SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಪ್ರವೇಶ ಪತ್ರ ಬಿಡುಗಡೆ
SSLC Exam 2025: ಮಾರ್ಚ್ 10ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಪ್ರವೇಶ ಪತ್ರವನ್ನು ಅಪ್ ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಲು ಸೂಚಿಸಲಾಗಿದೆ.


ಬೆಂಗಳೂರು: ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ನಿಗದಿಯಾಗಿರುವ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಬಿಡುಗಡೆ ಮಾಡಿದೆ. ಮಾರ್ಚ್ 10ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಪ್ರವೇಶ ಪತ್ರವನ್ನು ಅಪ್ ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸಬೇಕು ಎಂದು ಸೂಚಿಸಲಾಗಿದೆ.
ಪ್ರವೇಶ ಪತ್ರ ವಿತರಣೆಗೆ ಸಂಬಂಧಿಸಿ ಶಾಲೆಗಳಿಗೆ ಕೆಲವೊಂದು ಸೂಚನೆಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿದೆ.
- ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ, ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆಗೆ ಸರಿ ಹೊಂದುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳುವುದು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆಯೊಂದಿಗೆ / ದಾಖಲೆಗಳೊಂದಿಗೆ ಕೂಡಲೇ ಮಂಡಲಿಗೆ ಕಳುಹಿಸಿಕೊಡುವುದು.
- ಒಂದು ವೇಳೆ CCERF ವಿದ್ಯಾರ್ಥಿ CCEPF ಆಗಿದ್ದು, ಅಥವಾ CCEPF ವಿದ್ಯಾರ್ಥಿ CCERF ಆಗಿದ್ದು ಹೀಗೆ ವಿದ್ಯಾರ್ಥಿಯ ವಿಧ ಬದಲಾಗಿದ್ದಲ್ಲಿ ಅಂತಹ ಪುವೇಶ ಪತ್ರಗಳನ್ನು ಸೂಕ್ತ ದಾಖಲೆಗಳ ಸಮರ್ಥನೆಯೊಂದಿಗೆ ತಿದ್ದುಪಡಿಗಾಗಿ ಮಂಡಲಿಗೆ ಕಳುಹಿಸಿಕೊಡುವುದು.
- ಉಲ್ಲೇಖಿತ-2ರ ಅಧಿಸೂಚನೆಯಲ್ಲಿ ವಿವರಿಸಿರುವಂತೆ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ/ವಿನಾಯಿತಿ ನೀಡುವ ಸಂಬಂಧ ಉಪನಿರ್ದೇಶಕರ ಜ್ಞಾಪನದನ್ವಯ ದೈಹಿಕ ಸ್ಥಿತಿ, ಭಾಷಾ ವಿನಾಯಿತಿ, ಬದಲಿ ವಿಷಯಗಳ ಮಾಹಿತಿಗಳು ಪುವೇಶ ಪತ್ರದಲ್ಲಿ ಮುದ್ರಿತವಾಗಿರುವ ಬಗ್ಗೆ ಮುಖ್ಯಶಿಕ್ಷಕರು ಖಚಿತಪಡಿಸಿಕೊಳ್ಳುವುದು. ಇಲ್ಲವಾದಲ್ಲಿ ಉಪನಿರ್ದೇಶಕರ [ಆಡಳಿತ]ರವರ ಜ್ಞಾಪನದ ಪ್ರತಿಯನ್ನು ದೃಢೀಕರಿಸಿ ಸಮರ್ಥನೆಯೊಂದಿಗೆ ಸಂಬಂಧಿಸಿದ ಶಾಖಾಧಿಕಾರಿಗಳಿಗೆ ಕಳುಹಿಸಿ ವಿನಾಯಿತಿ ಪಡೆದುಕೊಳ್ಳುವುದು.
- ವಿದ್ಯಾರ್ಥಿಯ ಭಾವಚಿತ್ರ ಸಹಿ ಮತ್ತು ಇತರ ತಿದ್ದುಪಡಿಗಳಿದಲ್ಲಿ ಸೂಕ್ತ ದಾಖಲೆಗಳೊಂದಿಗೆ ಮಂಡಲಿಗೆ ಸಲ್ಲಿಸಿ ಸರಿಪಡಿಸಿಕೊಳ್ಳುವುದು. ಒಂದು ವೇಳೆ ಸರಿಪಡಿಸಿಕೊಳ್ಳದೇ ಇದ್ದಲ್ಲಿ ಇದರಿಂದ ವಿದ್ಯಾರ್ಥಿಗೆ ಮುಂದೆ ಅಂಕಪಟ್ಟಿಯಲ್ಲಾಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಲಿಯು ಇದರ ಜವಾಬ್ದಾರಿ ಹೊರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. 5.
