ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ರಸ್ತೆಯಲ್ಲಿ ಬಿದ್ದವರ ಮೇಲೆ ಟ್ರಾಕ್ಟರ್‌ ಹರಿದು ಇಬ್ಬರು ಯುವಕರ ಸಾವು

ಎರಡು ಬೈಕುಗಳು (Bike Accident) ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಯಲ್ಲಿ ಬಿದ್ದವರ ಮೇಲೆ ಟ್ರಾಕ್ಟರ್‌ ಹರಿದು ಇಬ್ಬರು ಯುವಕರ ಸಾವು

ಟ್ರಾಕ್ಟರ್‌ ಹರಿದು ಯುವಕರಿಬ್ಬರ ಸಾವು -

ಹರೀಶ್‌ ಕೇರ
ಹರೀಶ್‌ ಕೇರ Dec 7, 2025 12:19 PM

ಶಿವಮೊಗ್ಗ, ಡಿ.07: ಬೈಕ್‌ ಅಪಘಾತವಾಗಿ (Road Accident) ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರ ಮೇಲೆ ಟ್ರಾಕ್ಟರ್ ಹರಿದು ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivaಜಿಲ್ಲೆಯ ಆಯನೂರು– ಹಾರನಹಳ್ಳಿ ರಸ್ತೆಯಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ಆಕೀಬ್ (25) ಮತ್ತು ಚಾಂದ್ ಪೀರ್ (18) ಮೃತ ದುರ್ದೈವಿಗಳು.

ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿಗೆ ಲಾರಿ ಡಿಕ್ಕಿ, ಐವರು ಅಯ್ಯಪ್ಪ ಭಕ್ತರ ದುರ್ಮರಣ

ಚೆನ್ನೈ: ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ ವಂಗರ ರಾಮಕೃಷ್ಣ (51), ಮಾರ್ಪಿನ ಅಪ್ಪಲನಾಯ್ಡು (33), ರಾಮು (50), ಮರುಪಲ್ಲಿಯ ಬಂಡಾರು ಚಂದ್ರರಾವ್ (35) ಎಂದು ಗುರುತಿಸಲಾಗಿದೆ.

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕ ಮೆದುಳಿನ ರಕ್ತಸ್ರಾವದಿಂದ ಸಾವು

ನಿನ್ನೆ ಬೆಳಗ್ಗಿನ ಜಾವ 2:15ಕ್ಕೆ ಘಟನೆ ನಡೆದಿದ್ದು, ಘಟನೆಯಲ್ಲಿ ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ರಾಮನಾಥಪುರಂ ಸರ್ಕಾರಿ ಆಸ್ಪತ್ರೆಗೆ (Government Hospital) ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ವಿಜಯನಗರ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳ ಅಯ್ಯಪ್ಪ ಭಕ್ತರು ಎಂದು ಗುರುತಿಸಲಾಗಿದೆ. ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದು ರಾಮೇಶ್ವರಂ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ರಸ್ತೆ ಅಪಘಾತದ ಬಗ್ಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಗೃಹ ಸಚಿವೆ ಅನಿತಾ ಅಧಿಕಾರಿಗಳನ್ನ ವಿಚಾರಿಸಿ ಮಾಹಿತಿ ಪಡೆದಿದ್ದಾರೆ.