SSLC Exam- 2: ವಿದ್ಯಾರ್ಥಿಗಳೇ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಇಲ್ಲಿದೆ
ಈ ಸಲ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡು ಬರೆಯಲು ಸಾಧ್ಯವಾಗದವರಿಗೆ, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಎರಡು (SSLC exam 2) ಹಾಗೂ ಮೂರನೇ ಪರೀಕ್ಷೆಗಳನ್ನು ನೀಡಲಾಗುತ್ತಿದೆ. ಹೀಗಾಗಿ ಫಲಿತಾಂಶದ ಪ್ರಮಾಣ ಇನ್ನಷ್ಟು ಉತ್ತಮವಾಗುವ ಸಂಭವ ಇದೆ. ವೇಳಾಪಟ್ಟಿ ಇಲ್ಲಿದೆ.


ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (SSLC exam result 2025) ಪ್ರಕಟವಾಗಿದೆ. ಇದೀಗ, ಎರಡನೇ ಪ್ಯತ್ನ ಮಾಡುವವರಿಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಹಾಗೂ 3ರ (SSLC Exam 2) ಹಾಗೂ (SSLC Exam 3) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 26-05-2025ರಿಂದ ಪರೀಕ್ಷೆ ಆರಂಭಗೊಂಡು, ದಿನಾಂಕ 02-06-2025ರವರೆಗೆ ನಡೆಯಲಿದೆ.
ನಿನ್ನೆ ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ರಾಜ್ಯಕ್ಕೆ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96) ಜಿಲ್ಲೆಗಳು ಮೊದಲ ಎರಡು ಸ್ಥಾನ ಕಾಪಾಡಿಕೊಂಡಿವೆ.
ಈ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡು ಬರೆಯಲು ಸಾಧ್ಯವಾಗದವರಿಗೆ, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಎರಡು ಹಾಗೂ ಮೂರನೇ ಪರೀಕ್ಷೆಗಳನ್ನು ನೀಡಲಾಗುತ್ತಿದೆ. ಹೀಗಾಗಿ ಫಲಿತಾಂಶದ ಪ್ರಮಾಣ ಇನ್ನಷ್ಟು ಉತ್ತಮವಾಗುವ ಸಂಭವ ಇದೆ. ವೇಳಾಪಟ್ಟಿ ಕೆಳಗಿದೆ.
ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವಿಷಯವಾರು ವೇಳಾಪಟ್ಟಿ
ದಿನಾಂಕ 26-05-2025ರಂದು ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇ ಆರ್ ಟಿ, ಸಂಸ್ಕೃತ.
ದಿನಾಂಕ 27-05-2025ರಂದು ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
ದಿನಾಂಕ 28-05-2025ರಂದು ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
ದಿನಾಂಕ 29-05-2025ರಂದು ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
ದಿನಾಂಕ 30-05-2025ರಂದು ತೃತೀಯ ಭಾಷೆ- ಹಿಂದಿ ಎನ್ ಸಿ ಇ ಆರ್ ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ ಎಸ್ ಕ್ಯೂ ಎಫ್ ವಿಷಯಗಳಾದಂತ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್.
ದಿನಾಂಕ 31-05-2025ರಂದು ಕೋರ್ ಸಬ್ಜೆಕ್ – ರಾಜ್ಯ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
ದಿನಾಂಕ 02-06-2025ರಂದು ಜೆಟಿಎಸ್ ವಿಷಯಗಳಾದಂತ ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್- IV, ಪ್ರೋಗ್ರಾಮಿಂಗ್ ಇನ್ ANSI C, ಅರ್ಥಶಾಸ್ತ್ರ
ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಫಲಿತಾಂಶ ಪಡೆದಿರುವ ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ದಿನಾಂಕ 03-05-2025ರಿಂದ 10-05-2025ರೊಳಗೆ ನೋಂದಾಯಿಸಿಕೊಳ್ಳಬೇಕು. ಎಸ್ ಎಸ್ ಎಲ್ ಸಿ 2025ರ ಪರೀಕ್ಷೆ-3 ದಿನಾಂಕ 23-06-2025ರಿಂದ 30-06-2025ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.