ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder conspiracy: ಎಂಎಲ್‌ಸಿ ರಾಜೇಂದ್ರ ಕೊಲೆಗೆ ಸಂಚು; ಪ್ರಮುಖ ಆರೋಪಿ ಸೋಮ ಪೊಲೀಸರಿಗೆ ಶರಣು

Murder conspiracy: ರಾಜೇಂದ್ರ ಕೊಲೆಗೆ ಸಂಚು ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದಿಂದ ಆರೋಪಿಗಳಾದ ಭರತ್, ಯತೀಶ್, ಪುಷ್ಪಾ ಮತ್ತು ಯಶೋದ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸಿದ್ದರು. ಇದೀಗ ಸೋಮ, ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ.

ಎಂಎಲ್‌ಸಿ ರಾಜೇಂದ್ರ ಕೊಲೆಗೆ ಸಂಚು; ಪ್ರಮುಖ ಆರೋಪಿ ಸೋಮ ಪೊಲೀಸರಿಗೆ ಶರಣು

Profile Prabhakara R Apr 2, 2025 9:40 PM

ತುಮಕೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ಎಂಎಲ್‌ಸಿ ರಾಜೇಂದ್ರ ಅವರ ಕೊಲೆಗೆ ಸಂಚು ಪ್ರಕರಣದ (Murder conspiracy) ಪ್ರಮುಖ ಆರೋಪಿ, ರೌಡಿಶೀಟರ್ ಸೋಮ, ಎ 3 ಅಮಿತ್ ಬುಧವಾರ ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ. ಕೊಲೆ ಸಂಚಿನ ವಿಷಯ ಹೊರ ಬಂದ ನಂತರ ಪ್ರಮುಖ ಆರೋಪಿ ಸೋಮ ತಲೆ ಮರೆಸಿಕೊಂಡಿದ್ದ. ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡ ಆರೋಪಿಗಳಾದ ಭರತ್, ಯತೀಶ್, ಪುಷ್ಪಾ ಮತ್ತು ಯಶೋದ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸಿದ್ದರು. ಇದೀಗ ಸೋಮ, ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ.

ಪ್ರಮುಖ ಆರೋಪಿ ಸೋಮನಿಗೆ 5 ಲಕ್ಷ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಮನು ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ನನ್ನನ್ನು ಕೊಲೆ ಮಾಡಲು 70 ಲಕ್ಷಕ್ಕೆ ಸುಪಾರಿ ನೀಡಲಾಗಿದೆ. ಮುಂಗಡವಾಗಿ 5 ಲಕ್ಷ ಕೊಡಲಾಗಿದೆ. ಈ ಬಗ್ಗೆ ಆಡಿಯೊ ಲಭ್ಯವಾಗಿದ್ದು, ಪರಿಶೀಲಿಸಿ ತನಿಖೆ ನಡೆಸಬೇಕು ಎಂದು ರಾಜೇಂದ್ರ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಆರೋಪಿಗಳಾದ ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ | Self Harming: ವಿಧಾನಸೌಧದ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

ಆರೋಪಿ ಗುಂಡನ ಪ್ರೇಯಸಿ ಪೊಲೀಸರ ವಶಕ್ಕೆ

ರಾಜೇಂದ್ರ ಕೊಲೆ ಯತ್ನ (Murder Conspiracy) ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಮಂಗಳವಾರ ಆರೋಪಿ ಗುಂಡನ ಲವರ್ ಯಶೋಧಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಪ್ರಮುಖ ಆರೋಪಿ ಸೋಮ ಪೊಲೀಸರಿಗೆ ಶರಣಾಗಿದ್ದಾನೆ.

ನಟಿ ರನ್ಯಾ ರಾವ್‌ಗೆ ಮತ್ತೊಂದು ಶಾಕ್‌; ಡಿವೋರ್ಸ್‌ ಕೊಡಲು ಮುಂದಾದ ಪತಿ!

Ranya Rao (6)

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ಮದುವೆಯಾಗಿ ಒಂದೇ ತಿಂಗಳಲ್ಲಿ ದಂಪತಿ ನಡುವೆ ಭಿನ್ನಾಭಿಪ್ರಾಯಗಳಾಗಿತ್ತು. ಹೀಗಾಗಿ ಪತಿ-ಪತ್ನಿ ದೂರವಾಗಿಯೇ ಇದ್ದರು ಎನ್ನಲಾಗಿದೆ. ಇದೀಗ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಬೇಸತ್ತ ಪತಿ ಜತಿನ್ ಹುಕ್ಕೇರಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷ ನವೆಂಬರ್ 27 ರಂದು ರನ್ಯಾ ಮತ್ತು ಜತಿನ್ ಮದುವೆಯಾಗಿದ್ದರು. ಇತ್ತೀಚೆಗೆ ರನ್ಯಾ ದುಬೈನಿಂದ ಚಿನ್ನ ಅಕ್ರಮ ಸಾಗಾಣಿಕೆ ಮಾಡುವಾಗ ಸಿಕ್ಕಿಬಿದ್ದಿದ್ದರು. ಇದೀಗ ರನ್ಯಾ ರಾವ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರ ನಡುವೆ ಅವರ ಪತಿ ಜತಿನ್ ರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಆದರೆ ಪ್ರಕರಣದಲ್ಲಿ ಜತಿನ್ ಪಾತ್ರವಿಲ್ಲ ಎಂದು ತಿಳಿದುಬಂದಿತ್ತು. ಈ ನಡುವೆ ತನ್ನನ್ನು ಬಂಧಿಸದಂತೆ ಜತಿನ್ ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ತಂದಿದ್ದರು.

ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಕ್ಕಿಬಿದ್ದ ಬಳಿಕ ಬೇಸತ್ತ ಪತಿ ಜತಿನ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯದಲ್ಲೇ ಅವರು ನ್ಯಾಯಾಲಯಕ್ಕೆ ತಮ್ಮ ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಬ್ಬರೂ ಭೇಟಿಯಾಗಿದ್ದರು. ಒಂದೇ ತಿಂಗಳಿಗೆ ಮದುವೆಯೂ ಆಗಿತ್ತು. ಈಗ ನಾಲ್ಕೇ ತಿಂಗಳಿಗೆ ವಿಚ್ಛೇದನ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Ranya Rao case: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ, ಕಾರಣ ಇಲ್ಲಿದೆ