ ಗಂಡನ ಮನೆಯವರ ಕಿರುಕುಳವನ್ನು ವಿವರಿಸಿದ್ದಾಳೆ. ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ಗುರುತಿಸಲಾಗಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿಎಸ್‌ಸಿ ಮತ್ತು ಬಿಎಡ್ ಪದವೀಧರೆ ಆಗಿದ್ದರು. 2025ರ ಏಪ್ರಿಲ್ 14ರಂದು ಶಿಕಾರಿಪುರದ ಗುರುರಾಜ್ ಜೊತೆಗೆ ಲತಾ ವಿವಾಹವಾಗಿತ್ತು. ಆರು ತಿಂಗಳ ಹಿಂದೆಯಷ್ಟೇ ಲತಾ ಗುರುರಾಜ್ ನನ್ನು ಮದುವೆಯಾಗಿದ್ದರು. ಪತಿ ಗುರುರಾಜ್ ಬಿಆರ್‌ಪಿಯ ಕೆಪಿಸಿಎಲ್‌ನಲ್ಲಿ ಎಇಇ ಆಗಿದ್ದಾರೆ. ವಾಟ್ಸಪ್‌ನಲ್ಲಿ ಡೆತ್ ನೋಟ್ ಬರೆದಿಟ್ಟಿರುವ ಲತಾ, ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭೀಕರ ಕಾರು ಅಪಘಾತ; ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು
ವಾಟ್ಸ್ಯಾಪ್‌ನಲ್ಲಿ ಡೆತ್ ನೋಟ್ ಬರೆದಿರುವ ಲತಾ ಪತಿ ಹಾಗೂ ಮನೆಯವರ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ನವೆಂಬರ್ 23ರಂದು ಲತಾ ನಾಲೆಗೆ ಹಾರಿದ್ದಾರೆ. ಸದ್ಯ ಲತಾ ಶವಕ್ಕಾಗಿ ಇದೀಗ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಲತಾ ಅವರ ಪತಿ ಹಾಗೂ ಆತನ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ.
ಸ್ನೇಹಿತೆಯ ರೂಮಿಗೆ ಕರೆದೊಯ್ದು ಗೆಳತಿಯ ಹತ್ಯೆ
ಬೆಂಗಳೂರು: ರಾಜಧಾನಿಯಲ್ಲಿ ಯುವತಿಯೊಬ್ಬಳ ಭೀಕರ ಹತ್ಯೆ ನಡೆದಿದೆ. ಯುವಕನೊಬ್ಬ ಸ್ನೇಹಿತೆಯ ರೂಮ್‌ಗೆ ಕರೆದೊಯ್ದು ಯುವತಿಯನ್ನು ಕೊಲೆ ಮಾಡಿರುವ ಘಟನೆ (Bengaluru Murder Case) ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಆಂಧ್ರದ ಮೂಲದ ದೇವಿಶ್ರೀ (21) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾದ ದೇವಿಶ್ರೀ, ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ದೇವಿಶ್ರೀ, ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನ ಜತೆ ಸ್ನೇಹಿತೆ ರೂಮ್‌ಗೆ ತೆರಳಿದ್ದಳು. ಅಲ್ಲಿ ಆಕೆಯನ್ನು ಕೊಲೆ ಮಾಡಿ ಯುವಕ ಒಬ್ಬನೇ ವಾಪಸ್ ಆಗಿದ್ದಾನೆ.
ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತ ದೇವಿಶ್ರೀ, ರೆಡ್ಡಪ್ಪ ಮತ್ತು ಜಗದಂಬಾ ದಂಪತಿಯ ಕೊನೆಯ ಮಗಳು. ಚೆನ್ನಾಗಿ ಓದಲಿ ಅಂತ ಪೋಷಕರು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತಲೆಮರೆಸಿಕೊಂಡಿರುವ ಪ್ರೇಮ್ ವರ್ಧನ್‌ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.