ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಕೆಟ್ಟು ನಿಂತ ಲಾರಿಗೆ ಬಸ್‌ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ

Shivamogga: ಲಾರಿ ಯಾವುದೇ ಇಂಡಿಕೇಟರ್‌ ಇಲ್ಲದೆ ಕತ್ತಲಲ್ಲಿ ನಿಂತಿತ್ತು. ಮಳೆ ಬರುತ್ತಿದ್ದ ಕಾರಣ ಕತ್ತಲಲ್ಲಿ ನಿಂತಿದ್ದ ಲಾರಿ ಕಾಣಿಸಿರಲಿಲ್ಲ. ಹಾಗೂ ಬಸ್​ ವೇಗವಾಗಿ ಚಲಿಸುತ್ತಿತ್ತು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದ (Road Accident news) ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ (Shivamogga news) ತೀರ್ಥಹಳ್ಳಿ ರಸ್ತೆಯಲ್ಲಿ ನಡೆದಿದೆ. ಮಂಗಳೂರಿನಿಂದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕಡೆ ಹೊರಟಿದ್ದ KA 51 C0146 ನಂಬರಿನ ದುರ್ಗಾಂಬ ಬಸ್ ಗಾಜನೂರು ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ AP 04 UB 3339 ನಂಬರಿನ ಆಂಧ್ರ ಪ್ರದೇಶದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಚಳ್ಳಕೆರೆ ನಿವಾಸಿ ಹರ್ಷಿತ್ (35) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಭೀಕರ ಅಪಘಾತದಲ್ಲಿ 13ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಉಮೇಶ್ (50), ಪ್ರಸಾದ್ (40), ವಿಷ್ಣು (21), ಮಂಜುನಾಥ್ (45), ಸುಜಾತ (40), ಆನಂದ್ ನಾಯ್ಕ್ (50), ನೀಲಾಂಬಿಕಾ (45), ಪ್ರಸಾದ್ (43), ಬಿಂದು (20), ಶಂಶಾಂಕ್ (20), ಲಕ್ಷ್ಮೀ (35), ಶ್ರೀರಾಮುಲು (42) ಹಾಗೂ ಕಾರ್ತಿಕ್ (32) ಎಂಬವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಯಾವುದೇ ಇಂಡಿಕೇಟರ್‌ ಇಲ್ಲದೆ ಕತ್ತಲಲ್ಲಿ ನಿಂತಿತ್ತು. ಮಳೆ ಬರುತ್ತಿದ್ದ ಕಾರಣ ಕತ್ತಲಲ್ಲಿ ನಿಂತಿದ್ದ ಲಾರಿ ಕಾಣಿಸಿರಲಿಲ್ಲ. ಹಾಗೂ ಬಸ್​ ವೇಗವಾಗಿ ಚಲಿಸುತ್ತಿತ್ತು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Shivamogga News: ಶಿವಮೊಗ್ಗ ಸೆಂಟ್ರಲ್‌ ಜೈಲಿನ ಕೈದಿ ಹೊಟ್ಟೆಯಲ್ಲಿ ಮೊಬೈಲ್‌ ಪತ್ತೆ!

ಹರೀಶ್‌ ಕೇರ

View all posts by this author