- ಯಾವುದೇ ವಿದ್ಯಾರ್ಥಿಯ ಭಾವಚಿತ್ರ ಬದಲಾವಣೆಗೆ ಸಂಬಂಧಿಸಿದಂತೆ, ಪರೀಕ್ಷೆಗೆ ಪೂರ್ವದಲ್ಲಿ ಮಾಡಲಾದ ಬದಲಾವಣೆಗಳನ್ನು ಮಾತ್ರ ಮಂಡಲಿಯು ಪರಿಗಣಿಸುತ್ತದೆ. ಪರೀಕ್ಷಾ ನಂತರದಲ್ಲಿ ಬರುವ ವಿದ್ಯಾರ್ಥಿಗಳ ಭಾವಚಿತ್ರ ಬದಲಾವಣೆ ಕುರಿತ ಯಾವುದೇ ಮನವಿಗಳನ್ನು ಮಂಡಲಿ ಪುರಸ್ಕರಿಸುವುದಿಲ್ಲ. ಇದಕ್ಕೆ ಸಂಬಂಧಿಸಿದ ಶಾಲಾ ಮುಖ್ಯಸ್ಥರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ನೇರ ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ಇದಕ್ಕೆ ವ್ಯತಿರಿಕ್ತವಾಗಿ ಬದಲಿ, ವಿದ್ಯಾರ್ಥಿ ಪರೀಕ್ಷೆ ಬರೆಯಲು ಸಹಕರಿಸಿ ಪರೀಕ್ಷಾ ಅವ್ಯವಹಾರದಲ್ಲಿ ಭಾಗಿಯಾಗಿದಲ್ಲಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರ ಮತ್ತು ಶಾಲಾ ಮುಖ್ಯಸ್ಥರ ಮೇಲೆ ಕ್ರಮ `ಜರುಗಿಸಲಾಗುವುದು.
- ಒಂದೇ, ವಿದ್ಯಾರ್ಥಿಗೆ ಎರಡು ನೋಂದಣಿ ಸಂಖ್ಯೆಯ ಪ್ರವೇಶ ಪತ್ರಗಳು ಬಂದಿದ್ದಲ್ಲಿ ಒಂದನ್ನು ಉಳಿಸಿಕೊಂಡು ಮತ್ತೊಂದನ್ನು ರದ್ದುಪಡಿಸಿ ದೃಢೀಕರಿಸಿ ಸೂಕ್ತ ಷರಾದೊಂದಿಗೆ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ವಿಳಾಸಕ್ಕೆ ಹಿಂದಿರುಗಿಸುವುದು.
- CCERF, CCERR, CCEPF & CCEPR ಅಭ್ಯರ್ಥಿಗಳನ್ನು ಸಾಮಾನ್ಯ ಪರೀಕ್ಷಾ ಕೇಂದ್ರಗಳಲ್ಲಿ ಹಂಚಿಕೆ ಮಾಡಲಾಗಿರುತ್ತದೆ. ಶಾಲಾ ಮುಖ್ಯ ಶಿಕ್ಷಕರು ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಈ ಕುರಿತು ಮಾಹಿತಿಯನ್ನು ನೀಡುವುದು.
- ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳಲ್ಲಿ ವಿದ್ಯಾಥಿಯ ಹೆಸರು, ತಂದೆ ಹೆಸರು, ತಾಯಿ ಹೆಸರು, ಭಾವಚಿತ್ರ, ಸಹಿ, ಇತರ ತಿದ್ದುಪಡಿಗಳಿದ್ದಲ್ಲಿ, CCERF ವಿದ್ಯಾರ್ಥಿಗಳಿಗೆ . ಎಸ್.ಎ.ಟಿ.ಎಸ್ ನಲ್ಲಿ ತಿದ್ದುಪಡಿ ಮಾಡಿದ ಪ್ರತಿಯೊಂದಿಗೆ ಮತ್ತು ಇತರೆ ದಾಖಲೆಗಳೊಂದಿಗೆ ಪ್ರತಿ ತಿದ್ದುಪಡಿಗೆ ರೂ.100/- ದಂಡ ಶುಲ್ಕ ಹಾಗೂ ಮಾಧ್ಯಮ ಬದಲಾವಣೆ ಇದಲ್ಲಿ ಪ್ರತಿ ತಿದ್ದುಪಡಿಗೆ ಮಂಡಲಿ ನಿಯಮ 1966ರ Annexure-III ರ ನಿಯಮ 24ರಡಿ ರೂ.500/- ದಂಡ ಶುಲ್ಕವನ್ನು ನೆಫ್ಟ್ ಚಲನ್ ಮೂಲಕ ಪಾವತಿಸಿ ದಿನಾಂಕ: 17.03.2025 ರ ಸಂಜೆ 5.00 ಗಂಟೆಯೊಳಗೆ ಮಂಡಳಿಗೆ ತಲುಪುವಂತೆ ಪ್ರಸ್ತಾವನೆಯನ್ನು ಸಲ್ಲಿಸುವುದು.
