ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Sagara Bus Accident: ಸಾಗರ ಬಳಿ ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್; 8 ಮಹಿಳೆಯರಿಗೆ ಗಾಯ

ದಾವಣಗೆರೆಯ ನಿಟ್ಟುವಳ್ಳಿಯ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಪ್ರವಾಸಕ್ಕೆ ಬಂದಿದ್ದರು. ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳ ದರ್ಶನ ಪಡೆದು ಬಳೆ ಪದ್ಮಾವತಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಸಾಗರ ತಾಲೂಕಿನ ಹೊಸಕೊಪ್ಪ ಬಳಿ ಅಪಘಾತ ಸಂಭವಿಸಿದೆ.

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ರಸ್ತೆ ಬದಿಯ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ (Sagara Bus Accident) ತಾಲೂಕಿನ ಹೊಸಕೊಪ್ಪ ಸಮೀಪದ ಹಲಕೊಟ್ಟಿಗೆ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ 7-8 ಜನರಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.

ದಾವಣಗೆರೆಯ ನಿಟ್ಟುವಳ್ಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 24 ಮಹಿಳೆಯರು ಕೊಲ್ಲೂರು- ಸಿಗಂದೂರು- ಬಳೆ ಪದ್ಮಾವತಿ ದೇವಸ್ಥಾನಕ್ಕೆ ಬಂದಿದ್ದರು. ಬಳೆ ಪದ್ಮಾವತಿ ದೇವಾಲಯಕ್ಕೆ ತೆರಳುವ ಮಾರ್ಗದ ಹಲಕೊಟ್ಟಿಗೆ ಕ್ರಾಸ್ ಬಳಿ ತೆರಳುತ್ತಿದ್ದಾಗ ಬಸ್‌ನ ಬ್ರೇಕ್ ಫೇಲ್ ಆಗಿ ಮನೆ ಮೇಲೆ ಪಲ್ಟಿಯಾಗಿದೆ.

ಮನೆ ಮೇಲೆ ಬಸ್ ಪಲ್ಟಿಯಾದ ಪರಿಣಾಮ ಮನೆಗೆ ಹಾನಿಯಾಗಿದೆ. ಗಾಯಾಳುಗಳಿಗೆ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾರವಾರದಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್; 12 ಮಂದಿಗೆ ಗಾಯ

ಕಾರವಾರ: ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಮಾಸ್ತಿಹಳ್ಳದ ಬಳಿ ಗುರುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ 12 ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಬಸ್ ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಅದೃಷ್ಟವಶಾತ್ ಯಾವುದೇ ಭಾರಿ ಪ್ರಾಣಹಾನಿ ಸಂಭವಿಸಿಲ್ಲ.

ಮಾಸ್ತಿಹಳ್ಳದ ಸಮೀಪದ ಕಡಿದಾದ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಯಿಂದ ಕೆಳಕ್ಕೆ ಉರುಳಿ ಕಂದಕಕ್ಕೆ ಬಿದ್ದಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಮನೆಗೆ ನುಗ್ಗಿ ಬಂದೂಕು ತೋರಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಮುಸುಕುಧಾರಿ; ಮತ್ತೆ ಮುನ್ನೆಲೆಗೆ ಬಂದ ಮಹಿಳಾ ಸುರಕ್ಷತೆಯ ಚರ್ಚೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸ್ ಠಾಣೆಯ ಪಿಎಸ್‌ಐ ಖಾದರ್ ಹಾಗೂ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕಂದಕದಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ರಕ್ಷಿಸಿದ ಪೊಲೀಸರು, ಹೆಚ್ಚಿನ ಚಿಕಿತ್ಸೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.