ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಉಪನ್ಯಾಸಕ ಸಾವು; ಅಡಿಕೆ ತೋಟದಲ್ಲಿ ಶವಕ್ಕೆ ಬೆಂಕಿ!

Shivamogga lecturer Death Case: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತ ಉಪನ್ಯಾಸಕ ಸುರೇಶ್.

ಶಿವಮೊಗ್ಗ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ. ಬೆಂಕಿ ಹಚ್ಚಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸುರೇಶ್ (58) ಮೃತ ಉಪನ್ಯಾಸಕ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಅವರ ತೋಟದಲ್ಲೇ ಶವಕ್ಕೆ ಬೆಂಕಿ ಹಚ್ಚಲಾಗಿತ್ತು. ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು. ಸ್ಥಳಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ? ಕೊಲೆಯೋ? ಎಂಬುದು ಪೊಲೀಸರ ತನಿಖೆಯ ನಂತರ ಸ್ಪಷ್ಟವಾಗಬೇಕಾಗಿದೆ.

Murder Case: ಪತಿಯಿಂದ ನಡುರಸ್ತೆಯಲ್ಲಿ ಪತ್ನಿಯ ಬರ್ಬರ ಕೊಲೆ, ಶವದ ಮೇಲೆ ಕಾರು ಹತ್ತಿಸಿ ವಿಕೃತಿ

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್‌.ಬಿ ಅವರು ಪ್ರತಿಕ್ರಿಯೆ ನೀಡಿ, ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ತನಿಖೆಗೆ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳ ಸಾವು

ಯಾದಗಿರಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ (Yadgir News) ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಶಾಲೆಗೆ ರಜೆ ಇದ್ದ ಕಾರಣ ಕೃಷಿಹೊಂಡದಲ್ಲಿ ಮಕ್ಕಳು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ.

ಕಿರಣ (6), ಬಸಮ್ಮ (11), ಶರತ್ (6), ಹನುಮೇಶ್ (7) ಮೃತರು. ಸ್ಥಳದಲ್ಲಿ ಮೃತ ಮಕ್ಕಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌. ಮಕ್ಕಳನ್ನು ಕಳೆದುಕೊಂಡು ಆಘಾತಗೊಂಡ ಪಾಲಕರು ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.