- ಯಾವುದೇ ಅಭ್ಯರ್ಥಿಯು ತಿದ್ದುಪಡಿಗಳಿಗಾಗಿ ಮಂಡಲಿಗೆ ಪ್ರಸ್ತಾವನೆ ಸಲ್ಲಿಸಿದ್ದಲ್ಲಿ (ವಿಷಯ, ಮಾಧ್ಯಮ, ದೈಹಿಕ ಸ್ಥಿತಿ, ಭಾವಚಿತ್ರ ಹಾಗೂ ಸಹಿ) ಅಂತಹ ಅಭ್ಯರ್ಥಿಗಳ Updated Final Admission Ticket ಅನ್ನು Final Admission Ticket for 2025 SSLC Exam- 1 (Student Wise) sub-menu ಬಳಸಿ ಡೌನ್ಲೋಡ್ ಮಾಡಿಕೊಳ್ಳಬೇಕು.
- ಮಾನ್ಯತೆ ಪಡೆದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾಯಿಸಲು ಅವಕಾಶವಿರುತ್ತದೆ. ಆದರೆ ಈ ದಿನಾಂಕದವರೆವಿಗೂ ಕೆಲವು ‘ಪ್ರೌಢಶಾಲೆಗಳು 2024-25ನೇ ಸಾಲಿಗೆ ಮಾನ್ಯತೆ ನವೀಕರಣವಾಗದಿರುವುದು ಕಂಡುಬಂದಿದೆ. ಅಂತಹ ಶಾಲೆಗಳಿಗೆ ದಿನಾಂಕ:28.02.2025ರನ್ವಯ ಶಾಲಾ ಆಡಳಿತ ಮಂಡಲಿಗಳಿಗೆ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಲು ದಿನಾಂಕ:20.03.2025ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಮಾ.21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗದಂತೆ ಹಾಗೂ ಅವರ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ಅಂತಹ ಶಾಲೆಗಳ ವಿದ್ಯಾರ್ಥಿಗಳನ್ನು ಪರೀಕ್ಷೆ-1ಕ್ಕೆ ಅದೇ ಶಾಲೆಯಿಂದ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳನ್ನು ಉಲ್ಲೇಖ-1ರಲ್ಲಿ ಸರ್ಕಾರ ಅನುಮತಿಸಿರುವಂತೆ ಅದೇ ಶಾಲೆಗೆ ಬಿಡುಗಡೆ ಮಾಡಲಾಗಿದೆ. ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಣೆಮಾಡುವ ದಿನಾಂಕದೊಳಗೆ ಮಾನ್ಯತೆ ನವೀಕರಣವಾಗದ ಶಾಲೆಗಳು 2024-25ನೇ ಸಾಲಿನ ಮಾನ್ಯತೆ ನವೀಕರಣ ಪ್ರತಿಯನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದು ಸಲ್ಲಿಸಿದ್ದಲ್ಲಿ ಫಲಿತಾಂಶವನ್ನು ಅದೇ ಶಾಲೆಗೆ ಬಿಡುಗಡೆ ಮಾಡಲಾಗುವುದು. ಇಲ್ಲವಾದಲ್ಲಿ ಸದರಿ ಶಾಲೆಗಳ ಪರೀಕ್ಷೆ-1ರ ಫಲಿತಾಂಶವನ್ನು ಉಪನಿರ್ದೇಶಕರು (ಆಡಳಿತ)ರವರು ಸೂಚಿಸುವ ಹತ್ತಿರದ ಸರ್ಕಾರಿ ಅಥವಾ ಮಾನ್ಯತೆ ಪಡೆದ ಶಾಲೆಗಳ ಮುಖಾಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ |