ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Shivamogga news: ಶಿವಮೊಗ್ಗದಲ್ಲಿ ಕೊಲೆಯಾದ ಸಂಕೇತ್‌ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ; ಗೃಹ ಸಚಿವರು ಹೇಳಿದ್ದೇನು?

ಘಟನೆ ಸಂಬಂಧ ಪೊಲೀಸರು ಐವರು ಬಾಲಕರನ್ನು ಆರೆಸ್ಟ್ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ಪರಿಹಾರ ಸೇರಿ ಒಟ್ಟು 15 ಲಕ್ಷ ಪರಿಹಾರ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಅವರು ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಕೊಲೆಯಾದ ಸಂಕೇತ್‌ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಮೃತ ಸಂಕೇತ್ -

ಹರೀಶ್‌ ಕೇರ
ಹರೀಶ್‌ ಕೇರ Feb 24, 2026 2:08 PM

ಶಿವಮೊಗ್ಗ, ಫೆ. 24: ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ವಯಸ್ಕರು ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಎಂಬಾತನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗು ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಶಿವಮೊಗ್ಗ ಡಿಸಿ ಪ್ರಭುಲಿಂಗ ಘೋಷಣೆ ಮಾಡಿದ್ದಾರೆ.

ನಿನ್ನೆ ರಾತ್ರಿ ಸಂಕೇತನ ಸ್ನೇಹಿತನ ಜೊತೆಗೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಜಗಳ ಮಾಡುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಸಂಕೇತನಿಗೆ ಅಪ್ತಾಪ್ತ ವಯಸ್ಕರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇದೀಗ ಘಟನೆ ಸಂಬಂಧ ಪೊಲೀಸರು ಐವರು ಬಾಲಕರನ್ನು ಆರೆಸ್ಟ್ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ಪರಿಹಾರ ಸೇರಿ ಒಟ್ಟು 15 ಲಕ್ಷ ಪರಿಹಾರ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಅವರು ಘೋಷಣೆ ಮಾಡಿದ್ದಾರೆ.

ಘಟನೆಯ ಹಿನ್ನೆಲೆ

ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ, ವಿದ್ಯಾರ್ಥಿ ಸಂಕೇತ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ನಗರದಲ್ಲಿ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಈ ಬೆನ್ನಲ್ಲೇ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Student Murder: ಅನ್ಯಕೋಮಿನ ಬಾಲಕರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ; ಅಲ್ಲಿ ಆಗಿದ್ದೇನು?

ಗೃಹ ಸಚಿವರು ಹೇಳಿದ್ದೇನು?

ಪೊಲೀಸ್ ವರದಿಯನ್ನು ಆಧರಿಸಿ ಗೃಹ ಸಚಿವರು ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡಿದ್ದಾರೆ. ಘಟನೆ ನಡೆದ ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಈಗಾಗಲೇ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇದು ವೈಯಕ್ತಿಕ ದ್ವೇಷ ಅಥವಾ ಕ್ಷುಲ್ಲಕ ಕಾರಣಕ್ಕೆ ನಡೆದ ಘಟನೆಯಾಗಿದ್ದರೂ, ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ. ಆರೋಪಿಗಳಿಗೆ ಕಾನೂನಿನ ಅಡಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಯುವಕರು ಮತ್ತು ವಿದ್ಯಾರ್ಥಿಗಳು ಇಂತಹ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಪೋಷಕರು ಗಮನಹರಿಸಬೇಕು. ಪರಿಸ್ಥಿತಿಯನ್ನು ಹತೋಟಿಗೆ ತರಲು ಶಿವಮೊಗ್ಗ ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದಿದ್ದಾರೆ.