#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

SSLC preparatory Exam: ಫೆ.25ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯೂ ಏಕ ರೂಪದ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ ನೀಡಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಿದೆ.

ಫೆ.25ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Feb 8, 2025 8:43 AM

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ (SSLC preparatory Exam) ವೇಳಾಪಟ್ಟಿಯನ್ನು (Time Table) ಪ್ರಕಟಿಸಿದ್ದು, ಫೆ.25 ರಿಂದ ಮಾ. 4ರವರೆಗೆ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯೂ ಏಕ ರೂಪದ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ ನೀಡಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಿದೆ.

SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಹೀಗಿದೆ:

ಫೆ.25- ಪ್ರಥಮ ಭಾಷೆ

ಫೆ.27- ಗಣಿತ

ಫೆ.28 – ದ್ವಿತೀಯ ಭಾಷೆ

ಮಾ.1- ತೃತೀಯ ಭಾಷೆ,

ಮಾ.3 – ವಿಜ್ಞಾನ

ಮಾ.4-ಸಮಾಜ ವಿಜ್ಞಾನ

ಎಲ್ಲ ಪರೀಕ್ಷೆಗಳೂ ಬೆಳಗ್ಗೆ 10ಕ್ಕೆ ಆರಂಭವಾಗಲಿದ್ದು, ದ್ವಿತೀಯ ಮತ್ತು ತೃತೀಯ ಭಾಷಾ ಪರೀಕ್ಷೆಗಳು ಮಧ್ಯಾಹ್ನ -1 ಗಂಟೆವರೆಗೆ, ಉಳಿದ ಪರೀಕ್ಷೆಗಳು ಮಧ್ಯಾಹ್ನ 1.15ರವರೆಗೆ ನಡೆಯಲಿವೆ.

ಗ್ರೇಸ್‌ ಅಂಕಗಳು ಇಲ್ಲ: ಶಿಕ್ಷಣ ಸಚಿವರು

ಈ ವರ್ಷ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ (SSLC Exam) ಗ್ರೇಸ್ ಮಾರ್ಕ್ಸ್ (Grace marks) ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Eduation minister Madhu Bangarappa) ಘೋಷಿಸಿದ್ದಾರೆ. ಎಲ್ಲಾ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಜೊತೆ ನಿನ್ನೆ ಅವರು ಸಂವಾದ ನಡೆಸಿದರು.

ನಂತರ ಸುದ್ದಿಗೋಷ್ಠಿ ನಡೆಸಿದ ಅವರು, ಈ ಬಾರಿ ಪಾಸಿಂಗ್ ಗ್ರೇಸ್ ಅಂಕ ಇರೋದಿಲ್ಲ. ಕಳೆದ ಬಾರಿ ಕೊನೆ ಕ್ಷಣದಲ್ಲಿ ವೆಬ್‌ಕಾಸ್ಟಿಂಗ್ ಜಾರಿಗೆ ತಂದ ಕಾರಣ ಗ್ರೇಸ್ ಮಾರ್ಕ್ಸ್ ಕೊಡಲಾಗಿತ್ತು. ಈ ಬಾರಿ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿಯೂ ವೆಬ್‌ಕಾಸ್ಟಿಂಗ್ ಇರಲಿದೆ ಎಂದರು.

SSLC ಪರೀಕ್ಷೆಗೂ ಮುನ್ನ ಶಿಕ್ಷಣ ಸಚಿವರು ಗ್ರೇಸ್ ಮಾರ್ಕ್ಸ್ ಕುರಿತಂತೆ ಸರಕಾರದ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕಳೆದ ವರ್ಷ SSLC ಪರೀಕ್ಷೆಯಲ್ಲಿ 10% ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ಶಿಕ್ಷಣ ಇಲಾಖೆ ವಿವಾದಕ್ಕೀಡಾಗಿತ್ತು.

ಸಂವಾದದಲ್ಲಿ ಎಲ್ಲಾ ಜಿಲ್ಲೆಗಳ ನಿರ್ದೇಶಕರು ಹಾಗೂ ಉಪನಿರ್ದೇಶಕರು, ಶಿಕ್ಷಣ ಇಲಾಖೆ‌ ಅಧಿಕಾರಿಗಳು, ಶಾಲೆಯ ಶಿಕ್ಷಕರು ಹಾಗೂ ಸಾವಿರ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಜಾಬ್‌ಗೆ ಅವಕಾಶ: ಗೃಹ ಸಚಿವರ ಪ್ರತಿಕ್ರಿಯೆ