ಬೆಂಗಳೂರು, ಡಿ.15: ಕ್ರಿಸ್‌ಮಸ್ (christmas) ಹಾಗೂ ಹೊಸ ವರ್ಷಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ರೈಲ್ವೆ ಇಲಾಖೆ (indian railway) ಸಿಹಿಸುದ್ದಿ ನೀಡಿದ್ದು ಸೌತ್ ವೆಸ್ಟರ್ನ್ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಹುಬ್ಬಳ್ಳಿ, ಬೆಂಗಳೂರು ಮತ್ತು ವಿಜಯಪುರವನ್ನು ಸಂಪರ್ಕಿಸುವ ವಿಶೇಷ ರೈಲು ಸಂಚಾರ ನಡೆಸಲಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಕಲ್ಪಿಸಿದೆ. ರೈಲು ಸಂಖ್ಯೆ 07379 ಮಧ್ಯಾಹ್ನ 12ಕ್ಕೆ ಹುಬ್ಬಳ್ಳಿಯಿಂದ ಹೊರಟು ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ಮೂಲಕ ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.
ರೈಲು ಸಂಖ್ಯೆ 06277 ರಾತ್ರಿ 9.50ಕ್ಕೆ ಯಶವಂತಪುರದಿಂದ ಹೊರಟು ತುಮಕೂರು, ಅರಸೀಕೆರೆ, ದಾವಣಗೆರೆ, ಹರಿಹರ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ಮೂಲಕ ಬೆಳಿಗ್ಗೆ 9ಕ್ಕೆ ವಿಜಯಪುರ ತಲುಪಲಿದೆ.
Ashwini Vaishnaw: 15,767 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ
ಜಿಬಿಎ ಚುನಾವಣೆ; ಇಂದಿನಿಂದ ಅರ್ಜಿ ಸ್ವೀಕಾರ
ಬೆಂಗಳೂರು: "ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
"ನೆನ್ನೆ ಸಚಿವರ ಜತೆ ಚರ್ಚಿಸಿ ಈ ಅರ್ಜಿ ಜತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ" ಎಂದು ಮಾಹಿತಿ ನೀಡಿದರು.
ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ:
ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, "ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು.
ಜಿ.ಸಿ.ಚಂದ್ರಶೇಖರ್ ಅವರು ಬಿಎಲ್‌ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ ಎಂದರು.