Heart Failure: ಎದೆನೋವಿನಿಂದ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು
ರಾತ್ರಿ 9.30ರ ಸುಮಾರಿಗೆ ರಾಹುಲ್‌ಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಹುಳಿಯಾರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೇ ರಾಹುಲ್ ಸಾವನ್ನಪ್ಪಿದ್ದಾನೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೃದಯವೈಫಲ್ಯ (Heart Failure) ಮತ್ತಿತರ ಕಾರಣಗಳಿಂದ ತೀರಾ ಚಿಕ್ಕ ವಯಸ್ಸಿನ ಮಕ್ಕಳೂ ಕುಸಿದು ಬಿದ್ದು (children death) ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.
ಸಾಂದರ್ಭಿಕ ಚಿತ್ರ -
ತುಮಕೂರು: ಹೃದಯವೈಫಲ್ಯ (Heart Failure) ಮತ್ತಿತರ ಕಾರಣಗಳಿಂದ ತೀರಾ ಚಿಕ್ಕ ವಯಸ್ಸಿನ ಮಕ್ಕಳೂ ಕುಸಿದು ಬಿದ್ದು (children death) ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ತುಮಕೂರು (Tumkur news) ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ (SSLC student) ಹೃದಯಾಘಾತದಿಂದ (heart attack) ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯನಹಳ್ಳಿ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಬೈರಾಪುರ ಗ್ರಾಮದ ಜಯರಾಂ ಎಂಬುವರ ಪುತ್ರ ರಾಹುಲ್ (16) ಮೃತಪಟ್ಟ ವಿದ್ಯಾರ್ಥಿ.
ರಾತ್ರಿ 9.30ರ ಸುಮಾರಿಗೆ ರಾಹುಲ್‌ಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಹುಳಿಯಾರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೇ ರಾಹುಲ್ ಸಾವನ್ನಪ್ಪಿದ್ದಾನೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಪ್ಪಳದಲ್ಲಿ ಇನ್ನೊಂದು ಶಾಕಿಂಗ್ ಘಟನೆ ಇತ್ತೀಚೆಗೆ ನಡೆದಿತ್ತು. ಅಂಗನವಾಡಿಯಲ್ಲಿ ಆಟ ಆಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿಯೊಬ್ಬಳು (child death) ಸಾವನ್ನಪ್ಪಿದ್ದಳು. ಈ ಘಟನೆ ಕೊಪ್ಪಳ (Koppala news) ಜಿಲ್ಲೆಯ ತಾಲೂಕಿನ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಅಲಿಯಾ ಮೊಹಮ್ಮದ್ ರಿಯಾಜ್ (5) ಎನ್ನುವ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ದೊಟಿಹಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆಯೇ ಅಲಿಯಾ ಮೊಹಮ್ಮದ್ ರಿಯಾಜ್ ಸಾವನ್ನಪ್ಪಿದ್ದಾಳೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕುಸಿದುಬಿದ್ದು ಸಾವನ್ನಪ್ಪಿದ್ದಳು. ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ. ಇನ್ನಷ್ಟು ಇಂಥ ಘಟನೆಗಳು ರಾಜ್ಯದ, ದೇಶದ ನಾನಾ ಕಡೆಗಳಲ್ಲಿ ವರದಿಯಾಗುತ್ತಿವೆ. ಇಂಥ ಆಕಸ್ಮಿಕ ಸಾವುಗಳ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚಿಸಲು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಇದನ್ನೂ ಓದಿ: ರೀಲ್ಸ್ ಗೀಳು ತಂದ ಆಪತ್ತು; ರೈಲು ಡಿಕ್ಕಿಯಾಗಿ ಮೂವರು ಯುವಕರ ಸಾವು