Sagara Accident: ಸಾಗರ ಸಮೀಪ ಭೀಕರ ಅಪಘಾತ; ಕ್ಯಾಂಟರ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ
ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಆನಂದಪುರದಿಂದ ಸಾಗರಕ್ಕೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಆನಂದಪುರದ ಕಡೆಗೆ ಬರುತ್ತಿದ್ದ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರ ಸಮೀಪದ ಉಳ್ಳೂರು ಬಳಿ ಕಾರು ನುಜ್ಜುಗುಜ್ಜಾಗಿರುವುದು. -
ಶಿವಮೊಗ್ಗ: ಜಿಲ್ಲೆಯ ಸಾಗರ ಸಮೀಪದ ಉಳ್ಳೂರು ಗ್ರಾಮದ ಮುಂಡಿಗೆಮಟ್ಟೆ ರಸ್ತೆಯ ತಿರುವಿನಲ್ಲಿ ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ (Sagara Accident) ಕಾರಿನಲ್ಲಿದ್ದ ಯುವತಿ ಹಾಗೂ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಆನಂದಪುರದಿಂದ ಸಾಗರಕ್ಕೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಆನಂದಪುರದ ಕಡೆಗೆ ಬರುತ್ತಿದ್ದ ಕ್ಯಾಂಟರ್ ನಡುವೆ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ.
ಮೃತರನ್ನು ಪವಿತ್ರ (25) ತಂದೆ ಚನ್ನಬಸವಪ್ಪ, ಸೊರಬ ತಾಲೂಕಿನ ಮಳಲಗದ್ದೆ ಗ್ರಾಮದ ನಿವಾಸಿ ಹಾಗೂ ವೀರೇಶ್ (25) ತಂದೆ ಸತೀಶ್, ಸಾಗರ ತಾಲೂಕಿನ ತಡಗಳಲಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಪವಿತ್ರ ಹಾಗೂ ವೀರೇಶ್ ಇಬ್ಬರೂ ಸ್ನೇಹಿತರಾಗಿದ್ದು, ಭಾನುವಾರ ಸಂಜೆ ಆನಂದಪುರದಲ್ಲಿ ಸ್ನೇಹಿತರೊಬ್ಬರ ಕಾರ್ಯಕ್ರಮಕ್ಕೆ ಹಾಜರಾಗಿ, ವಾಪಸ್ ಸಾಗರಕ್ಕೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಲ ಮಂಡಳಿ ಪೈಪ್‌ಲೈನ್ ಚೇಂಬರ್‌ಗೆ ಬಿದ್ದು ಬಾಲಕ ಸಾವು

ಬೆಂಗಳೂರು: ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಬಾಲಕ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.
ರಜನಿಕಾಂತ್ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದ. ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು.
ಪಾರ್ಕಿಂಗ್ ವಿಚಾರ ಕೊಲೆಯಲ್ಲಿ ಅಂತ್ಯ, ಆಟೋ ನಿಲ್ಲಿಸುವ ಕುರಿತ ತಗಾದೆ ಸ್ನೇಹಿತನ ಜೀವ ತೆಗೆಯಿತು
ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್‌ನಲ್ಲಿ ಶವ ಪತ್ತೆಯಾಗಿದೆ. ಕಳೆದ ಹಲವು ದಿನಗಳಿಂದ ಸಂಪನ್ನು ಜಲಮಂಡಳಿ ಮುಚ್ಚದೇ ಬಿಡಲಾಗಿತ್ತು. ಬಾಲಕ ಓಡಾಡುವ ವೇಳೆ ಸಂಪ್‌ಗೆ ಬಿದ್ದು ಸಾವನ್ನಪ್ಪಿದ್ದಾನೆ. ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್‌ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.