ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Insurance fraud: ರಾಜ್ಯದಲ್ಲಿ ವಿಮೆ ವಂಚನೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ವಿಮೆ ಕಂಪನಿಗಳ ವಿರುದ್ಧದ ವಂಚನೆಪೂರಿತ ಕ್ಲೇಮ್‌ಗಳಿಗೆ ಸಂಬಂಧಿಸಿದಂತೆ ದೇಶದಾದ್ಯಂತ ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ ಎಸ್‌ಎಲ್‌ಪಿ (ಸಿವಿಲ್) ಸಂಖ್ಯೆ 5582/2023ರ ತೀರ್ಪಿನಲ್ಲಿ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಎಸ್‌ಐಟಿ ರಚಿಸಲಾಗಿದೆ.

ಬೆಂಗಳೂರು, ಸೆ.23: ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) (SIT) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಗೃಹ ಇಲಾಖೆ ತಿಳಿಸಿದೆ. ವಿಮೆ ಕಂಪನಿಗಳ ವಿರುದ್ಧದ ವಂಚನೆಪೂರಿತ ಕ್ಲೇಮ್‌ಗಳಿಗೆ ಸಂಬಂಧಿಸಿದಂತೆ ದೇಶದಾದ್ಯಂತ ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ ಎಸ್‌ಎಲ್‌ಪಿ (ಸಿವಿಲ್) ಸಂಖ್ಯೆ 5582/2023ರ ತೀರ್ಪಿನಲ್ಲಿ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಎಸ್‌ಐಟಿ ರಚಿಸಲಾಗಿದೆ.

ಗೃಹ ಇಲಾಖೆಯ ಸೆ.22, 2026ರ ಸರ್ಕಾರಿ ಆದೇಶದಂತೆ ರಚಿಸಲಾಗಿರುವ ತಂಡದಲ್ಲಿ ಪೊಲೀಸ್ ಮಹಾನಿರೀಕ್ಷಕರ ಹುದ್ದೆಯ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ಹಾಗೂ ಸಿಐಡಿಯಿಂದ ನಾಮನಿರ್ದೇಶನಗೊಳ್ಳುವ ಪೊಲೀಸ್ ಅಧೀಕ್ಷಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಇದಲ್ಲದೆ, ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ನಾಮನಿರ್ದೇಶನ ಮಾಡುವ ಒಬ್ಬ ಉಪ ಪೊಲೀಸ್ ಅಧೀಕ್ಷಕರು ಹಾಗೂ ಮೂವರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು ತಂಡದ ಸದಸ್ಯರಾಗಿರುತ್ತಾರೆ.

ಈ ವಿಶೇಷ ತನಿಖಾ ತಂಡಕ್ಕೆ ಕರ್ನಾಟಕ ರಾಜ್ಯಾದ್ಯಂತ ವ್ಯಾಪ್ತಿ ಕಲ್ಪಿಸಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023ರ ಸೆಕ್ಷನ್ 2(1)(u) ರ ಅಡಿಯಲ್ಲಿ ಪೊಲೀಸ್ ಠಾಣೆ ಎಂದು ಘೋಷಿಸಲಾಗಿದೆ. ತನಿಖಾ ತಂಡದ ಅಧಿಕಾರಿಗಳಿಗೆ ಸೆಕ್ಷನ್ 193ರ ಅನ್ವಯ ಸಂಬಂಧಪಟ್ಟ ನ್ಯಾಯಾಲಯಗಳಿಗೆ ಅಂತಿಮ ವರದಿ ಸಲ್ಲಿಸುವ ಅಧಿಕಾರವನ್ನೂ ನೀಡಲಾಗಿದೆ.

ಎಸ್‌ಐಟಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ), ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು ಅವರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಲಿದೆ. ವಿಮಾ ಕಂಪನಿಗಳಿಂದ ಸ್ವೀಕರಿಸುವ ವಂಚನೆಪೂರಿತ ಕ್ಲೇಮ್‌ಗಳಿಗೆ ಸಂಬಂಧಿಸಿದ ಎಲ್ಲ ದೂರುಗಳನ್ನು ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ಎಸ್‌ಐಟಿಗೆ ವರ್ಗಾಯಿಸಲಿದ್ದಾರೆ. ಅಗತ್ಯವಿರುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸಹ ಒದಗಿಸಲಾಗುತ್ತದೆ.‌

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಗೊಳಿಸಿ: ಸಿದ್ದರಾಮಯ್ಯ ಆಗ್ರಹ

ವಿಮೆ ಕಂಪನಿಗಳಿಂದ ಸ್ವೀಕರಿಸುವ ಎಲ್ಲ ವಂಚನೆ ದೂರುಗಳನ್ನು ಎಸ್‌ಐಟಿ ಸಮಗ್ರವಾಗಿ ತನಿಖೆ ನಡೆಸಿ, ತನಿಖಾ ವರದಿಗಳನ್ನು ಯಾವುದೇ ವಿಳಂಬವಿಲ್ಲದೆ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು. ತನಿಖೆಯ ಪ್ರಗತಿಯನ್ನು ಸಹ ನಿಯಮಿತವಾಗಿ ವರದಿ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.