ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SK Shyam Sundar: ಹಿರಿಯ ಪತ್ರಕರ್ತ ಶ್ಯಾಮ್‌ಸುಂದರ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ ಶ್ಯಾಮ್‌ಸುಂದರ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಎಸ್‌ಕೆ ಶ್ಯಾಮಸುಂದರ್

ಹರೀಶ್‌ ಕೇರ ಹರೀಶ್‌ ಕೇರ Apr 15, 2025 12:41 PM

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ, ಕನ್ನಡ ಡಿಜಿಟಲ್ ಮಾಧ್ಯಮದ (Kannada Digital Media) ಮೂಲಪುರುಷರಲ್ಲಿ ಒಬ್ಬರಾಗಿದ್ದ ಎಸ್​​ಕೆ ಶ್ಯಾಮ್‌ಸುಂದರ್ (SK Shyam Sundar) ಸೋಮವಾರ ರಾತ್ರಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಶ್ಯಾಮ್‌ಸುಂದರ್ ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಅವರು ಹೃದಯಾಘಾತದಿಂದ (Heart Attack) ಇಹಲೋಕ ತ್ಯಜಿಸಿದರು. ಶ್ಯಾಮ್‌ಸುಂದರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತೀವ್ರ ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿಗಳು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.



ನನ್ನ ಬಹುಕಾಲದ ಸ್ನೇಹಿತ, ಸಹೋದ್ಯೋಗಿ, ಒಡನಾಡಿ, ಎಸ್.ಕೆ ಶ್ಯಾಮ್‌ಸುಂದರ ಇಂದು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದವರು. ನಮ್ಮೆಲ್ಲರ ಪಾಲಿಗೆ ಶಾಮಿ ಎಂದೇ ಪ್ರೀತಿಪಾತ್ರರಾಗಿದ್ದ ಶಾಮಸುಂದರ, ನಾನು ಕಂಡ ಅಪರೂಪದ ಪತ್ರಕರ್ತರಲ್ಲಿ ಒಬ್ಬರು. ಶ್ಯಾಮ್ ಒಬ್ಬ ಅಪರೂಪದ ಹರಟೆಕೋರ. ನಾವು ತಿಂಗಳುಗಟ್ಟಲೆ ನಿರಂತರ ಹರಟೆ ಹೊಡೆದವರು ಎಂದು ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ಎಸ್.ಕೆ. ಶ್ಯಾಮಸುಂದರ್ ಸುಮಾರು 39 ವರ್ಷಗಳ ಕಾಲ ಕನ್ನಡ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಅವರು ಕನ್ನಡ ಪತ್ರಿಕೋದ್ಯಮಕ್ಕೆ, ಅದರಲ್ಲೂ ವಿಶೇಷವಾಗಿ ಡಿಜಿಟಲ್ ಪತ್ರಿಕೋದ್ಯಮ ವಲಯಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಕನ್ನಡ ಡಿಜಿಟಲ್ ಮಾಧ್ಯಮ ಲೋಕದ ಭೀಷ್ಮ ಎಂದೇ ಖ್ಯಾತರಾಗಿದ್ದ ಅವರು ಅನೇಕ ಪ್ರಶಸ್ತಿಗಳಿಗೂ ಭಾಜನರಾಗಿದ್ದರು. 1991ರಿಂದ 2000ರ ವರೆಗೆ ಕನ್ನಡ ಪ್ರಭ ದಿನಪತ್ರಿಕೆಯ ಪುರವಣಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ದಿನಪತ್ರಿಕೆಯಲ್ಲಿ ವರದಿಗಾರನಾಗಿ ಪತ್ರಿಕೋದ್ಯಮ ಆರಂಭಿಸಿದ ಶ್ಯಾಮ್ ಸುಂದರ್ ಬಳಿಕ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಸಂಪಾದಕರಾಗಿ ಬೆಳೆದಿದ್ದರು. ಒನ್ ಇಂಡಿಯಾ ಕನ್ನಡ ಸುದ್ದಿ ಮಾಧ್ಯಮದ ಸಂಪಾದಕರಾಗಿ ಮಹತ್ವದ ಸೇವೆ ಸಲ್ಲಿಸಿದರು. 2018ರಿಂದ 2022ರ ವರೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಜಿಟಲ್ ವಿಭಾಗದ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

ಎಸ್​​ಕೆ ಶ್ಯಾಮಸುಂದರ್ ಸುದ್ದಿ ವಾಹಿನಿಗಳ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತಿದ್ದರು. ಎದ್ದೇಳು ಮಂಜುನಾಥ ಸಿನಿಮಾದಲ್ಲಿಯೂ ನಟಿಸಿದ್ದರು. ಮೂಲತಃ ಚಿತ್ರದುರ್ಗ ಜಿಲ್ಲೆ ಜಾನಕೊಂಡದವರಾಗಿದ್ದ ಶ್ಯಾಮಸುಂದರ್, ಬೆಂಗಳೂರಿನಲ್ಲಿ ವಾಸವಿದ್ದರು. ಅವಿವಾಹಿತರಾಗಿದ್ದರು. ಅವರು ಏಷ್ಯನ್ ಕಾಲೇಜ್‌ ಆಫ್ ಜರ್ನಲಿಸಂನಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: SK Shyamsundar: ಹಿರಿಯ ಪತ್ರಕರ್ತ ಶ್ಯಾಮ್‌ಸುಂದರ್‌ ಇನ್ನಿಲ್ಲ