ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Caste Census: ಜಾತಿ ಸಮೀಕ್ಷೆ ಅವೈಜ್ಞಾನಿಕ; ವರದಿ ತಿರಸ್ಕಾರಕ್ಕೆ ಹವ್ಯಕ ಮಹಾಸಭಾ ಆಗ್ರಹ

Caste Census: ಹವ್ಯಕ ಬ್ರಾಹ್ಮಣರ ಜನಸಂಖ್ಯೆ ಕೇವಲ 85 ಸಾವಿರ ಎಂದು ಜಾತಿ ಸಮೀಕ್ಷೆಯ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ಹಲವಾರು ವರದಿಯ ಮೂಲಕ ಮಹಾಸಭೆಯ ಗಮನಕ್ಕೆ ಬಂದಿದೆ. ಇದು ಸತ್ಯಕ್ಕೆ ದೂರವಾದ ವಿಚಾರವಾಗಿದ್ದು, ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಶ್ರೀ ಅಖಿಲ ಹವ್ಯಕ ಮಹಾಸಭೆಯು ಈ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸುತ್ತದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ತಿಳಿಸಿದ್ದಾರೆ.

ಜಾತಿ ಸಮೀಕ್ಷೆ ಅವೈಜ್ಞಾನಿಕ; ವರದಿ ತಿರಸ್ಕಾರಕ್ಕೆ ಹವ್ಯಕ ಮಹಾಸಭಾ ಆಗ್ರಹ

ಶ್ರೀ ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ.

Profile Siddalinga Swamy Apr 18, 2025 10:05 PM

ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯ ಕುರಿತಾಗಿ ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ಹಲವಾರು ವರದಿಗಳು ಪ್ರಕಟವಾಗುತ್ತಿದ್ದು, ವರದಿಯ ಪ್ರಕಾರ ಹವ್ಯಕ ಬ್ರಾಹ್ಮಣರ ಜನಸಂಖ್ಯೆ ಕೇವಲ 85 ಸಾವಿರ ಎಂದು ಮಾಧ್ಯಮಗಳ ಮೂಲಕ ಮಹಾಸಭೆಯ ಗಮನಕ್ಕೆ ಬಂದಿದೆ. ಇದು ಸತ್ಯಕ್ಕೆ ದೂರವಾದ ವಿಚಾರವಾಗಿದ್ದು, ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಶ್ರೀ ಅಖಿಲ ಹವ್ಯಕ ಮಹಾಸಭೆಯು ಈ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸುತ್ತದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹವ್ಯಕ ಬ್ರಾಹ್ಮಣರು ರಾಜ್ಯದ ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಬಲ ಸಮಾಜವಾಗಿದೆ. ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದನ್ನೂ ನಾವು ಗಮನಿಸಬಹುದಾಗಿದ್ದು, ಹವ್ಯಕ ಸಮಾಜದ ಜನಸಂಖ್ಯೆ ಸುಮಾರು 5 ಲಕ್ಷಕ್ಕೂ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಈ ಜಾತಿ ಸಮೀಕ್ಷೆಯನ್ನು ಖಂಡಿಸುತ್ತಾ, ಅವೈಜ್ಞಾನಿಕ ಸಮೀಕ್ಷೆಯನ್ನು ತಿರಸ್ಕರಿಸುವಂತೆ ಹವ್ಯಕ ಮಹಾಸಭೆ ತೀವ್ರವಾಗಿ ಆಗ್ರಹಿಸುತ್ತದೆ.

ಈ ಸುದ್ದಿಯನ್ನೂ ಓದಿ | Karnataka Weather: ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಶಿವಮೊಗ್ಗ, ಬೀದರ್ ಸೇರಿದಂತೆ ಕೆಲವಾರು ಸಿ.ಇ.ಟಿ ಪರೀಕ್ಷಾ ಕೇಂದ್ರಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತುಂಡರಿಸಿರುವ ಆಘಾತಕಾರಿ ಘಟನೆಗಳು ವರದಿಯಾಗಿವೆ. ಬ್ರಹ್ಮೋಪದೇಶದ ಸಮಯದಲ್ಲಿ ಜನಿವಾರವನ್ನು ಧರಿಸಿ, ಗಾಯತ್ರೀ ಮಂತ್ರೋಪದೇಶವನ್ನು ಪಡೆಯುವುದು ಬ್ರಾಹ್ಮಣ ಹಕ್ಕು ಹಾಗೂ ಕರ್ತವ್ಯವಾಗಿದೆ. ಜನಿವಾರಕ್ಕೆ ಧಾರ್ಮಿಕ ಮಹತ್ವವಿದ್ದು, ಪರಮಪವಿತ್ರವಾದ ಜನಿವಾರವನ್ನು ಸಿ.ಇ.ಟಿ ಕೇಂದ್ರಗಳಲ್ಲಿ ತುಂಡರಿಸಿರುವುದು ಆತಂಕಕಾರಿಯಾಗಿದೆ. ಇದು ಸಂವಿಧಾನ ದತ್ತವಾದ ಧಾರ್ಮಿಕ ಹಕ್ಕನ್ನು ಮೊಟಕುಗೊಳಿಸುವ ಕೃತ್ಯವಾಗಿದೆ. ಹವ್ಯಕ ಮಹಾಸಭೆ ಈ ಘಟನೆಗಳನ್ನು ಖಂಡಿಸುತ್ತದೆ. ಘಟನೆಗೆೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಕುರಿತಾಗಿ ಸರ್ಕಾರದಿಂದ ಯಾವುದಾದರೂ ಸೂಚನೆಗಳಿದ್ದಲ್ಲಿ ಅದನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಶ್ರೀ ಅಖಿಲ ಹವ್ಯಕ ಮಹಾಸಭೆ ಆಗ್ರಹಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.